ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಹುಮತ ಕಳೆದುಕೊಂಡ ಬಿಎಸ್ವೈ, ಸಂಭ್ರಮದಲ್ಲಿ ರಜನೀಕಾಂತ್

By Sachhidananda Acharya
|
Google Oneindia Kannada News

ಚೆನ್ನೈ, ಮೇ 20: ಕರ್ನಾಟಕ ವಿಧಾನಸಭೆಯಲ್ಲಿ ಬಹುಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ಶನಿವಾರ ರಾಜೀನಾಮೆ ನೀಡಿದ್ದರು. ಇದು ಪ್ರಜಾತಂತ್ರದ ಗೆಲುವು ಎಂದು ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಬಣ್ಣಿಸಿದ್ದಾರೆ.

"ಕರ್ನಾಟಕದಲ್ಲಿ ನಿನ್ನೆ ನಡೆದ ಘಟನೆ ಪ್ರಜಾಪ್ರಭುತ್ವದ ಗೆಲುವು. ಬಿಜೆಪಿ ಸ್ವಲ್ಪ ಸಮಯ ನೀಡಿ ಎಂದರೆ ರಾಜ್ಯಪಾಲರು 15 ದಿನಗಳ ಸಮಯ ನೀಡಿದ್ದು. ಇದು ಪ್ರಜಾಪ್ರಭುತ್ವದ ವ್ಯಂಗ್ಯ. ತನ್ನ ಆದೇಶದ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಗೆ ನಾನು ಧನ್ಯವಾದ ಹೇಳುತ್ತೇನೆ," ಎಂದು ರಜನೀಕಾಂತ್ ಹೇಳಿದರು.

 What happened in Karnataka was a win for democracy: Rajinikanth

ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಡ್ಯಾನಿಷ್ ಅಲಿಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಡ್ಯಾನಿಷ್ ಅಲಿ

ತಮಿಳುನಾಡಿನಲ್ಲಿ ಮಾತನಾಡಿದ ಅವರು, "2019 ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಪಕ್ಷಕ್ಕೆ ಇನ್ನೂ ಚಾಲನೆ ನೀಡಿಲ್ಲ. ಆದರೆ ನಾವು ಎಲ್ಲದಕ್ಕೂ ಸಿದ್ದವಾಗಿದ್ದೇವೆ. ಮತ್ತು ಮೈತ್ರಿಯ ಬಗ್ಗೆ ಮಾತನಾಡಲು ಇದು ಸರಿಯಾದ ಸಮಯವಲ್ಲ," ಎಂದು ಅವರು ಹೇಳಿದ್ದಾರೆ.

English summary
What happened in Karnataka yesterday was a win for democracy. BJP asking for some more time and Governor giving 15 days time was a mockery of democracy. I would like to thank Supreme Court for its order, which upheld the democracy said Tamil Super star Rajinikanth in Chennai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X