ಕೇಂದ್ರ ಬಜೆಟ್ 2021; ತಮಿಳುನಾಡಿಗೆ ಭಾರಿ ಕೊಡುಗೆ!

ಚೆನ್ನೈ, ಫೆಬ್ರವರಿ 01; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ಮಂಡನೆ ಮಾಡಿದ್ದಾರೆ. ತಮಿಳುನಾಡು ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಲಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದರೆ, ಬಿಜೆಪಿ ಚುನಾವಣಾ ತಯಾರಿಯನ್ನು ಆರಂಭಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ.

ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ರಾಜ್ಯಕ್ಕೆ ಹಲವಾರು ಕೊಡುಗೆಯನ್ನು ನೀಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಚರ್ಚೆಗಳು ನಡೆಯುತ್ತಿವೆ.

What Tamil Nadu Gets From Union Budget 2021

ರಾಜ್ಯಕ್ಕೆ ಸಿಕ್ಕಿರುವ ಕೊಡುಗೆಗಳು

* ತಮಿಳುನಾಡು ರಾಜ್ಯದಲ್ಲಿ 3,500 ಕಿ. ಮೀ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ 1.03 ಲಕ್ಷ ಕೋಟಿ ವೆಚ್ಚ. ಇದರಲ್ಲಿ ಮಧುರೈ-ಕೊಲ್ಲಂ ಕಾರಿಡಾರ್, ಚಿತ್ತೂರು-ಥಾಚೂರ್ ಕಾರಿಡಾರ್

* ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ 278 ಕಿ. ಮೀ. ಹಿಂದೆ ಘೋಷಣೆ ಮಾಡಿದ್ದ ಯೋಜನೆ. ಈ ಆರ್ಥಿಕ ವರ್ಷದಲ್ಲಿ ಈ ಯೋಜನೆ ಕಾಮಗಾರಿ ಆರಂಭವಾಗಲಿದೆ.

* ದೇಶದಲ್ಲಿ 5 ಮುಖ್ಯ ಬಂದರುಗಳನ್ನು ಆರ್ಥಿಕ ಚಟುವಟಿಕೆ ಹಬ್ ಆಗಿ ಮಾಡಲಾಗುತ್ತದೆ. ಇದರಲ್ಲಿ ಚೆನ್ನೈ ಬಂದರು ಸಹ ಸೇರಿದೆ.

* 277 ಕಿ. ಮೀ. ಗಳ ಚೆನ್ನೈ-ಸೇಲಂ ಕಾರಿಡಾರ್‌ ಎಕ್ಸ್‌ಪ್ರೆಸ್ ವೇ ಕಾಮಗಾರಿಯನ್ನು ಈ ವರ್ಷ ಆರಂಭಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+