ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ಸಿಗೆ ಹಿಂತಿರುಗಲು ಸಿದ್ಧ ಎಂದ ಎಎಪಿ ನಾಯಕಿ ಅಲ್ಕಾ ಲಂಬಾ

|
Google Oneindia Kannada News

ನವದೆಹಲಿ, ಮಾರ್ಚ್ 15: ಆಮ್ ಆದ್ಮಿ ಪಕ್ಷ (ಎಎಪಿ) ನಾಯಕಿ, ಶಾಸಕಿ ಅಲ್ಕಾ ಲಂಬಾ ಅವರು ಕಾಂಗ್ರೆಸ್ ಪಕ್ಷಕ್ಕೆ ಹಿಂತಿರುಗಲು ಸಿದ್ಧ ಎನ್ನುವ ಮೂಲಕ ಎಲ್ಲರನ್ನು ಅಚ್ಚರಿಗೆ ದೂಡಿದ್ದಾರೆ.

ದೆಹಲಿಯಲ್ಲದೆ, ಹರ್ಯಾಣ, ಪಂಜಾಬ್ ನಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಇನ್ನಿಲ್ಲದ್ದಂತೆ ಬೇಡಿದ ಎಎಪಿಯ ಹುಳುಕು ಎಲ್ಲರಿಗೂ ಗೊತ್ತಾಗಿದೆ ಎಂದು ಅಲ್ಕಾ ಹೇಳಿದ್ದಾರೆ.

ಅಲಕಾ ಲಂಬಾ ತಲೆಗೆ ಗುನ್ನ, ಬಿಜೆಪಿಯೇ ಕಾರಣ: ಎಎಪಿಅಲಕಾ ಲಂಬಾ ತಲೆಗೆ ಗುನ್ನ, ಬಿಜೆಪಿಯೇ ಕಾರಣ: ಎಎಪಿ

ವಿದ್ಯಾರ್ಥಿ ಸಂಘಟನೆ ನಾಯಕಿಯಾಗಿ 90ರ ದಶಕದಲ್ಲಿ ಬೆಳೆದ ಲಂಬಾ ಅವರು 1995ರಲ್ಲಿ ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆಯಾಗಿದ್ದರು. ಕಾಂಗ್ರೆಸ್ಸಿನ ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯುಐನ ಸಕ್ರಿಯ ಸದಸ್ಯರಾಗಿದ್ದ ಲಂಬಾ ಅವರು 2002ರಲ್ಲಿ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ರಾಜೀವ್ ಗಾಂಧಿ ಬೆಂಬಲಿಸಿ, ರಾಜೀನಾಮೆಗೆ ಮುಂದಾದ ಎಎಪಿ ಶಾಸಕಿ

2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಲಂಬಾ, ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಿಂದ 2015ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು.

ಬಿಜೆಪಿಯನ್ನು ಆಡಳಿತದಿಂದ ದೂರ ಇಡಬಲ್ಲ ಪಕ್ಷ ಎಂದೆನಿಸಿದ್ದರಿಂದ ನಾನು ಎಎಪಿ ಸೇರಿದೆ. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಚಾಂದಿನಿ ಚೌಕ್ ಹಾಗೂ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಪ್ರಭಾವ ಹೆಚ್ಚಿಸಿಕೊಂಡಿದೆ. ಎಎಪಿ ಉದ್ದೇಶವೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ಆಗಿದ್ದಲ್ಲಿ ನಾನು ಕಾಂಗ್ರೆಸ್ ಸೇರಿ ಅಧಿಕೃತವಾಗಿ ಮೂಲ ಉದ್ದೇಶದ ಪರ ಹೋರಾಟ ನಡೆಸುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿರುವ ಅಲ್ಕಾ ಲಂಬಾ

ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿರುವ ಅಲ್ಕಾ ಲಂಬಾ

ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿರುವ ಅಲ್ಕಾ ಲಂಬಾ ಅವರ ಟ್ವೀಟ್ ನ ಭಾವಾರ್ಥವನ್ನು ಓದಿದರೆ ಹೀಗಿದೆ: ದೆಹಲಿಯಲ್ಲಿ ಬಿಜೆಪಿಯನ್ನು ಮಣಿಸಲು ಐದು ವರ್ಷಗಳ ಹಿಂದೆ ನಾನು ಎಎಪಿ ಜತೆ ಪ್ರಯಾಣ ಆರಂಭಿಸಿದೆ. 20 ವರ್ಷಗಳ ನನ್ನ ಕಾಂಗ್ರೆಸ್ ಪ್ರಯಾಣ ಅಂತ್ಯಗೊಳಿಸಿದ್ದೆ. ಬಿಜೆಪಿಗೆ ಸೋಲುಂಟಾಯಿತು. ಈಗ ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ಮಣಿಸುವ ಅವಕಾಶ ಮತ್ತೊಮ್ಮೆ ಬಂದಿದೆ. ಈಗ ಐದು ವರ್ಷಗಳ ಪ್ರಯಾಣವನ್ನು ಅಂತ್ಯಗೊಳಿಸುವುದರಲ್ಲಿ ತಪ್ಪೇನಿದೆ? ಇಂದು ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ಸಿಗೆ ಎಎಪಿ ಬಲ ನೀಡಬೇಕಿದೆ ಎಂದಿದ್ದಾರೆ.

ಕೇಜ್ರಿವಾಲ್ ವಿರುದ್ಧವೇ ದನಿಯೆತ್ತಿದ್ದರು

ಕೇಜ್ರಿವಾಲ್ ವಿರುದ್ಧವೇ ದನಿಯೆತ್ತಿದ್ದರು

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಿರುವ ಭಾರತ ರತ್ನ ವನ್ನು ವಾಪಸ್ ಪಡೆವ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ವಿಧಾನಸಭೆ ತೆಗೆದುಕೊಂಡ ನಿರ್ಣಯವನ್ನು ಬೆಂಬಲಿಸದ ಎಎಪಿ ಶಾಸಕಿ ಅಲ್ಕಾ ಲಂಬಾ ರಾಜೀನಾಮೆಗೆ ಮುಂದಾಗಿದ್ದರು.

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡವನ್ನು ನಿಯಂತ್ರಿಸಲಾಗದ ರಾಜೀವ್ ಗಾಂಧಿ ಅವರಿಗೆ ಭಾರತ ರತ್ನ ನೀಡಿದ್ದು ಸರಿಯಲ್ಲ. ಅದನ್ನು ವಾಪಸ್ ಪಡೆಯಬೇಕು ಎಂಡು ದೆಹಲಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಸಿಎಂ ಕೇಜ್ರಿವಾಲ್ ವಿರುದ್ಧವೆ ದನಿಯೆತ್ತಿದ್ದರು.

ಸದ್ಯಕ್ಕೆ ಯಾವುದೇ ಆಫರ್ ಬಂದಿಲ್ಲ

ನನಗೆ ಸದ್ಯಕ್ಕೆ ಯಾವುದೇ ಆಫರ್ ಬಂದಿಲ್ಲ, ಯಾರೊಬ್ಬರೂ ನನ್ನನ್ನು ಭೇಟಿ ಮಾಡಿ ಮಾತನಾಡಿಲ್ಲ, ಆದರೆ, ಈ ರೀತಿ ಆಫರ್ ಬಂದರೆ ಅದನ್ನು ಗೌರವಯುತವಾಗಿ ಪರಿಗಣಿಸುತ್ತೇನೆ. 20 ವರ್ಷಗಳ ನಂಟಿದೆ. ಕಾಂಗ್ರೆಸ್ ಈ ಬಗ್ಗೆ ತೀರ್ಮಾನಿಸಲಿ ಎಂದು ಅಲ್ಕಾ ಲಂಬಾ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯನ್ನು ಆಡಳಿತದಿಂದ ದೂರ ಇಡಬಲ್ಲ ಪಕ್ಷ

ಬಿಜೆಪಿಯನ್ನು ಆಡಳಿತದಿಂದ ದೂರ ಇಡಬಲ್ಲ ಪಕ್ಷ

ಬಿಜೆಪಿಯನ್ನು ಆಡಳಿತದಿಂದ ದೂರ ಇಡಬಲ್ಲ ಪಕ್ಷ ಎಂದೆನಿಸಿದ್ದರಿಂದ ನಾನು ಎಎಪಿ ಸೇರಿದೆ. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಚಾಂದಿನಿ ಚೌಕ್ ಹಾಗೂ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಪ್ರಭಾವ ಹೆಚ್ಚಿಸಿಕೊಂಡಿದೆ. ಎಎಪಿ ಉದ್ದೇಶವೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ಆಗಿದ್ದಲ್ಲಿ ನಾನು ಕಾಂಗ್ರೆಸ್ ಸೇರಿ ಅಧಿಕೃತವಾಗಿ ಮೂಲ ಉದ್ದೇಶದ ಪರ ಹೋರಾಟ ನಡೆಸುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

English summary
Alka Lamba, the Aam Aadmi Party (AAP) MLA from Chandni Chowk, on Friday said that she has no hesitation in joining the Congress party if the party accepts her. “If Congress accepts me back, I will go… AAP has completely exposed its weaknesses by begging Congress for an alliance, not just in Delhi but also in Punjab and Haryana,” she told The Indian Express.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X