ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನಲ್ಲಿ ಕೊರೊನಾ ಲಸಿಕೆ ಉಚಿತ ವಿತರಣೆ: ಸಿಎಂ ಪಳನಿಸ್ವಾಮಿ

|
Google Oneindia Kannada News

ಚೆನ್ನೈ, ಅಕ್ಟೋಬರ್ 22: ತಮಿಳುನಾಡಿನಲ್ಲಿ ಕೊರೊನಾ ಲಸಿಕೆ ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಭರವಸೆ ನೀಡಿದ್ದಾರೆ.

ಗುರುವಾರ ಈ ಕುರಿತು ಮಾತನಾಡಿದ ಅವರು, ಕೊರೊನಾ ಲಸಿಕೆ ಸಿದ್ಧವಾದ ಬಳಿಕ ತಮಿಳುನಾಡಿನ ಜನತೆಗೆ ಉಚಿತವಾಗಿ ವಿತರಣೆ ಮಾಡುತ್ತೇವೆ.

ಕೊರೊನಾ ವೈರಸ್ ಲಸಿಕೆ ಪ್ರಯೋಗಕ್ಕೆ ಒಳಗಾಗಿದ್ದ ವ್ಯಕ್ತಿ ಸಾವುಕೊರೊನಾ ವೈರಸ್ ಲಸಿಕೆ ಪ್ರಯೋಗಕ್ಕೆ ಒಳಗಾಗಿದ್ದ ವ್ಯಕ್ತಿ ಸಾವು

ಮುಂದಿನ ವರ್ಷ ಅಕ್ಟೋಬರ್ 07ರಂದು ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಪ್ರಕಟಿಸಿದೆ ಎನ್ನುವ ಮಾತುಗಳೂ ಕೇಳಿಬಂದಿದೆ.

Will Provide Coronavirus Vaccine Free Of Cost Once Ready: Palaniswami

ಬಿಹಾರ ಚುನಾವಣೆ ಸಂದರ್ಭದಲ್ಲಿ ಇದೀಗ ಬಿಜೆಪಿ ಬಿಹಾರದ ಜನತೆಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ವಿತರಿಸುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಕೂಡ ಈ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದಾರೆ.

ಡಿಸೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ ಸಿದ್ಧವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದೀಗ ಮೂರು ಲಸಿಕೆ ಅಭ್ಯರ್ಥಿಗಳು ಲಸಿಕೆಯ ಪ್ರಯೋಗದಲ್ಲಿ ತೊಡಗಿವೆ. ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್, ಜೈಡನ್‌ನ ಜೈಕೋವ್ ಡಿ ಎರಡನೆಯ ಹಂತದ ಪ್ರಯೋಗದಲ್ಲಿವೆ. ಮತ್ತೊಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಕೊವಿಶೀಲ್ಡ್ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 77 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ಒಂದು ದಿನದಲ್ಲಿ 702 ಮಂದಿ ಮೃತಪಟ್ಟಿದ್ದಾರೆ.

Recommended Video

ಇದನ್ನು ಬಳಸಿ corona ಇಂದ ದೂರ ಇರಿ | Oneindia Kannada

ಹೊಸದಾಗಿ 55,838 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 77,06,946 ಪ್ರಕರಣಗಳಿವೆ. 7,15,812 ಸಕ್ರಿಯ ಪ್ರಕರಣಗಳಿವೆ. 68,74,518 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂಡಿದ್ದಾರೆ. ಇದುವರೆಗೆ ಒಟ್ಟು 1,16,616 ಮಂದಿ ಸಾವನ್ನಪ್ಪಿದ್ದಾರೆ.

English summary
Tamil Nadu Chief Minister Edappadi K. Palaniswami on Thursday announced that once the coronavirus vaccine is ready, it will be provided to all people of the state free of cost.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X