ಉಪ ಚುನಾವಣೆ; ಜೆಡಿಎಸ್ ಪಕ್ಷದ ಅಚ್ಚರಿಯ ನಡೆ!

ಚಿಕ್ಕಬಳ್ಳಾಪುರ, ನವೆಂಬರ್ 17 : ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಒಂದು ದಿನ ಬಾಕಿ ಉಳಿದಿದೆ. ಎರಡು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ಸೂಚನೆಯನ್ನು ಜೆಡಿಎಸ್ ನೀಡಿದೆ, ಇದು ಅಚ್ಚರಿ ಮೂಡಿಸಿದೆ.

ಜೆಡಿಎಸ್ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಲಿದೆ ಎಂಬ ಸುದ್ದಿ ಹಬ್ಬಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇದಕ್ಕೂ ಮೊದಲು ಪಕ್ಷ ಅಭ್ಯರ್ಥಿಗಳನ್ನು ಬದಲಾವಣೆ ಮಾಡಬೇಕಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕೆ. ಪಿ. ಬಚ್ಚೇಗೌಡ ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿದೆ. ಭಾನುವಾರ ರಾಧಾಕೃಷ್ಣ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಈ ಬದಲಾವಣೆಗೆ ಕಾರಣವೇನು? ಎಂಬುದು ಬಹಿರಂಗವಾಗಿಲ್ಲ.

15 Seat By Elections JDS Candidate Changed

ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ. ಅವರ ಜೊತೆ ರಾಧಾಕೃಷ್ಣ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ರಾಧಾಕೃಷ್ಣ ಶಿಡ್ಲಘಟ್ಟ ತಾಲೂಕು ನಾಗಮಂಗಲ ನಿವಾಸಿ.

ಅಭ್ಯರ್ಥಿ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯ ಡಾ. ಕೆ. ಸುಧಾಕರ್, "ಕ್ಷೇತ್ರದಲ್ಲಿ ವ್ಯಕ್ತಿತ್ವವಿರುವ ಅಭ್ಯರ್ಥಿ ಇಲ್ಲ ಎಂದು ಎರಡು ಪಕ್ಷದವರಿಗೆ ಎನಿಸಿರಬಹುದು. ಹಣ ಇದೆ ಎಂದು ಬೇರೆ ಕ್ಷೇತ್ರದಿಂದ ಕರೆತಂದು ನಿಲ್ಲಿಸಿದ್ದಾರೆ" ಎಂದರು.

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿಯೂ ಅಭ್ಯರ್ಥಿ ಬದಲಾವಣೆ ಬಗ್ಗೆ ಸುದ್ದಿ ಹಬ್ಬಿತ್ತು. ಕಾಂತರಾಜು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಡಾ. ಗಿರೀಶ್ ನಾಶಿ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತು. ಸೋಮವಾರ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+