Ration Card: 5,446 ಬಿಪಿಎಲ್ ಕಾರ್ಡ್‌ಗಳ ರದ್ದು
Ration Card: ರಾಜ್ಯದಲ್ಲಿ ಅನರ್ಹರ ಬಳಿಯ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ಸೇರ್ಪಡೆ ಮಾಡುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಹಾಗಾದ್ರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದುವರೆಗೂ ಎಷ್ಟು ಕಾರ್ಡ್‌ಗಳನ್ನು ವರ್ಗಾಹಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ನಕಲಿ ದಾಖಲೆ ಸೃಷ್ಟಿಸಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದು, ಇದೀಗ ಇಂತಹವರಿಗೆ ಸರ್ಕಾರ ಕಡಿವಾಣ ಹಾಕುತ್ತಿದೆ. ಇವರು ಅರ್ಹರಿಲ್ಲದಿದ್ದರೂ ಸಹ ಬಿಪಿಎಲ್ ಕಾರ್ಡ್ ಪಡೆದು ಬಡವರಿಗೆ ಸಿಗಬೇಕಾದ ಅನ್ನವನ್ನು ಕಿತ್ತುಕೊಳ್ಳುತ್ತಿದ್ದರು. ಈ ನಡುವೆಯೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಸಹ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅವರನ್ನು ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ.

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಕಾರ್ಡುದಾರರನ್ನು ಪತ್ತೆಹಚ್ಚಿ ಅವರನ್ನು ಎಪಿಎಲ್‌ಗೆ ವರ್ಗಾಹಿಸುವ ಕಾರ್ಯ ಮುಂದುವರೆದಿದೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಅನರ್ಹ ಪಡಿತರ ಚೀಟಿ ಪತ್ತೆ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈವರೆಗೂ 5,446 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಬಿಪಿಎಲ್ ಕಾರ್ಡ್‌ಗಳ ಸಮೀಕ್ಷೆ ಮತ್ತು ಪರಿಶೀಲನೆ ಕೈಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಪಡಿತರ ವಿತರಣೆ ಅಂಗಡಿಗೆ 10ರಂತೆ ಕಾರ್ಡ್ ರದ್ದು ಮಾಡಲು ಸೂಚಿಸಲಾಗಿತ್ತು. ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಈವರೆಗೂ ಜಿಲ್ಲೆಯಲ್ಲಿ 5,446 ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆಹಚ್ಚಲಾಗಿದ್ದು, ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸಲಾಗಿದೆ.
ಇನ್ನು ಮಾನದಂಡಗಳನ್ನು ಉಲ್ಲಂಘನೆ ಮಾಡಿ ಕಾರ್ಡ್‌ಗಳನ್ನು ಹೊಂದಿರುವವರ ವಿರುದ್ಧ ಸರ್ಕಾರ ಸಮರ ಸಾರಿಗೆ. ಇದರ ಉದ್ದಶ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಪಡಿತರ ಹಾಗೂ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವುದಾಗಿದೆ. ಈ ನಡುವೆಯೇ ಹಲವೆಡೆ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾಹಿಸಲಾಗಿದೆ ಎನ್ನುವ ಆರೋಪಗಳು ಸಹ ಕೇಳಿಬಂದಿವೆ.
ಈ ಹಿಂದೆಯೂ ಸಹ ಅರ್ಹರ ಬಳಿಯಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುತ್ತಿದೆ ಎಂದು ಆರೋಪಿಸಿ ಹಲವು ಜಿಲ್ಲೆಗಳಲ್ಲಿ ಜನರು ಪ್ರತಿಭಟನೆ ಮಾಡಿದ್ದರು. ಬಳಿಕ ಸರ್ಕಾರ ಪರಿಶೀಲನೆ ಕಾರ್ಯ ನಿಲ್ಲಿಸಿ, ಯಾರೆಲ್ಲಾ ಅರ್ಹರ ಬಳಿಯ ಬಿಪಿಎಲ್ ಕಾರ್ಡ್ ರದ್ದಾಗಿದೆಯೋ ಅಂತಹವರಿಗೆ ಮತ್ತೆ ಬಿಪಿಎಲ್ ಪಡಿತರ ಚೀಟಿಯನ್ನು ಹಿಂತಿರುಗಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿತ್ತು. ಆದರೆ ಇದೀಗ ಸರಿಯಾಗಿ ಪರಿಶೀಲನೆ ನಡೆಸಿದರೂ ಕೂಡ ಮತ್ತೆ ಈ ಆರೋಪ ಕೇಳಿಬಂದಿದೆ.
ಒಂದು ವೇಳೆ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳು ರದ್ದಾಗಿದ್ದರೆ, ಸೂಕ್ತ ದಾಖಲೆಗಳೊಂದಿಗೆ ಆಹಾರ ಇಲಾಖೆ ಕಚೇರಿಗೆ ಮಾಹಿತಿ ಸಲ್ಲಿಸಬಹುದು. ಆಗ ಪರಿಶೀಲನೆ ನಡೆಸಿ ರದ್ದಾಗಿದ್ದ ಬಿಪಿಎಲ್ ಕಾರ್ಡ್ ಅನ್ನು ಮತ್ತೆ ವಿತರಣೆ ಮಾಡುವ ಕುರಿತು ಕ್ರಮ ಕೈಗೊಳ್ಳಲು ಸರ್ಕಾರ ಸೂಚನೆ ನೀಡಿದೆ.
ಅರ್ಹತೆ ಇದ್ದರೂ ಸಹ ಬಿಪಿಎಲ್ ಕಾರ್ಡ್ ರದ್ದುಡಿಸಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಒಂದು ವೇಳೆ ಹೀಗೆ ಆಗಿದ್ದರೆ ಅಂತಹವರು ಆಹಾರ ಇಲಾಖೆ ಕಚೇರಿಗೆ ಭೇಟಿ ನೀಡಬಹುದು. ಬಳಿಕ ಅವರು ಅರ್ಹರೆಂದು ಸಾಭಿತಾದಲ್ಲಿ ಅವರಿಗೆ ಮತ್ತೆ ಬಿಪಿಎಲ್ ಕಾರ್ಡ್ ಅನ್ನು ನೀಡಲಾಗುತ್ತದೆ ಎಂದು ಸರ್ಕಾರ ಈ ಹಿಂದಿನಿಂದಲೂ ಸಹ ಹೇಳಿಕೊಂಡು ಬಂದಿದೆ.












Click it and Unblock the Notifications