ಚಿಕ್ಕಬಳ್ಳಾಪುರ: ಪುಷ್ಪ ಸಿನಿಮಾ ಸ್ಟೈಲ್‌ನಲ್ಲಿ ಅಕ್ರಮವಾಗಿ ರಕ್ತ ಚಂದನ ಸಾಗಾಟದ ವೇಳೆ ಕಾರು ಪಲ್ಟಿ, ಮುಂದಾಗಿದ್ದೇನು?
ಚಿಕ್ಕಬಳ್ಳಾಪುರ, ಸೆಪ್ಟೆಂಬರ್, 12: ಆಂಧ್ರದ ಕಡಪದಿಂದ ಬೆಂಗಳೂರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ರಕ್ತ ಚಂದದ ತುಂಡುಗಳನ್ನು ಅಕ್ರಮವಾಗಿ ಕಾರಿನ ಅಡಿಯಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ರಕ್ತ ಚಂದನ ಸಾಗಿಸುತ್ತಿದ್ದ ಇನ್ನೋವಾ ಕಾರು ಅಪಘಾತವಾಗಿ ಅಕ್ರಮ ಸಾಗಾಟ ಪ್ರಕರಣ ಬೆಳಕಿಗೆ ಬಂದಿದ್ದು, ಖದೀಮರು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಪೆರೇಸಂದ್ರ ಕ್ರಾಸ್ ಹತ್ತಿರದ ಸಾದಲಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಆಂಧ್ರಪ್ರದೇಶದ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೆ ಒಳಗಾಗಿತ್ತು. ಈ ವೇಳೆ ಕಾರನಲ್ಲಿ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ರಕ್ತ ಚಂದನವನ್ನು ಸಾಗಾಟ ಮಾಡಲಾಗುತ್ತಿರುವ ಬಗ್ಗೆ ಬೆಳಕಿಗೆ ಬಂದಿದೆ.

ತೆಲುಗು ಪುಷ್ಪ ಸಿನಿಮಾ ಸ್ಟೈಲ್‌ನಲ್ಲಿ ಅಕ್ರಮವಾಗಿ ರಕ್ತ ಚಂದನವನ್ನು ಸಾಗಿಸುತ್ತಿದ್ದ ಇನ್ನೋವಾ ಕಾರು ಪಲ್ಟಿಯಾಗಿ ಅಪಘಾತಕ್ಕೆ ಒಳಗಾದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನಲಗಲಿ ಮೂವರು ಪ್ರಯಾಣ ಮಾಡುತ್ತಿದ್ದು, ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬದಿದೆ. ಅಪರಾಧಿಗಳನ್ನು ಆಂಧ್ರಪ್ರದೇಶ ಕಡಪ ಮೂಲದ ನಾಗೇಂದ್ರ, ಶ್ರೀನಿವಾಸಲು ಹಾಗೂ ನಾಗರಾಜು ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
KSRTC ಬಸ್-ಕಾರು ಮುಖಾಮುಖಿ ಡಿಕ್ಕಿ
ಸಾರಿಗೆ (KSRTC) ಬಸ್ ಹಾಗೂ ಕಾರಿನ ನಡುವೆ ಸೋಮವಾರ (ಸೆಪ್ಟೆಂಬರ್ 11) ಮಧ್ಯರಾತ್ರಿ ಮುಖಾಮುಖಿ ಡಿಕ್ಕಿಯಾದ್ದು, ಪರಿಣಾಣ ಕಾರಿನಲ್ಲಿದ್ದ 7 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೇಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯವಾಗಿದೆ. ನಂತರ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ರಾತ್ರಿ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇನ್ನು ಸಾರಿಗೆ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ 9 ಜನರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವರು ಎಂದು ತಿಳಿದು ಬಂದಿದೆ. ಸದ್ಯ ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications