Chikkaballapur:ಜನರ ಸಮಸ್ಯೆ ಪರಿಹರಿಸಲೆಂದು ಅಧಿಕಾರಿಗಳ ನೇಮಕ: ಆದರೂ ಬಂತು 148 ಅರ್ಜಿ!

ಗುಡಿಬಂಡೆ ಜುಲೈ 20: ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲು ಸರ್ಕಾರ ಅಧಿಕಾರಿಗಳನ್ನು ನೇಮಕ ಮಾಡಿಕೊಂಡಿದೆ. ಆದರೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೋ ಇಲ್ಲವೋ ಎಂಬ ಅನುಮಾನ ಶನಿವಾರ ತಾಲೂಕಿನ ಎಲ್ಲೋಡು ಶ್ರೀ ಆದಿನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮ ಸಾಕ್ಷಿಯಾಯಿತು.

ಹೌದು... ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಜನರ ಕೆಲಸ ಮಾಡಲು ಸರ್ಕಾರ ಇಲಾಖೆಗಳನ್ನು ಆಯ್ಕೆ ಮಾಡಿದೆ. ಆದರೂ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಮಾಡದೇ ಇರುವುದರಿಂದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸುಮಾರು 148 ಅರ್ಜಿಗಳು ಸಲ್ಲಿಸಲಾಗಿದೆ. ಇಷ್ಟೆಲ್ಲ ದೂರುಗಳು ನೋಡಿದ ನಂತರ ಅಧಿಕಾರಿಗಳು ಕಚೇರಿಗಳಲ್ಲಿ ಜನರ ಕೆಲಸ ಮಾಡುತ್ತಿದ್ದಾರಾ ಅಥವಾ ಇಲ್ಲವೋ ಎಂಬ ಪ್ರಶ್ನೆಗಳು ಮೂಡಿದೆ.

Appointing officers to solve people s problems 148 applications came in Janaspanda program

ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 74 ಅರ್ಜಿಗಳು, ತಾಲೂಕು ಪಂಚಾಯಿತಿಗೆ ಕಚೇರಿಗೆ ಸೇರಿದಂತೆ 23 ಅರ್ಜಿಗಳು, ರೇಷನ್ ಕಾರ್ಡ್ ಸಂಬಂಧಿಸಿದ 22 ಅರ್ಜಿಗಳು, ಕೆ.ಎಸ್.ಆರ್.ಟಿಸಿ ಬಸ್ ವ್ಯವಸ್ಥೆ ಬಗ್ಗೆ 2 ಅರ್ಜಿಗಳು, ವಿವಿಧ ನಿಗಮ ಮಂಡಳಿಗಳಲ್ಲಿ ಸಾಲಸೌಲಭ್ಯಗಳ ಬಗ್ಗೆ 7 ಅರ್ಜಿಗಳು, ಪೊಲೀಸ್ ಇಲಾಖೆಗೆ ಸೇರಿದಂತೆ 3 ಅರ್ಜಿಗಳು, ರಸ್ತೆ ಸರಿಪಡಿಸುವಂತೆ 5 ಅರ್ಜಿಗಳು, ಬೇಸ್ಕಾಂ ಇಲಾಖೆಯ 6 ಅರ್ಜಿಗಳು ಮತ್ತು ಇತರೆ 28 ಅರ್ಜಿಗಳು ಸೇರಿ148 ಅರ್ಜಿಗಳು ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ನೀಡಿದರು.

ಇನ್ನು ಈ ವೇಳೆ ತಹಶೀಲ್ದಾರ್ ಎನ್.ಮನೀಷಾ ಮಾತನಾಡಿ, ಜನರ ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬಂದಿದ್ದು, ಸಮಸ್ಯೆಗಳು ಇದ್ದಲ್ಲಿ ಅರ್ಜಿ ನೀಡಿ ಪರಿಹರಿಸಿಕೊಳ್ಳಬೇಕು ಎಂದು ಸಭಿಕರಿಸಿಗೆ ತಿಳಿಸಿದರು.

ಸಭೆಯಲ್ಲಿ ಎಲ್ಲಾ ಅರ್ಜಿಗಳನ್ನು ಸ್ಪೀಕರಿಸಿ ನಂತರ ಪತ್ರಕರ್ತರರೊಂದಿಗೆ ಮಾತನಾಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಜನಸ್ಪಂದನಾ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 148 ಅರ್ಜಿಗಳು ಬಂದಿದ್ದು, ಈ ಪೈಕಿ 120ಕ್ಕು ಹೆಚ್ಚು ಅರ್ಜಿಗಳನ್ನು ಇಲ್ಲೆ ಇತ್ಯರ್ಥ ಪಡಿಸಿದ್ದು, ಉಳಿದ ಅರ್ಜಿಗಳನ್ನು ಒಂದು ತಿಂಗಳ ಒಳಗಾಗಿ ಇತ್ಯರ್ಥಪಡಿಸಿಕೊಳ್ಳಲಾಗುತ್ತದೆಂದರು.

ಇನ್ನು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಸಪ್ತಗಿರಿ ಆಸ್ಪತ್ರೆಯ ಸಿಬ್ಬಂದಿಯಿಂದ ಆರೋಗ್ಯ ಶಿಬಿರ ಕಾರ್ಯಕ್ರಮ ಆಯೋಜಿಸಿದ್ದು ನೂರಾರು ರೋಗಿಗಳು ಚಿಕಿತ್ಸೆ ಪಡೆದಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ಮತ್ತೆ ಅವರನ್ನು ಅವರ ಮನೆಗಳಿಗೆ ಬೀಡುವ ಕಾರ್ಯ ಮಾಡಲಾಗಿದೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ, ತೋಟಗಾರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ದಿ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಬಂದಿರುವ ಯೋಜನೆಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ಮನೀಷಾ, ತಾ.ಪಂ ಇಒ ಹೇಮಾವತಿ, ಸಹಾಯಕ ಕೃಷಿ ನಿರ್ದೇಶಕ ಕೇಶವ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕ ಲಕ್ಷ್ಮೀಪತಿ ರೆಡ್ಡಿ, ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+