Chikkaballapur: ನಗರದಲ್ಲಿ ನಾಯಿ ಹಾಗೂ ಕೋತಿಗಳ ಹಾವಳಿ ತಪ್ಪಿಸಿ- ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಸೂಚನೆ
ಚಿಕ್ಕಬಳ್ಳಾಪುರ ಅಕ್ಟೋಬರ್ 16: ಗುಡಿಬಂಡೆ ಪಟ್ಟಣದ ಮುಖ್ಯ ರಸ್ತೆ ಬದಿಯಲ್ಲಿರುವ ಬೀದಿ ಬದಿ ಅಂಗಡಿಗಳನ್ನು ಕೂಡಲೇ ತೆರವು ಗೊಳಿಸಿ, ರಸ್ತೆಯ ಸೌಂದರ್ಯವನ್ನು ಕಾಪಾಡಿ ಇಲ್ಲದಿದ್ದರೆ, ಅಕ್ಕ ಪಕ್ಕ ಇರುವ ಗುಜರಿ ಅಂಗಡಿಗಳಿಂದ ಪಟ್ಟಣದ ಸೌಂದರ್ಯ ಸಂಪೂರ್ಣ ಹಾಳಾಗಿದೆ ಎಂದು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿರುವ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಪ.ಪಂ ಅಧ್ಯಕ್ಷ ಎ. ವಿಕಾಸ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಸದಸ್ಯರ ಸಮಸ್ಯೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಅವರು ಹಲವು ಸಮಸ್ಯೆಗಳ ನಿವಾರಣೆಗೆ ಸಲಹೆ ಸೂಚನೆ ಕೊಟ್ಟು ಕಾಲ ಮಿತಿಯೊಳಗೆ ಸಮಸ್ಯೆ ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಶೇಲ್ಟರ್ ಗಳನ್ನು ನಿರ್ಮಿಸಿ, ಬೀದಿ ಬದಿ ವ್ಯಾಪಾರಸ್ಥರಿಗೆ ನೀಡಿದ್ದರು ಅವುಗಳನ್ನು ಬಳಕೆ ಮಾಡದೆ, ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ಟಾರ್ಪಲಿನ್ ಗಳ ಕೆಳಗೆ ವ್ಯಾಪಾರ ಮಾಡುತ್ತಿದ್ದು, ದಾರಿ ಬದಿ ವಾಹನಗಳ ನಿಲುಗಡೆಗೂ ಸಮಸ್ಯೆ ಉಂಟಾಗುತ್ತಿದ್ದೂ, ಪಟ್ಟಣದ ಸೌಂದರ್ಯ ಹಾಳು ಮಾಡುತ್ತಿರುವಂತಿದೆ ಎಂದರು.
ಪಟ್ಟಣ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಾಯಿ ಹಾಗೂ ಕೋತಿಗಳ ಹಾವಳಿ ಜಾಸ್ತಿಯಾಗಿದ್ದು, ಬೀದಿಗಳಲ್ಲಿ ಮಕ್ಕಳು, ವೃದ್ಧರು, ದ್ವೀಚಕ್ರ ವಾಹನ ಸಂಚಾರಕ್ಕೆ ಕಷ್ಟವಾಗಿದ್ದು, ಅನೇಕರಿಗೆ ನಾಯಿ ಹಾಗೂ ಕೋತಿಗಳು ಕಚ್ಚಿ ಗಾಯಗೊಳಿಸುತ್ತಿದ್ದೂ ಕೂಡಲೇ ಹಾವಳಿ ತಪ್ಪಿಸಬೇಕೆಂದು ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಮುಂದಿನ 15 ದಿನಗಳಲ್ಲಿ ಕ್ರಮ ಕೈಗೊಳ್ಳಿವಂತೆ ಸೂಚಿಸಿದರು.
ಹಿಂದಿನ ಸಾಮಾನ್ಯ ಸಭೆಯಲ್ಲಿ ಪಟ್ಟಣದಲ್ಲಿರುವ ರಾಮಪಟ್ಟಣ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡಲು ಕ್ರಮ ಜರುಗಿಸುವಂತೆ ತೆಗೆದುಕೊಂಡಿದ್ದ ನಿರ್ಣಯವನ್ನು ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿತನದಿಂದ ನೆನೆಗುದಿಗೆ ಬಿದ್ದಿದ್ದು, ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸುವಂತೆ ಕೆಲ ಸದಸ್ಯರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕೆಲ ಸದಸ್ಯರು ಮುಖ್ಯ ರಸ್ತೆ ಅಗಲೀಕರಣದ ವೇಳೆ ಮನೆ ಕಳೆದುಕೊಂಡವರಿಗೆ ಮೊದಲು ನಿವೇಶನ ಕಲ್ಪಿಸಿಕೊಡುವಂತೆ ತಿಳಿಸಿದರು.

ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗಡಿ ಮಳಿಗೆಗಳನ್ನು ಹರಾಜು ಮಾಡುವ ಕುರಿತು ಚರ್ಚೆ ನಡೆಯಿತು. ಪಟ್ಟಣ ಪಂಚಾಯತಿ ಹಳೇ ಕಟ್ಟಡವನ್ನು ಖಾಸಗಿ ಶಾಲೆಗೆ ಬಾಡಿಗೆಗೆ ನೀಡುವ ಕುರಿತು ಚರ್ಚೆ ನಡೆಯಿತು. ಪಟ್ಟಣದಲ್ಲಿರುವ ಹಲವು ಉದ್ಯಾನವನಗಳು ನಿರ್ವಹಣೆ ಕೊರತೆಯಿಂದ ಉಪಯೋಗಕ್ಕೆ ಬಾರದಂತಾಗಿದ್ದು ಕೂಡಲೇ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಆಶ್ರಯ ಕಮಿಟಿಯ ಸಭೆಯನ್ನು ನ. 11 ರಂದು ಹಮ್ಮಿಕೊಳ್ಳಳು ತೀರ್ಮಾನಿಸಲಾಯಿತು. ಮುಖ್ಯ ರಸ್ತೆಯಲ್ಲಿ ಮನೆ ಕಳೆದುಕೊಂಡವರಿಗೆ ಪ್ರಸ್ತುತ 58 ಪಲಾನುಭವಿಗಳಿಗೆ ನ.25 ರಂದು ಹಕ್ಕು ಪತ್ರಗಳ ವಿತರಣೆ ಮಾಡಲಾಗುವುದು ಎಂದರು. ಉಳಿದವರಿಗೆ ಪಲ್ಲಯ್ಯಗಾರಹಳ್ಳಿ ಸರ್ವೇ ನಂಬರ್ ನಲ್ಲಿ ಹಂಚಿಕೆ ಮಾಡಲಾಗುವುದು ಎಂದರು. ಪಟ್ಟಣದ ಅಭಿವೃದ್ಧಿಗಾಗಿ ಅಮೃತ ಯೋಜನೆಯಗಾಗಿ ಸರಿ ಸುಮಾರು 20 ಕೋಟಿ ಅನುದಾನ ಬಂದಿದ್ದು, ಮನೆ ಮನೆಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಪಟ್ಟಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಾಗಾರೋತ್ತಾನ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದೂ ಕೂಡಲೇ ಕೆಲಸ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಪಟ್ಟಣ ಪಂಚಾಯತಿ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗಾಗಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕುಂಟಿತವಾಗಿದೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಎ. ವಿಕಾಸ್, ಉಪಾಧ್ಯಕ್ಷ ಗಂಗರಾಜು, ಪಪಂ ಮುಖ್ಯಧಿಕಾರಿ ಶ್ರೀನಿವಾಸ್, ಪಟ್ಟಣ ಪಂಚಾಯತಿ ಸದಸ್ಯರು, ಸಿಬ್ಬಂದಿ ಹಾಗೂ ನಾಮ ನಿರ್ದೇಶಿತ ಸದಸ್ಯರು ಭಾಗವಹಿಸಿದ್ದರು.












Click it and Unblock the Notifications