ಭೋಗನಂದೀಶ್ವರ ದೇವಾಲಯ ಅರ್ಚಕರಿಗೆ ಕೊರೊನಾ ಸೋಂಕು ದೃಢ
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 4: ದಕ್ಷಿಣ ಕಾಶಿ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇವಾಲಯದ ಅರ್ಚಕರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ದೇವಾಲಯವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ದೇವಾಲಯದಲ್ಲಿನ ಇಬ್ಬರು ಅರ್ಚಕರಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಇಂದಿನಿಂದ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಅರ್ಚಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಬೀದರ್ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಕೊರೊನಾ ಸೋಂಕು ದೃಢ
ದೇವಾಲಯದ ಪ್ರಮುಖ ಗೇಟ್ ನ್ನು ಸಂಪೂರ್ಣ ಮುಚ್ಚಿ ಟೇಪ್ ಮಾಡಲಾಗಿದೆ. ಗುರುವಾರ ಸಹ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 102 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,526 ಕ್ಕೆ ಏರಿಕೆಯಾಗಿದೆ.
ಇದುವರೆಗೂ 3624 ಮಂದಿ ಗುಣಮುಖರಾಗಿದ್ದು, ಸದ್ಯ 836 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೊರೊನಾದಿಂದ ಇದುವರೆಗೂ 65 ಮಂದಿ ಸಾವನ್ನಪ್ಪಿದ್ದಾರೆ.