ಚಿಕ್ಕಬಳ್ಳಾಪುರ: ಖಾಸಗಿ ಬಸ್-ಟಾಟಾ ಏಸ್ ನಡುವೆ ಭೀಕರ ಅಪಘಾತ, 12 ಸಾವು
ಚಿಂತಾಮಣಿ, ಜುಲೈ 03: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮುರಗಮಲ್ಲ ಬಳಿ ಭೀಕರ ರಸ್ತೆ ಅಪಘಾತದಲ್ಲಿ 12 ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಮುರಗಮಲ್ಲದಿಂದ ಚಿಂತಾಮಣಿಯತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟಾಟಾ ಏಸ್ ವಾಹನದ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, 12 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಲವು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಕೋಲಾರ ಮತ್ತು ಚಿಂತಾಮಣಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ.

ಮುರಗಮಲ್ಲ ಚಿಂತಾಮಣಿ ನಡುವೆ ಹಲವು ಖಾಸಗಿ ಬಸ್‌ಗಳು ಸಂಚರಿಸುತ್ತವೆ, ಪರಸ್ಪರ ಸ್ಪರ್ಧೆಗೆ ಬಿದ್ದವರಂತೆ ಈ ವಾಹನಗಳು ಸಂಚರಿಸುತ್ತವೆ. ಖಾಸಗಿ ಬಸ್‌ಗಳ ವೇಗ ನಿಯಂತ್ರಿಸಲು ಸ್ಥಳೀಯರು ಹಲವು ಬಾರಿ ದೂರು ಸಹ ನೀಡಿದ್ದರೂ, ಸಂಬಂಧಪಟ್ಟ ಇಲಾಖೆ ಗಮನ ನೀಡಿರಲಿಲ್ಲ.
ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಪ್ರಾರಂಭಿಸಿದ್ದಾರೆ.












Click it and Unblock the Notifications