ದೊಡ್ಡಬಳ್ಳಾಪುರದಲ್ಲಿ ಸೆ.8 ರಂದು ಬಿಜೆಪಿ ಜನೋತ್ಸವ: ಸಮಾವೇಶಕ್ಕೆ ಭರ್ಜರಿ ತಯಾರಿ
ದೊಡ್ಡಬಳ್ಳಾಪುರ, ಸೆಪ್ಟೆಂಬರ್ 6: ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ ಸಮಾವೇಶವನ್ನು ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿದೆ. ಈ ಸಮಾವೇಶ 8 ಸೆಪ್ಟೆಂಬರ್ 2022 ರಂದು ನಡೆಯಲಿದೆ. ಈ ಮೂಲಕ ಮುಂದಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿಯನ್ನು ನಡೆಸಿದೆ. ಈ ಸಮಾವೇಶವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ನೆರವೇರಲಿದೆ. ಸುಮಾರು ಎರಡರಿಂದ ಮೂರು ಲಕ್ಷ ಜನ ಸೇರಿಸುವ ಮೂಲಕ ಸಮಾವೇಶವನ್ನು ಭರ್ಜರಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಜ್ಜುಗೊಳಿಸಲಾಗುತ್ತಿದೆ.
'ಜನೋತ್ಸವ - ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ' ಸಮಾವೇಶವು 8 ಸೆಪ್ಟೆಂಬರ್ 2022 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಈ ವೇಳೆ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸೋಣ ಎಂದು ಬಿಜೆಪಿ ತನ್ನ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದೆ.
'ಜನೋತ್ಸವ - ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ' ಸಮಾವೇಶವು 8 ಸೆಪ್ಟೆಂಬರ್ 2022 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ @JPNadda ಅವರ ಉಪಸ್ಥಿತಿ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ.
— BJP Karnataka (@BJP4Karnataka) September 6, 2022
ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸೋಣ.#ಜನೋತ್ಸವ #Janotsava pic.twitter.com/u0rDOOH7gN
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡಿರುವ ಆಡಳಿತಾರೂಢ ಬಿಜೆಪಿಯು ಗುರುವಾರ (ಸೆ.8) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣದ ಹೊರವಲಯದಲ್ಲಿ 'ಜನೋತ್ಸವ ಸಮಾವೇಶ' ಹಮ್ಮಿಕೊಂಡಿದೆ.

ರಾಜ್ಯದ ಇತರ ಭಾಗಗಳಲ್ಲಿ ಪ್ರಾಬಲ್ಯ ಹೊಂದಿರುವ ಬಿಜೆಪಿಯು ಹಳೆ ಮೈಸೂರು ಭಾಗದಲ್ಲಿ ತನ್ನ ಸಾಮರ್ಥ್ಯವನ್ನು ಇನ್ನೂ ಹೆಚ್ಚಿಸಿಕೊಳ್ಳಲು ಪ್ರಯತ್ನ ನಡೆಸಿದೆ. ಈ ಭಾಗದಲ್ಲಿ ಸಂಘಟನೆ ಬಲಗೊಂಡಲ್ಲಿ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಏರುವುದು ಸುಲಭ ಎನ್ನುವುದು ಬಿಜೆಪಿ ಲೆಕ್ಕಾಚಾರವಾಗಿದೆ.
ಹೀಗಾಗಿ, ದೊಡ್ಡಬಳ್ಳಾಪುರದ ಸಮಾವೇಶದಿಂದಲೇ ಮುಂಬರುವ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲು ರಾಜ್ಯ ಬಿಜೆಪಿ ನಾಯಕರು ತಯಾರಿ ನಡೆಸಿದ್ದಾರೆ. ರಾಷ್ಟ್ರೀಯ ಬಿಜೆಪಿಯ ಪ್ರಭಾವಿ ನಾಯಕರೂ ಆಗಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಕೆಲವು ತಿಂಗಳ ಹಿಂದೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ನಡೆಸಿದ್ದರು.

ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಆ ಸಭೆಯಲ್ಲಿ ಪಾಲ್ಗೊಂಡಿದ್ದ ನಾಯಕರ ಅಭಿಪ್ರಾಯ, ಸಲಹೆಗಳನ್ನು ಆಲಿಸಿದ ಬಳಿಕ ಅವರು ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಲಪಡಿಸದೇ ಹೋದರೆ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಸಾಧ್ಯವಿಲ್ಲ ಎಂದು ಬಿಜೆಪಿ ಗಮನ ಹರಿಸಿದೆ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ನಡೆಸಲು ನಿರ್ಧರಿಸಿದೆ.












Click it and Unblock the Notifications