6 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ: ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ, ಅಕ್ಟೋಬರ್ 28: ವಿಧಾನಪರಿಷತ್ ಹಾಗೂ ವಿಧಾನಸಭೆಯ ಆರು ಕ್ಷೇತ್ರಗಳಲ್ಲೂ ಬಿಜೆಪಿ ವಿಜಯ ಸಾಧಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪೆರೇಸಂದ್ರ ಗ್ರಾಮದಲ್ಲಿ ಮತ ಚಲಾಯಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋವಿಡ್ ನ ಸಂಕಷ್ಟದಲ್ಲಿ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿಕೊಂಡು ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ವಿಧಾನಪರಿಷತ್‍ನ ನಾಲ್ಕು ಹಾಗೂ ವಿಧಾನಸಭೆಯ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶಾಲಿಯಾಗಲಿದ್ದಾರೆ ಎಂದರು.

BJP will win in all six constituencies: Sudhakar

ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರು 40-50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಶಿರಾದಲ್ಲಿ ಕಳೆದ ಬಾರಿ ಬಿಜೆಪಿಗೆ ಶಕ್ತಿ ಇರಲಿಲ್ಲ. ಆದರೆ ಬಿಜೆಪಿ ರಾಜ್ಯ ಸರ್ಕಾರದ ಆಡಳಿತವನ್ನು ನೋಡಿ ಯುವಕರು, ರೈತಾಪಿ ವರ್ಗದವರು ಆಕರ್ಷಿತರಾಗಿದ್ದಾರೆ.

BJP will win in all six constituencies: Sudhakar

ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರಚಾರ ನಡೆಸುತ್ತಿರುವುದರಿಂದ ಬಿಜೆಪಿ ಅಲೆ ಕಾಣಿಸುತ್ತಿದೆ. ಅಲ್ಲಿ ಕೂಡ 10-15 ಸಾವಿರ ಮತಗಳ ಅಂತರದಿಂದ ಡಾ.ರಾಜೇಶ್ ಗೌಡ ಅವರು ವಿಜಯ ಸಾಧಿಸಲಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+