ನಂದಿಯಲ್ಲಿ ಅದ್ಧೂರಿ ಬ್ರಹ್ಮ ರಥೋತ್ಸವ, ಜಾತ್ರೆಗೆ ಮೆರಗು ನೀಡಿದ ಕಲಾ ತಂಡಗಳು
ಚಿಕ್ಕಬಳ್ಳಾಪುರ ತಾಲೂಕಿನ ನಂದಿಯ ಭೋಗನಂದೀಶ್ವರ ಸ್ವಾಮಿ ಜೋಡಿ ಬ್ರಹ್ಮ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.
ಚಿಕ್ಕಬಳ್ಳಾಪುರ, ಫೆಬ್ರವರಿ, 20: ತಾಲೂಕಿನ ನಂದಿಯ ಶ್ರೀ ಭೋಗನಂದೀಶ್ವರ ಸ್ವಾಮಿ ಜೋಡಿ ಬ್ರಹ್ಮ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಮಹಾ ಶಿವರಾತ್ರಿ ಹಬ್ಬದ ಮರುದಿನ ನಡೆದ ಐತಿಹಾಸಿಕ ಈ ಬ್ರಹ್ಮ ರಥೋತ್ಸವಕ್ಕೆ ಸಚಿವ ಡಾ.ಕೆ.ಸುಧಾಕರ್ ಮಧ್ಯಾಹ್ನ 12.30ರ ಸುಮಾರಿಗೆ ಚಾಲನೆ ನೀಡಿದರು. ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು, ಶಿವ ನಾಮ ಸ್ಮರಣೆಯೊಂದಿಗೆ ರಥವನ್ನು ಎಳೆದರು.
ಜಾತ್ರೆಯಲ್ಲಿ ಶಿವಪಾರ್ವತಿ ಹಾಗೂ ಗಣೇಶ ಮೂರ್ತಿಯನ್ನೊಳಗೊಂಡ ಜೋಡಿ ರಥವು ಗಮನ ಸೆಳೆಯಿತು. ನಂದಿ ಜಾತ್ರೆಯಲ್ಲಿ ಜೋಡಿ ರಥ ಎಳೆಯುವುದು ಮೊದಲಿನಿಂದಲೂ ಆಚರಣೆಯಲ್ಲಿದೆ. ಅದರಂತೆಯೇ ಭಾನುವಾರ ನಡೆದ ರಥೋತ್ಸವದಲ್ಲಿ ಶಿವ ಪಾರ್ವತಿ ಹಾಗೂ ಗೌರಿ ಗಣೇಶ ಮೂರ್ತಿಗಳಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಮಾಡಲಾಯಿತು. ನಂತರ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿದ್ದ ಎರಡು ರಥಗಳನ್ನು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಲಾಯಿತು.
ರಥೋತ್ಸವದ ಅಂಗವಾಗಿ ಶ್ರೀ ಭೋಗನಂದೀಶ್ವರ ಸ್ವಾಮಿಗೆ ಪುಷ್ಪಾಲಂಕಾರ ಮಾಡಿ ಬೆಳಗ್ಗೆಯಿಂದಲೇ ಕ್ಷೀರಾಭಿಷೇಕ, ಗಂಧಾಭಿಷೇಕ, ತುಪ್ಪಾಭಿಷೇಕ ಸೇರಿದಂತೆ ವಿವಿಧ ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು, ಕೋಲಾರ, ತುಮಕೂರು ಸೇರಿದಂತೆ ಹೊರ ರಾಜ್ಯಗಳಿಂದಲೂ ಅಪಾರ ಸಂಖ್ಯೆಯಲ್ಲಿ ಆಗಮಿಸಿ ಜಾತ್ರೆಯ ಮೆರಗನ್ನು ಹೆಚ್ಚಿಸಿದರು. ಹಾಗೆಯೇ ಭಕ್ತರು ದೇವಾಲಯದ ಒಳಗಡೆಯಿರುವ ಬೃಹತ್ ಕಲ್ಯಾಣಿಯಲ್ಲಿ ವಿಶೇಷ ಪೂಜಾ ಕೈಂಕರ್ಯ ಕೈಗೊಂಡು ದೇವರಿಗೆ ನಮಿಸಿದರು. ಹಾಗೂ ಬಾಳೆಹಣ್ಣನ್ನು ದವಣ ರಥಕ್ಕೆ ಎಸೆದು ಶಿವನನ್ನು ಸ್ಮರಿಸಿದರು.

ಕಲಾ ತಂಡಗಳ ವಿವರ ಇಲ್ಲಿದೆ
ರಥೋತ್ಸವದಲ್ಲಿ ಗ್ರಾಮೀಣ ಭಾಗದ ಸೊಗಡು ಹಾಗೂ ಜನಪದ ಕಲೆಗಳ ಅರಿವು ಮೂಡಿಸಲಾಯಿತು. ಅಲ್ಲದೆ ಮೆರವಣಿಗೆಯಲ್ಲಿ ಭಾಗವಹಿದ್ದ ಕಣಿ ಹಲಗೆ, ತಮಟೆ, ಕೀಲುಕುದುರೆ, ಗಾರುಡಿ ಗೊಂಬೆ, ಡೊಳ್ಳು ಕುಣಿತ, ಕೊಂಬು ಕಹಳೆ, ಅರೆವಾದ್ಯ, ಗೊರವ ಕುಣಿತ, ಚಕ್ಕೆ ಕೋಲಾಟ, ಕರಗ ನೃತ್ಯ, ಲಂಬಾಣಿ ನೃತ್ಯ, ವಾದ್ಯ ಗೋಷ್ಠಿ ಗಮನ ಸೆಳೆದವು.

ಜಾತ್ರೆಗೆ ಆಗಮಿಸಿದ್ದ ಭಕ್ತರ ದಂಡು
ಜಾತ್ರೆ ಅಂಗವಾಗಿ ಭೋಗ ನಂದಿಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಪ್ರಸಾದ ವಿನಿಯೋಗವನ್ನು ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಹರಕೆ ಹೊತ್ತ ಸುತ್ತಮುತ್ತಲಿನ ಗ್ರಾಮಸ್ಥರಿಂದ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಣೆ ಮಾಡಲಾಯಿತು. ಅಲ್ಲದೆ, ರಸ್ತೆಯುದ್ದಕ್ಕೂ ಪೆಂಡಾಲ್‌ಗಳನ್ನು ಹಾಕಿಕೊಂಡು ಜಾತ್ರೆ ಮಹೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಕಲ್ಯಾಣಿಯ ವಿಶೇಷತೆ ಏನು?
ದೇವಾಲಯದ ಒಳ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಭಕ್ತರು ಪುಣ್ಯಸ್ನಾನ ಮಾಡಿದರಲ್ಲದೆ, ಅಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಕೈಗೊಂಡರು. ನಂದಿಯ ಕಲ್ಯಾಣಿಯಲ್ಲಿ ಸ್ನಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ಪ್ರತೀತಿಯೂ ಇದೆ. ಆದ್ದರಿಂದ ಬೆಳಗ್ಗೆಯಿಂದಲೇ ದೇವಾಲಯದತ್ತ ಆಗಮಿಸಿದ ಭಕ್ತರು ಕಲ್ಯಾಣಿ ಒಳಾಂಗಣದ ಕಟ್ಟೆಯ ಮೇಲೆ ಎಡೆಗಳನ್ನು ಇಟ್ಟು ಪೂಜಿಸಿದರು. ಇನ್ನು ಹರಕೆ ಹೊತ್ತ ಭಕ್ತರು ದೇವರಿಗೆ ಮುಡಿ ಕೊಟ್ಟು ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ನಂದಿಬೆಟ್ಟಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ
ಮಕ್ಕಳಿಗೆ ಖುಷಿ ನೀಡುವ ಪುಟಾಣಿ ರೈಲು, ಜಿಯಂಟ್ ವೀಲ್ ಸೇರಿದಂತೆ ಹಲವು ರೀತಿಯ ಆಟೋಟಗಳು ಜಾತ್ರೆಗೆ ಕಳೆ ನೀಡಿದ್ದವು. ರಸ್ತೆಯ ಇಕ್ಕೆಲಗಳಲ್ಲಿ ಕಡಲೇಪುರಿ, ಬತ್ತಾಸು ಸೇರಿದಂತೆ ಸಿಹಿ ತಿನಿಸುಗಳು, ಮಕ್ಕಳ ಆಟಿಕೆಗಳ ಮಳಿಗೆಗಳನ್ನು ತೆರೆಯಲಾಗಿತ್ತು. ಜಾತ್ರೆಯ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದೊಡ್ಡಬಳ್ಳಾಪುರದಿಂದ ನಂದಿ ಮತ್ತು ನಂದಿಬೆಟ್ಟಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಹುತೇಕ ಭಕ್ತರು ಸ್ವಂತ ಮತ್ತು ಖಾಸಗಿ, ಸಾರಿಗೆ ಬಸ್‌ಗಳಲ್ಲಿ ಜಾತ್ರೆಗೆ ಬಂದರೆ, ಕೆಲವರು ಕಾಲ್ನಡಿಗೆಯಲ್ಲಿ ಆಗಮಿಸಿದ್ದರು.
ಹತ್ತಿರದ ಊರುಗಳಿಂದ ಭಕ್ತರು ಟ್ರ್ಯಾಕ್ಟರ್, ಟಾಟ ಏಸ್ ಮತ್ತು ಹಳೇ ಸಂಪ್ರದಾಯದಂತೆ ಎತ್ತಿನ ಬಂಡಿಯಲ್ಲಿ ಜಾತ್ರೆಗೆ ಬಂದಿದ್ದು ಕಂಡು ಬಂದಿತು. ಬ್ರಹ್ಮ ರಥೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು.

ಜಿಲ್ಲಾಡಳಿತದ ವಿರುದ್ಧ ಆಕ್ರೋಶ
ಚಿಕ್ಕಬಳ್ಳಾಪುರ ತಾಲೂಕಿನ ನಂದಿಯ ಭೋಗ ನಂದೀಶ್ವರ ರಥದ ಚಕ್ರದ ಅಚ್ಚು ಮುರಿದು ನಿಂತಲ್ಲೇ ತಿಂತಿತ್ತು. ಇದನ್ನು ಗಮನಸಿದ ಸಾರ್ವಜನಿಕರು ಅಪಶಕುನವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ರಥದ ಮೆರವಣಿಗೆ ಆರಂಭವಾಗಿ ಸ್ವಲ್ಪ ದೂರ ಸಾಗುತ್ತಿದ್ದಂತೆಯೇ ಈ ಅಪಶಕನ ಜಗುಗಿದೆ ಎಂದು ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications