ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಸುಧಾಕರ್ ಪರ ಸಿನಿ ಸ್ಟಾರ್‌ಗಳಿಂದ ಅಬ್ಬರದ ಪ್ರಚಾರ, ಸೆಲೆಬ್ರೆಟಿಗಳು ಹೇಳುವುದೇನು?
ಚಿಕ್ಕಬಳ್ಳಾಪುರ, ಏಪ್ರಿಲ್, 30: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಚಿಕ್ಕಬಳ್ಳಾಪುರ ಕ್ಷೇತ್ರದಾದ್ಯಂತ ಚುನಾವಣಾ ಪ್ರಚಾರದ ಕಾವು ಏರತೊಡಗಿದೆ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದಾದ್ಯಂತ ಓಡಾಡಿ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ ರಣಕಣದಲ್ಲಿ ಚಿತ್ರರಂಗದ ತಾರೆಯರ ಆಗಮನದಿಂದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಚುನಾವಣಾ ಹುಮ್ಮಸ್ಸು ಹೆಚ್ಚಾಗಿದೆ.
ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಕ್ಷೇತ್ರ ಚಿಕ್ಕಬಳ್ಳಾಪುರ. ಕಾರಣ ಡಾ.ಕೆ.ಸುಧಾಕರ್ ಪ್ರತಿನಿಧಿಸುತ್ತಿರುವ ಕ್ಷೇತ್ರ ಆಗಿರುವುದರಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚಿತ್ರರಂಗದ ಕಿರುತೆರೆ ಹಾಗೂ ಸಿನಿಮಾ ನಟ, ನಟಿಯರು ಪ್ರಚಾರದಲ್ಲಿ ಕಾರ್ಯನಿರತರಾಗಿದ್ದಾರೆ.

ಅದರಲ್ಲೂ ಪ್ರಮುಖವಾಗಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ, ನಟಿ ಹರ್ಷಿಕಾ ಪೂಣಚ್ಚ, ನಟ ರಘು ಮುಖರ್ಜಿ ಹೀಗೆ ನಟ-ನಟಿಯರು ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಚುನಾವಣೆಯಂತೆ ಈ ಬಾರಿಯೂ ಚಿತ್ರರಂಗದ ಕಲಾವಿದರ ದಂಡೇ ಮತ ಪ್ರಚಾರದಲ್ಲಿ ತೊಡಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಜಿಲ್ಲಾದ್ಯಂತ ಸ್ಟಾರ್ ಪ್ರಚಾರಕರ ಅಬ್ಬರವೂ ಜೋರಾಗಲಿದೆ.
ಪ್ರತಿ ನಿತ್ಯ ಬೆಳ್ಳಂಬೆಳಗ್ಗೆ 8 ಗಂಟೆಯಿಂದಲೇ ಕಿರುತೆರೆ ಮತ್ತು ಚಲನಚಿತ್ರ ತಾರೆಯರಾದ ದಿಗಂತ್, ಅನು ಪ್ರಭಾಕರ್, ರಘು ಮುಖರ್ಜಿ, ನಟಿ ಹರ್ಷಿಕಾ ಪೂಣಚ್ಚ, ದಿವ್ಯ ಉರುಡುಗ ಹೀಗೆ ಹಲವು ಕಲಾವಿದರು ಕ್ಷೇತ್ರದಲ್ಲಿ ಬಿಡುವಿಲ್ಲದ ಪ್ರಚಾರ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಲಾವಿದರು ಪ್ರಚಾರದಲ್ಲಿ ತೊಡಗಿಕೊಳ್ಳುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪರ ಕ್ಷೇತ್ರದ ವಿವಿಧಡೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರೆ, ಮತ್ತೊಂದೆಡೆ ಕ್ಷೇತ್ರದ ನಾನಾ ಗ್ರಾಮಗಳಲ್ಲಿ ಕಿರುತೆರೆ ಮತ್ತು ಚಲನಚಿತ್ರ ತಾರೆಯರು ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.
ಕ್ಷೇತ್ರದಲ್ಲಿ ಕುಡಿಯುವ ನೀರು, ಬಯಲುಸೀಮೆಯ ಬರಡು ನೆಲದ ಕೆರೆಗಳಿಗೆ ಹೆಚ್‌ಎನ್ ವ್ಯಾಲಿಯ ನೀರು ತಂದಿರುವುದು, ಮೆಡಿಕಲ್ ಕಾಲೇಜು, ಮನೆ ಬಳಿಗೆ ಶಾಂತ ಮೊಬೈಲ್ ಕ್ಲಿನಿಕ್‌ನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ತಜ್ಞ ವೈದ್ಯರಿಂದ ಆರೋಗ್ಯ ಮತ್ತು ಉಚಿತ ಔಷಧಗಳ ವಿತರಣೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿ ಮತ ನೀಡುವಂತೆ ಮನವಿ ಮಾಡುವಲ್ಲಿ ನಿರತರಾಗಿದ್ದಾರೆ.
ಸುಧಾಕರ್ ಪರ ಮತಯಾಚನೆ
ಕ್ಷೇತ್ರದ ಹಲವು ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಂಬೆಳಗ್ಗೆ ತಾವು ಪ್ರಚಾರ ಮಾಡುವ ವ್ಯಾಪ್ತಿಯ ಸ್ಥಳೀಯ ಮುಖಂಡರ ಜೊತೆ ಕರಪತ್ರಗಳನ್ನು ಹಿಡಿದು ಮನೆ ಮನೆಗೂ ತೆರಳಿ ಡಾ.ಕೆ.ಸುಧಾಕರ್ ಪರ ಮತಯಾಚನೆ ಮಾಡುತ್ತಿದ್ದಾರೆ. ಅಲ್ಲದೆ ಕ್ಷೇತ್ರದ ಅಭಿವೃದ್ಧಿಗೆ ಮಾಡಿರುವ ಕೆಲಸ ಕಾರ್ಯಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡುತ್ತಿದ್ದಾರೆ. ಈ ವೇಳೆ ಮತದಾರರು ಕೂಡ ಸೆಲೆಬ್ರೆಟಿಗಳ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.
ಮತ್ತಷ್ಟು ಖ್ಯಾತ ನಟರ ಆಗಮನ ಸಾಧ್ಯತೆ
ಕ್ಷೇತ್ರದಲ್ಲಿ ಈಗಾಗಲೇ ಬೀಡು ಬಿಟ್ಟಿರುವ ಸೆಲಬ್ರಟಿಗಳ ಜೊತೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಘಟಾನುಘಟಿ ಚಲನಚಿತ್ರ ನಟ, ನಟಿಯರು ಆಗಮಿಸಿ ಪ್ರಚಾರದ ಅಖಾಡಕ್ಕೆ ಧುಮುಕಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಅಷ್ಟೇ ಅಲ್ಲದೆ ನಟ ಕಿಚ್ಚ ಸುದೀಪ್ ಸೇರಿದಂತೆ ಹಲವರು ಪ್ರಚಾರಕ್ಕೆ ಆಗಮಿಸುತ್ತಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆಗಳೂ ಈಗಾಗಲೇ ನಡೆದಿವೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ತೆಲುಗು ರಾಜ್ಯದ ನಂಟು ಹೆಚ್ಚಿದ್ದು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ ಮತ್ತು ಗೌರಿಬಿದನೂರು ವಿಧಾನಸಭಾ ಕ್ಷೇತ್ರಗಳಿಗೆ ಖ್ಯಾತ ತೆಲುಗು ನಟ ಪವನ್ ಕಲ್ಯಾಣ್, ಸಾಯಿ ಕುಮಾರ್ ಸೇರಿದಂತೆ ಹಲವರು ನಟ-ನಟಿಯರು ಆಗಮಿಸಲಿದ್ದಾರೆ ಎನ್ನುವ ಮಾತಿಯೂ ಲಭ್ಯವಾಗಿದೆ.
ಕುಟುಂಬದ ಸದಸ್ಯರಿಂದ ಮತಬೇಟೆ
ಮತ್ತೊಂದೆಡೆ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪತ್ನಿಯರೂ ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ. ಬಾಗೇಪಲ್ಲಿ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಸುಬ್ಬಾರೆಡ್ಡಿ ಅವರ ಪತ್ನಿ ಹಾಗೂ ಶಿಡ್ಲಘಟ್ಟದ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡರ ಪತ್ನಿ, ಗೌರಿಬಿದನೂರು ಸೇರಿದಂತೆ ಹಲವೆಡೆ ಅಭ್ಯರ್ಥಿಗಳ ಪತ್ನಿಯರೂ, ಕುಟುಂಬದ ಸದಸ್ಯರು ಹಾಗೂ ಗೆಳೆಯರೂ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹೀಗೆ ಮತದಾನ ದಿನಾಂಕ ಹತ್ತಿರವಾಗುತ್ತಿದ್ದಂತೆ ಚುನಾವಣೆಯ ಕಾವು ಮತ್ತಷ್ಟು ರಂಗು ಪಡೆದುಕೊಳ್ಳುತ್ತಿದೆ.
ಇನ್ನು ಪ್ರಚಾರದಲ್ಲಿ ತೊಡಗಿದ್ದ ಹರ್ಶಿಕಾ ಪೂಣಚ್ಚ ಮಾತನಾಡಿ, ಕಳೆದ ಚುನಾವಣೆಯಲ್ಲೂ ನಾವು ಡಾ.ಕೆ.ಸುಧಾಕರ್ ಅವರ ಪರ ಪ್ರಚಾರಕ್ಕೆ ಬಂದಿದ್ದೆವು. ನಾವು ಮನೆಗಳಿಗೆ ಹೋಗುವ ಮುಂಚೆಯೇ ಸುಧಾಕರ್ ಅವರ ಸಾಧನೆಗಳ ಬಗ್ಗೆ ಜನರೇ ಹೇಳುತ್ತಿದ್ದಾರೆ. ಹೀಗಾಗಿ ಪ್ರಚಾರ ಮಾಡಲು ತುಂಬಾ ಸಂತೋಷವಾಗುತ್ತಿದೆ. ಅಭಿವೃದ್ಧಿಗಾಗಿ ಮತ್ತೆ ಸುಧಾಕರ್ ಅವರಿಗೆ ಮತ ಕೊಡಿ ಎಂದು ಮನವಿ ಮಾಡಿದರು.
ನಂತರ ನಟ ದಿಗಂತ್ ಮಾತನಾಡಿ, ಡಾ.ಕೆ.ಸುಧಾಕರ್ ಅವರು ನನಗೆ ತುಂಬಾ ಆತ್ಮೀಯರು. ಸುಮಾರು ವರ್ಷಗಳಿಂದ ನಾವು ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದೇವೆ. ನೋಡಿದರೆ ಗೊತ್ತಾಗುತ್ತಿದೆ ಕ್ಷೇತ್ರದಲ್ಲಿ ಅಭಿವೃದ್ಧಿ ಹೇಗೆ ಆಗಿದೆ ಎಂದು. ಹೀಗಾಗಿ ಜನರೇ ಸ್ವಯಂ ಪ್ರೇರಿತರಾಗಿ ಅವರಿಗೆ ಮತ ಹಾಕಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications