• search
 • Live TV
ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಬಳ್ಳಾಪುರ ಸ್ಫೋಟ; ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

|
Google Oneindia Kannada News

ಚಿಕ್ಕಬಳ್ಳಾಪುರ, ಫೆಬ್ರವರಿ 23: ಚಿಕ್ಕಬಳ್ಳಾಪುರದ ಮಂಡಿಕಲ್ ಹೋಬಳಿಯ ಹಿರೇನಾಗವಲ್ಲಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿರುವ ಜಿಲೆಟಿನ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿರುವ ಈ ಘಟನೆ ಆಘಾತಕಾರಿಯಾಗಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಿಂದ ಹಾಗೂ ಉನ್ನತ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಸ್ಫೋಟ: ಮೃತರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಚಿಕ್ಕಬಳ್ಳಾಪುರ ಸ್ಫೋಟ: ಮೃತರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಇಲ್ಲಿನ ಮರವಾಸಿನಿ ಕ್ರಷರ್ ನಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿರುವ ಅರಣ್ಯಕ್ಕೆ ಬೈಕ್ ಹಾಗೂ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಹೊತ್ತು ತರುತ್ತಿದ್ದ ಸಂದರ್ಭ ಸ್ಫೋಟ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳಿ, ಅಭಿ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

   ದೇಣಿಗೆ ಸಂಗ್ರಹಿಸುವ ವಿಧಾನವನ್ನ ಪ್ರಶ್ನಿಸಿದ್ದೇನೆ ಹೊರತು, ರಾಮ ಮಂದಿರ ನಿರ್ಮಾಣವನ್ನಲ್ಲ | Oneindia Kannada

   ಸ್ಫೋಟ ನಡೆದ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರಿಗೆ ಸಂತಾಪ ಸೂಚಿಸಿ ಮೋದಿ ಟ್ವೀಟ್ ಮಾಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಕೂಡ ಘಟನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

   English summary
   CM Yediyurappa reacted to Chikkaballapur quarry blast and said death of six people shocking, orders high-level probe,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X