ಪಂಚ ಗ್ಯಾರೆಂಟಿಗಳಿಂದ ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಹಿನ್ನಡೆ- ಶಾಸಕ ಎಸ್ಎನ್ ಸುಬ್ಬಾರೆಡ್ಡಿ
ಚಿಕ್ಕಬಳ್ಳಾಪುರ ನವೆಂಬರ್ 16: ಜನತೆಗೆ ಸರಕಾರದ ಯೋಜನೆಗಳನ್ನು ತಲುಪಿಸುವ ಗುರಿ ನಮ್ಮದು, ಆದರೆ ಪಂಚ ಗ್ಯಾರೆಂಟಿಗಳಿಂದ ಅಭಿವೃದ್ಧಿಗೆ ಹಿನ್ನಡೆ ಆಗಿದೆ, ಆದರೂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ಹಾಕುತ್ತೇನೆ ಎಂದು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಹೇಳಿದ್ದಾರೆ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಕಂದಾಯ ಇಲಾಖೆ ಹಾಗೂ ತಾಲೂಕು ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದುಕೊರತೆ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿರುವ ಅನುದಾನವನ್ನು ಈಗ ಬಡವರ ಐದು ಗ್ಯಾರಂಟಿ ಯೋಜನೆಗಳಿಗೆ ನೀಡುವುದರಿಂದ ಈ ಕ್ಷೇತ್ರದ ಅಭಿವೃದ್ಧಿಗೆ ಸ್ವಲ್ಪ ಹಿನ್ನೆಡೆಯಾಗಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜನತೆಗೆ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ, ಮನೆ ಬಾಗಿಲ ಬಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಕರೆತಂದು ನೇರವಾಗಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವುದು ಜನಸ್ಪಂದನಾ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ನಮ್ಮ ಸರಕಾರದ ಐದು ಗ್ಯಾರಂಟಿಗಳು ಬಡವರಿಗೆ ವರದಾನವಾಗಿದ್ದು, ಇದನ್ನು ವಿರೋಧ ಪಕ್ಷದವರು ಗೇಲಿ ಮಾಡುತ್ತಿದ್ದಾರೆ, ಆದರೆ ಫಲಾನುಭವಿಗಳು ನಮ್ಮ ಸರಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ ಎಂದರು. ಬಡವರ ಕಷ್ಟ ನಿವಾರಣೆ ಕಾರ್ಯಕ್ರಮವಾಗಿದ್ದು ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಬಡವರು ಕಚೇರಿಗಳ ಸುತ್ತಾ ಅಲೆದಾಡುವುದು ತಪ್ಪುತ್ತದೆ, ಇದರಿಂದ ಸಮಯ ಹಾಗೂ ಹಣ ಉಳಿತಾಯವಾಗುತ್ತದೆ ಎಂದು ತಿಳಿಸಿದರು.
ಸರಕಾರದಿಂದ ಹೆಚ್ಚಿನ ಅನುದಾನ ತರುವ ಮೂಲಕ ನನ್ನ ವ್ಯಾಪ್ತಿಯ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆಂದರು, ಕಾರ್ಯಕ್ರಮದಲ್ಲಿ ವೃದ್ಧಾಪ್ಯ ವೇತನ, ಪಡಿತರ ಚೀಟಿ, ಪೌತಿ ಖಾತೆ ಸೇರಿ ಇತರೆ ಸಮಸ್ಯೆಗಳು ಇರುತ್ತವೆ, ಅಂತಹವರಿಗಾಗಿ ಈ ಕಾರ್ಯಕ್ರಮ ಹೆಚ್ಚು ಅನುಕೂಲವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಆರೋಗ್ಯ ಶಿಬಿರದ ವ್ಯವಸ್ಥೆ ಮಾಡಲಾಗಿತ್ತು, ದರಖಾಸ್ತು ಅರ್ಜಿಗಳ ಬಗ್ಗೆ ಪರಿಶೀಲಿಸಿ ಜಮೀನು ಮಂಜೂರು ಮಾಡುತ್ತೇವೆ, ನಮೂನೆ 53ರಲ್ಲಿ ಜಮೀನು ಮಂಜೂರುಗಾಗಿ ಅರ್ಜಿ ಸಲ್ಲಿಸಿದವರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡುತ್ತೇವೆ, ಇನ್ನು ನಮೂನೆ 57 ರ ಅರ್ಜಿಗಳನ್ನು ಒಂದು ವರ್ಷದ ನಂತರ ಇತ್ಯರ್ಥಪಡಿಸಲಾಗುತ್ತದೆಂದರು.
ಇತ್ತೀಚಿನ ವರ್ಷಗಳಲ್ಲಿ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಾಲ್ಯವಿವಾಹ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪೋಷಕರು ತಮ್ಮ ಮಕ್ಕಳಿಗೆ 18 ವರ್ಷ ಮುಗಿಯುವ ತನಕ ಮದುವೆ ಮಾಡಬಾರದು, ನಿಮ್ಮ ಮಕ್ಕಳಿಗೆ 18 ತುಂಬಿದ ಬಳಿಕ ಮದುವೆ ಮಾಡಲು ನಿಮಗೆ ಆರ್ಥಿಕವಾಗಿ ಸಮಸ್ಯೆ ಇದ್ದಲ್ಲಿ ತಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷವೂ ಸಹ ಸಾಮೂಹಿಕ ವಿವಾಹಗಳನ್ನು ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ನಂತರ ತಹಶಿಲ್ದಾರ್ ಸಿಗ್ಬತ್ ವುಲ್ಲಾ ಪ್ರಸ್ತಾವಿಕ ನುಡಿಗಳನ್ನಾಡಿ, ಅಣ್ಣತಮ್ಮಂದಿರ ಗಲಾಟೆಗಳು ಸೇರಿ ಇತರೆ ಸಮಸ್ಯೆಗಳಿಂದ ಪೌತಿ ಖಾತೆ ಮಾಡಿಸಿಕೊಳ್ಳಲು ಆಗದೇ ಇರುವವರು ಒಗ್ಗೂಡಿ ಪೌತಿ ಖಾತೆಗಳನ್ನು ಮಾಡಿಸಿಕೊಳ್ಳುವಂತೆ, ಅತಿವೃಷ್ಟಿ ಮತ್ತು ಅನಾವೃಷ್ಟಿಗಳು ಆದಾಗ ಸರ್ಕಾರದಿಂದ ಪರಿಹಾರ ನೀಡುತ್ತಾರೆ ಅಂತಹ ಸಮಸ್ಯೆಗೆ ಸಿಲುಕಿದವರು ಅರ್ಜಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಿ ಎಂದರು.
ಈಗಾಗಲೇ ತಾಲೂಕನ್ನು ಪೋಡಿ ಮುಕ್ತ ಮಾಡಲಾಗಿದೆ, ತಾಲೂಕಿನಲ್ಲಿರುವ ಅನೇಕ ಸರ್ವೆ ನಂಬರ್ ಗಳನ್ನು ದುರಸ್ತಿ ಮಾಡಲಾಗುತ್ತಿದ್ದು, ಈಗಾಗಲೇ 19 ಸರ್ವೆ ನಂಬರ್ ಗಲನ್ನು ದುರಸ್ಥಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ದುರಸ್ಥಿ ಮಾಡಿ, ಜನರಿಗೆ ಅನುಕೂಲ ಮಾಡಿಕೊಡಲಾಗುತ್ತದೆ, ಎಲ್ಲಾ ಅಧಿಕಾರಿಗಳು ತಮ್ಮ ಗ್ರಾಮಕ್ಕೆ ಬಂದಿದ್ದು, ತಮಗೆ ಸಮಸ್ಯೆಗಳು ಇದ್ದಲ್ಲಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿ ಇತ್ಯರ್ಥಪಡಿಸಿಕೊಳ್ಳಿ ಎಂದು ತಿಳಿಸಿದರು.
ಇನ್ನು ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಸಿಗುತ್ತಿರುವ ಸವಲತ್ತುಗಳ ಬಗ್ಗೆ ತಿಳಿಸಿಕೊಟ್ಟರು. ಸಭೆಯಲ್ಲಿ ಕೃಷಿ ಇಲಾಖೆ, ತೊಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಸಿಡಿಪಿಒ ಇಲಾಖೆ, ಅರಣ್ಯ ಇಲಾಖೆ ಸೇರಿ ಇತರೆ ಇಲಾಖೆಗಳಿಂದ ಅಂಗಡಿಮಳಿಗೆಗಳನ್ನು ತೆರೆದು ಸರಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗಿತ್ತು. ಇದೇ ವೇಳೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಅರ್ಹ ರೈತರಿಗೆ ಯಂತ್ರೋಪಕರಣಗಳನ್ನು ಶಾಸಕರು ವಿತರಿಸಿದರು.
ಇನ್ನು ಈ ವೇಳೆ ತಾ.ಪಂ.ಇಒ ಹೇಮಾತಿ, ಬೀಚಗಾನಹಳ್ಳಿ ಗ್ರಾ.ಪಂ.ಅಧ್ತಕ್ಷೆ ಶಾಂತಮ್ಮ ಮಹದೇವಪ್ಪ , ಉಪಾಧ್ಯಕ್ಷ ರಮೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೇಶವರೆಡ್ಡಿ, ತೋಟಗಾರಿಕ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಪಶು ಸಂಗೋಪನೆ ಇಲಾಖೆಯ ಸುಬ್ರಮಣಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಲಕ್ಷ್ಮೀಪತಿರೆಡ್ಡಿ, ಸಿಡಿಪಿಒ ರಫೀಕ್, ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ಬಿಸಿಎಂ ಇಲಾಖೆಯ ವಿಸ್ತರಣಾಧಿಕಾರಿ ಶಂಕರಪ್ಪ, ಮುಖಂಡ ನರೇಂದ್ರ, ಬಾಲೇನಹಳ್ಳಿ ರಮೇಶ್ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾ.ಪಂ.ಸದಸ್ಯರು ಹಾಗೂ ಮುಖಂಡರು ಇದ್ದರು.
-
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications