ಚಿಕ್ಕಬಳ್ಳಾಪುರ ಚುನಾವಣಾ ಫಲಿತಾಂಶ 2023:ಕಾಂಗ್ರೆಸ್‌ ಅಭ್ಯರ್ಥಿ ಗೆಲುವು, ಡಾ.ಕೆ ಸುಧಾಕರ್‌ಗೆ ಭಾರೀ ಮುಖಭಂಗ

ಚಿಕ್ಕಬಳ್ಳಾಪುರ, ಮೇ 13:ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್‌ಗೆ ಭಾರೀ ಮುಖಭಂಗವಾಗಿದೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಏಳನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬೆಳಗ್ಗೆ 10:38 ರ ವೇಳೆಗೆ ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್‌ 2,792 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬೆಳಗ್ಗೆ 10:05 ಸಮಯಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್‌ 2,565 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

Chikkaballapur Assembly Election Result 2023

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬೆಳಗ್ಗೆ 9:05 ಸಮಯಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ್‌ ಈಶ್ವರ್‌ ಮುನ್ನಡೆ ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಡಾ.ಕೆ ಸುಧಾಕರ್‌ ಮುನ್ನಡೆ ಸಾಧಿಸಿದ್ದಾರೆ.

ಕರ್ನಾಟಕ ಜನತೆಯ ತೀವ್ರ ಕುತೂಹಲಕ್ಕೆ ಇನ್ನೇನು ಕೆಲವೇ ಗಂಟೆಗಳಲ್ಲಿ ತೆರೆ ಬೀಳಲಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಹೊರ ಬೀಳಲಿದೆ. ರಾಜ್ಯಾದ್ಯಂತ ಇದೀಗ ಕುತೂಹಲ ಗರಿಗೆದರಿದ್ದು, ಚಿಕ್ಕಬಳ್ಳಾಪುರದ ಚಕ್ರಾಧಿಪತ್ಯ ಯಾರ ಪಾಲಾಗಲಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ.

Chikkaballapur Assembly Election Result 2023

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕಿಂತ ವ್ಯಕ್ತಿಯ ವರ್ಚಸ್ಸೇ ಹೆಚ್ಚು, ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವಾಗಿ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಭದ್ರಕೋಟೆ. ಇಲ್ಲಿ ಪಕ್ಷಕ್ಕಿಂತ ವ್ಯಕ್ತಿಗೆ ಜನ ಬೆಂಬಲವಿದ್ದು, ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರೂ ಸುಧಾಕರ್ ಮಾತ್ರ ಸೋಲಿಲ್ಲದ ಸರದಾರನಂತೆ ಅಧಿಕಾರದಲ್ಲಿಯೇ ಮುಂದೆ ಸಾಗುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಅವರದ್ದೇ ಪ್ರಾಬಲ್ಯ ಹೆಚ್ಚಾಗಿದ್ದು, ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸುಧಾಕರ್, ಬಿಜೆಪಿ ಸೇರಿ ಈಗ ಎರಡನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇನ್ನು ಈ ಬಾರಿ ಶತಾಯಗತಾಯ ಬಿಜೆಪಿಗೆ ಸೋಲುಣಿಸಬೇಕು ಮುಖ್ಯವಾಗಿ ಸಚಿವ ಸುಧಾಕರ್‌ಗೆ ಸೋಲಿನ ರುಚಿ ಉಣಿಸಬೇಕೆಂದು ಕಾಂಗ್ರೆಸ್‌ ಪಣತೊಟ್ಟಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪ್ರದೀಪ್‌ ಈಶ್ವರ್‌ ಅವರನ್ನು ಕಣಕ್ಕಿಳಿಸಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳು

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರದೀಪ್ ಈಶ್ವರ, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಪಿಲ್ಲ ಅಂಜಿನಪ್ಪ, ಜೆಡಿಎಸ್ / ಜನತಾ ದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ, ಆಮ್ ಆದ್ಮೀ ಪಕ್ಷದ ಅಭ್ಯರ್ಥಿ ಎಂ.ಎಂ. ಪಾಷ

ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ.ಕೆ.ಸುಧಕಾರ್, ಕರ್ನಾಟಕ ರಾಷ್ಟ್ರಸಮಿತಿ ಪದಕ್ಷದ ಅಭ್ಯರ್ಥಿಯಾಗಿ ಅಂಜಿನಪ್ಪ ಪಿ, ಹಾಗೂ 5 ಪಕ್ಷೇತರರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಣದಲ್ಲಿದ್ದಾರೆ.

2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎ.ವಿ.ಭೈರೇಗೌಡ ಅವರು 3,910 ಮತಗಳನ್ನು ಪಡೆದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ.ಜಿ.ವಿ.ಮಂಜುನಾಥ್ 5,576 ಮತಗಳನ್ನು ಪಡೆದಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಬಿಜೆಪಿಗೆ ಸೇರ್ಪಡೆಯಾದ ಮೇಲೆ ಹೊಸ ಬಲ ಬರುತ್ತದೆ.

ಸುಧಾಕರ್‌ ಬಿಜೆಪಿ ಸೇರ್ಪಡೆಯಾದ ಬಳಿಕ ನಡೆದ ಉಪಚುನಾವಣೆಯಲ್ಲಿ ಸುಧಾಕರ್ 84,389 ಮತಗಳನ್ನು ಪಡೆದು 34,801 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ ಅಂಜನಪ್ಪ ಅವರನ್ನು ಸೋಲಿಸಿದ್ದರು. ಕಾಂಗ್ರೆಸ್‌ ಈ ಬಾರಿ ಹೊಸ ಮುಖಕಕ್ಕೆ ಮಣೆ ಹಾಕಿದ ಕಾರಣ ಸುಧಾಕರ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಕಾಂಗ್ರೆಸ್ ಈ ಬಾರಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರದೀಪ್ ಈಶ್ವರ್ ಐಯ್ಯರ್ ಎಂಬ ಹೊಸ ಮುಖಕ್ಕೆ ಮಣೆ ಹಾಕಿದೆ. ಯುವ ಸಮೂಹವನ್ನೇ ಗುರಿಯಾಗಿಸಿಕೊಂಡು ತಮ್ಮ ಪ್ರಖರ ಮಾತುಗಳಿಂದ ಜನರನ್ನು ಸೆಳೆಯುತ್ತಿದ್ದ ಪ್ರದೀಪ್ ಈಶ್ವರ್ ಈ ಬಾರಿ ಗೆಲುವು ಸಾಧಿಸಿ ಮತ್ತೆ ಚಿಕ್ಕಬಳ್ಳಾಪುರವನ್ನು ಕಾಂಗ್ರೆಸ್ ಭದ್ರಕೋಟೆ ಮಾಡುತ್ತಾರೆ ಎಂಬ ಬಗ್ಗೆ ನಿರೀಕ್ಷೆ ಕೂಡ ಇದೆ.

ಇನ್ನು ಜೆಡಿಎಸ್‌ ಅಭ್ಯರ್ಥಿ ಕೆ.ಪಿ ಬಚ್ಚೇಗೌಡ ಅವರು 2008ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಡಾ.ಕೆ ಸುಧಾಕರ್, ಕೆ.ಪಿ ಬಚ್ಚೇಗೌಡ ಅವರನ್ನು ಸೋಲಿಸಿ ಶಾಸಕರಾದರು. ಸುಧಾಕರ್ 74,914 ಮತಗಳನ್ನು ಪಡೆದರೆ ಬಚ್ಚೇಗೌಡರು 59,866 ಮತಗಳನ್ನು ಪಡೆದು 15,048 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿಯೂ ಕಣದಲ್ಲಿರುವ ಕೆ.ಪಿ ಬಚ್ಚೇಗೌಡ ಅವರು ಗೆಲುವಿನ ಲೆಕ್ಕಾಚಾರದಲ್ಲಿದ್ದಾರೆ.

ಇನ್ನು ಚಿಕ್ಕಬಳ್ಳಾಪುರು ವಿಧಾನಸಭಾ ಕ್ಷೇತ್ರದಲ್ಲಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ, ಚಿಕ್ಕಬಳ್ಳಾಪರ ವಿಧಾನಸಭಾ ಕ್ಷೇತ್ರ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಹಾಗೂ ಚಿಂತಾಮಣಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು ಐದು ಕೇತ್ರಗಳಿದ್ದು, ಎಪತ್ತು ಜನ ಅಭ್ಯರ್ಥಿಗಳು ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+