• search
 • Live TV
ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟದಲ್ಲಿ ಐವರು ಸಾವು, ಓರ್ವನಿಗೆ ಗಾಯ

|
Google Oneindia Kannada News

ಚಿಕ್ಕಬಳ್ಳಾಪುರ, ಫೆಬ್ರವರಿ.23: ಶಿವಮೊಗ್ಗದಲ್ಲಿ ಸಂಭವಿಸಿದ ಸ್ಫೋಟದ ಘಟನೆ ಮಾಸುವ ಮೊದಲೇ ಚಿಕ್ಕಬಳ್ಳಾಪುರದಲ್ಲಿ ಅಂಥದ್ದೆ ದುರ್ಘಟನೆ ಮರುಕಳಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಮಂಡಿಕಲ್ ಹೋಬಳಿಯ ಹಿರೇನಾಗವಲ್ಲಿ ಗ್ರಾಮದಲ್ಲಿ ಸಂಭವಿಸಿರುವ ಜಿಲೆಟಿನ್ ಸ್ಫೋಟದಿಂದಾಗಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿರುವ ಘಟನೆ ನಡೆದಿದೆ.

ಭ್ರಮರವಾಸಿನಿ ಕ್ರಷರ್ ನಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿ ಇರುವ ಅರಣ್ಯದಲ್ಲಿ ಈ ಸ್ಫೋಟ ಸಂಭವಿಸಿದ್ದು, ಮೃತದೇಹಗಳು ಛಿದ್ರ ಛಿದ್ರಗೊಂಡಿವೆ. ಗಾಯಗೊಂಡ ಚಾಲಕ ರಿಯಾಜ್ ಎಂಬುವವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದಲ್ಲಿ ಬಾರೀ ಸ್ಫೋಟ; ಕಲ್ಲು ಕ್ರಷರ್ ಲೈಸೆನ್ಸ್ ರದ್ದು ಶಿವಮೊಗ್ಗದಲ್ಲಿ ಬಾರೀ ಸ್ಫೋಟ; ಕಲ್ಲು ಕ್ರಷರ್ ಲೈಸೆನ್ಸ್ ರದ್ದು

ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳಿ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.


ಅಕ್ರಮ ಜಿಲೆಟಿನ್ ಹೊತ್ತು ತರುವ ಪ್ರಯತ್ನ:

ಭ್ರಮರವಾಸಿನಿ ಕ್ರಷನ್ ನಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿ ಇರುವ ಅರಣ್ಯದಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಮತ್ತು ಎಲೆಕ್ಟ್ರಿಕ್ ಡಿಟೋನೇಟರ್ಸ್ ಅನ್ನು ಹೊತ್ತು ತರಲು ಒಬ್ಬರು ಬೈಕ್ ನಲ್ಲಿ ಮುಂದೆ ಸಾಗಿದರೆ ನಾಲ್ವರು ಟಾಟಾ ಏಸ್ ನಲ್ಲಿ ತೆರಳಿದ್ದರು. ಈ ವೇಳೆ ಜಿಲೆಟಿನ್ ಸ್ಫೋಟದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

   ಚಿಕ್ಕಬಳ್ಳಾಪುರ:ಹುಣಸೋಡು ದುರಂತ ಮಾಸುವ ಮುನ್ನವೇ ಮತ್ತೊಂದು ಸ್ಫೋಟ-ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಛಿದ್ರ | Oneindia Kannada

   ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಮರವಾಸಿನಿ ಕ್ರಷರ್ ಮಾಲೀಕ ಹಾಗೂ ಸ್ಥಳೀಯ ಬಿಜೆಪಿ ಮುಖಂಡರೂ ಆಗಿರುವ ನಾಗರಾಜು, ಆಂಧ್ರ ಪ್ರದೇಶ ಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಎಂದು ತಿಳಿದು ಬಂದಿದೆ.

   English summary
   Chikkaballapur Gelatin Blast : 5 Killed And 1 Injured. For More Information Read Here.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X