ಚಿಕ್ಕಬಳ್ಳಾಪುರ: ಮಾರ್ಚ್‌1ರಿಂದ ಸರ್ಕಾರಿ ನೌಕರರಿಗೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆ ಮತ್ತು ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘವು ಮಾರ್ಚ್‌1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದೆ.

ಚಿಕ್ಕಬಳ್ಳಾಪುರ, ಫೆಬ್ರವರಿ 28: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆ ಮತ್ತು ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘವು ಮಾರ್ಚ್‌1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದೆ.

ಆ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಸರ್ಕಾರಿ ಅಧಿಕಾರಿಗಳು, ನೌಕರರು ಮುಷ್ಕರ ನಡೆಸಲಿದ್ದು, ಆಡಳಿತ ವರ್ಗದ ಎಲ್ಲ ಅಧಿಕಾರಿಗಳು, ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರವನ್ನು ಬೆಂಬಲಿಸಿ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಜಿ.ಹರೀಶ್ ಕರೆ ನೀಡಿದರು.

Chikkaballapur Government Employees Call For Indefinite Strike

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಕೆಲಸ ನಿರ್ವಹಿಸದೆ ಮುಷ್ಕರ ಬೆಂಬಲಿಸುತ್ತಾರೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಇದು ನೌಕರರಲ್ಲಿ ನಿರಾಸೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಜಾರಿಗೊಳಿಸಬೇಕಾಗಿತ್ತು ಎಂದರು.

ಆಯೋಗದ ಮುಂದೆ ಸಂಘವು ವೇತನ, ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಆದರೂ ಯಾವುದೇ ಕ್ರಮಕೈಗೊಂಡಿಲ್ಲ. ಇದರಿಂದ ಮುಷ್ಕರ ಅನಿವಾರ್ಯ. ಮಾರ್ಚ್1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಗೈರಾಗುವ ಮೂಲಕ ಮುಷ್ಕರಕ್ಕೆ ಬೆಂಬಲಿಸಬೇಕು. ಈ ವಿಚಾರವಾಗಿ ಸಂಘವು ಜಿಲ್ಲಾ, ತಾಲೂಕು ಸರ್ಕಾರಿ ಅಧಿಕಾರಿ, ನೌಕರರಲ್ಲಿ ಮನವಿ ಮಾಡಿದೆ ಎಂದರು.

Chikkaballapur Government Employees Call For Indefinite Strike

6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿ ಪಡೆದು ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ 40ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು 2022ರ ಜುಲೈನಿಂದ ಜಾರಿಗೆ ಬರುವಂತೆ ಆದೇಶಿಸಬೇಕು ಎಂದರು.

ರಾಜ್ಯದ ಎನ್.ಪಿ.ಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಕಷ್ಟಕ್ಕೆ ಸಿಲುಕಿದೆ. ಎನ್.ಪಿ.ಎಸ್ ನೌಕರರನ್ನು ಒ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತಿಸ್‌ಘಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿಯೂ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+