Chikkaballapur: ಸರ್ಕಾರಿ ನೌಕರರ ಸಂಘದ ಚುನಾವಣೆ: ನಿರ್ದೇಶಕ ಸ್ಥಾನದ ಆಕಾಂಕ್ಷಿಗಳಲ್ಲಿ ಹೆಚ್ಚಿದ ಕಾವು
ಚಿಕ್ಕಬಳ್ಳಾಪುರ ಅಕ್ಟೋಬರ್ 9: ರಾಜ್ಯ ಸರಕಾರಿ ನೌಕರರ ಸಂಘದ 2024 ರಿಂದ 2029 ರ ಅವಧಿಯ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚಿದ್ದು, ತಾಲೂಕಿನ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ನಿರ್ದೇಶಕ ಸ್ಥಾನಕ್ಕೆ ಯಾರನ್ನು ಅಭ್ಯರ್ಥಿ ಸ್ಥಾನಕ್ಕೆ ಆಯ್ಕೆ ಮಾಡಬೇಕು, ಯಾರನ್ನು ಅಭ್ಯರ್ಥಿ ಮಾಡಿದರೆ ಗೆಲುವು ಸಿಗಬಹುದೆಂಬ ಎಂಬ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ.
ಗುಡಿಬಂಡೆ ತಾಲೂಕಿನ ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿ, ಬುಧವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಅ.18 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದ್ದು, ನಾಮಪತ್ರ ವಾಪಸ್ಸು ಪಡೆಯಲು ಅ.21 ಅ.28 ರಂದು ಚುನಾವಣೆ ನಡೆಯಲಿದ್ದು, ಮತ ಎಣಿಕೆಯು ಅ.28 ರಂದು ನಡೆಯಲಿದ್ದು ವಿಜೇತರ ಘೋಷಣೆಯೂ ಸದರಿ ದಿನ ನಡೆಯಲಿದೆ.

ರಾಜ್ಯ ಸರಕಾರಿ ನೌಕರರ ವಿವಿಧ ಇಲಾಖೆಗಳಿಗಿಂತ ಶಿಕ್ಷಣ ಇಲಾಖೆಯಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ವಿಶೇಷವಾಗಿ ಶಿಕ್ಷಣ ಇಲಾಖೆಯ ನೌಕರರಲ್ಲೇ ಅತೀ ಹೆಚ್ಚು ಪೈಪೋಟಿ ಇದ್ದು, ಹಲವು ಶಿಕ್ಷಕರ ಗುಂಪುಗಳು ಈಗಾಗಲೇ ತೆರೆ ಮರೆಯಲ್ಲಿ ಕಸರತ್ತು ಜೋರಾಗಿ ನಡೆಯುತ್ತಿವೆ, ಗೆಲ್ಲಬಹುದಾದ ಅಭ್ಯರ್ಥಿಗಳ ಗುಂಪು ಕಟ್ಟಿಕೊಂಡು ಚುನಾವಣೆ ಎದುರಿಸುವ ಲೆಕ್ಕಾಚಾರ ನಡೆಯುತ್ತಿದೆ, ಮತ್ತೊಂದೆಡೆ ವಿವಿಧ ಇಲಾಖೆಗಳಲ್ಲಿ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯುವ ನಿರೀಕ್ಷೆಯೂ ಹೆಚ್ಚಿದೆ.
ಕಳೆದ ಚುನಾವಣೆಯಲ್ಲಿ ಜಯಶೀಲರಾಗಿದ್ದ ನಿರ್ದೇಶಕರೆಲ್ಲರನ್ನೂ ಕೆಲವು ಇಲಾಖೆಗಳಲ್ಲಿ ಮತ್ತೊಮ್ಮೆ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ಕೆಲವು ಇಲಾಖೆಗಳಲ್ಲಿ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದ್ದು, ಪ್ರಾಥಮಿಕ, ಹಿರಿಯ ಹಾಗೂ ಪ್ರೌಢಶಾಲೆಗಳಲ್ಲಿ ಜಿದ್ದಾ ಜಿದ್ದಿನ ಪೈಪೋಟಿ ನಡೆಯುವುದಂತೂ ಖಚಿತವಾಗಿದ್ದು ಯಾರಿಗೆ ಅದೃಷ್ಟ ಒಳಿಯುತ್ತದೋ ಕಾದು ನೋಡಬೇಕು.
ಇಲಾಖವಾರು ಮತ ಕ್ಷೇತ್ರಗಳು ?
ಕೃಷಿ ಇಲಾಖೆ 1, ಪಶು ಸಂಗೋಪನೆ 1, ಕಂದಾಯ ಇಲಾಖೆ 2, ಪಂಚಾಯತ್ ರಾಜ್ ಇಂಜನಿಯರಿಂಗ್ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ 1, ಪ್ರಾಥಮಿಕ ಕಿರಿಯ ಮತ್ತು ಹಿರಿಯ ಶಾಲೆ 4, ಪ್ರೌಢಶಾಲೆ 1, ಸರ್ಕಾರಿ ಶಿಕ್ಷಣ ಇಲಾಖೆ ಆಡಳಿತ ಕಚೇರಿ 1, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು 1, ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆ 1, ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆ ಸೇರಿ 1, ವಲಯ ಅರಣ್ಯ ಇಲಾಖೆ 1, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 4, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 1, ಉಪ ಖಜಾನೆ ಇಲಾಖೆ ಮತ್ತು ಸಾಮಾಜಿಕ ಅರಣ್ಯ ಇಲಾಖೆ 1, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ 1, ನ್ಯಾಯಾಂಗ ಇಲಾಖೆ 1 ಮತ್ತು ಗ್ರಾಮೀಣ ಮತ್ತು ಪಂಚಾಯತ್ ಇಲಾಖೆ, ತಾಲೂಕು ಪಂಚಾಯತಿ ಹಾಗೂ ಕ್ಷೇತ್ರ ಸಿಬ್ಬಂದಿ 2, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 1, ಉಪಾನೋಂದಣಿ ಮತ್ತು ಮುದ್ರಾನಕ ಗಳ ಇಲಾಖೆ ಹಾಗೂ ಪಟ್ಟಣ ಪಂಚಾಯತಿ ಕಾರ್ಯಾಲಯ 1 ಸ್ಥಾನಗಳು ಸೇರಿ ಒಟ್ಟು 27 ನಿರ್ದೇಶಕರ ಆಯ್ಕೆ ನಡೆಯಲಿದೆ.
ಮತದಾರರು ಎಷ್ಟು?
ಕೃಷಿ 5 ಜನ, ಪಶು ಸಂಗೋಪನ ಇಲಾಖೆ 14, ಕಂದಾಯ ಇಲಾಖೆ 23, ಪಂಚಾಯತ್ ರಾಜ್ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 3, ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ 198, ಪ್ರಾಢಶಾಲೆ 86, ಶಾಲಾ ಶಿಕ್ಷಣ ಇಲಾಖೆ 8, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು 18, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಇಲಾಖೆ 18, ವಲಯ ಅರಣ್ಯ ಇಲಾಖೆ 6, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 33, ತೋಟಗಾರಿಕೆ ಮತ್ತು ರೇಷ್ಮೆ 4, ಉಪ ಖಜಾನೆ ಮತ್ತು ಸಾಮಾಜಿಕ ಅರಣ್ಯಧಿಕಾರಿಗಳ ಕಚೇರಿ 4, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಚೇರಿ 13, ನ್ಯಾಯಾಂಗ ಇಲಾಖೆ 18, ಗ್ರಾಮೀಣಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ 16, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 3, ಉಪನೋಂದಣಿ, ಮುದ್ರಾಅಂಕ ಮತ್ತು ಪಟ್ಟಣ ಪಂಚಾಯತಿ 3, ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆ 5 ಜನ ಮತದಾನದ ಹಕ್ಕು ಪಡೆದಿದ್ದು ಒಟ್ಟಾರೆಯಾಗಿ ತಾಲೂಕಿನಲ್ಲಿ 478 ಜನ ನೌಕರರು ಮತದಾನದ ಹಕ್ಕು ಚಲಾಯಿಸಲಿದ್ದಾರೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣಾ ಅಧಿಕಾರಿಯಾದ ಎ. ರವೀಂದ್ರ ತಿಳಿಸಿದರು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು










Click it and Unblock the Notifications