ಚಿಕ್ಕಬಳ್ಳಾಪುರದ 99 ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಜಾಥಾ ಸಂಚಾರ ಯಶಸ್ವಿ
ಚಿಕ್ಕಬಳ್ಳಾಪುರ ಫೆಬ್ರವರಿ 14: ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ಈಗಾಗಲೇ ಜಿಲ್ಲೆಯ 157 ಗ್ರಾಪಂಗಳಲ್ಲಿ 99 ಗ್ರಾಮ ಪಂಚಾಯಿತಿ 4 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತ ವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ ತಿಳಿಸಿದರು.
ಜಿಲ್ಲಾ ಪಂಚಾಯತಿ ಡಾ.ಎಚ್.ನರಸಿಂಹಯ್ಯ ಮಿನಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದ ಪ್ರಮುಖ ರಸ್ತೆಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು, ಸಂವಿಧಾನ ಕುರಿತ ಕರಪತ್ರಗಳನ್ನು ಹಂಚುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸ ಲಾಗುತ್ತಿದೆ. ಹೋದ ಕಡೆಯಲ್ಲೆಲ್ಲ ಜನರಿಂದ ಉತ್ತಮ ಸಂದನೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಎಲ್ಲ ತಾಲೂಕು ಕೇಂದ್ರಗಳಲ್ಲೂ ಶಾಸಕರೇ ಬಂದು ಸಂವಿಧಾನ ಜಾಗೃತಿ ಜಾಥಾವನ್ನು ಸ್ವಾಗತಿಸಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳು ಭಾಗಿಯಾಗಿ ಯಶಸ್ವಿಯಾಗಿ ಜಾಥಾ ನಡೆಯುತ್ತಿದೆ. ಸಂವಿ ಧಾನ ಜಾಗೃತಿ ಜಾಥಾ ಮೂಲಕ ಮೀಸಲಾತಿ, ಹಕ್ಕು, ಕರ್ತ ವ್ಯಗಳು ಮತ್ತು ಸಬಲೀಕರಣದ ಮಹತ್ವವನ್ನು ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಯ ಪ್ರವೇಶಿಸಿದ್ದು, ತಾಲೂಕಿನ 35 ಗ್ರಾಮ ಪಂಚಾಯಿತಿ ಚಿಕ್ಕಬಳ್ಳಾಪುರ, ಮಂಚೇನಹಳ್ಳಿ, ಗೌರಿಬಿದನೂರು ಗುಡಿಬಂಡೆ, ಬಾಗೇಪಲ್ಲಿ ಮತ್ತು ಚೇಳೂರು ತಾಲೂಕುಗಳ ಒಟ್ಟು 99 ಗ್ರಾಮ ಪಂಚಾಯಿತಿಗಳು ಹಾಗೂ 04 ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸಿ, ಪ್ರಸ್ತುತ ಚಿಂತಾಮಣಿ ತಾಲೂಕು ವ್ಯಾಪ್ತಿಗೆ ಪ್ರವೇಶಿಸಿದ್ದು, ತಾಲೂಕಿನ 35 ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ವ್ಯಾಪ್ತಿಯಲ್ಲಿ ಸಂಚಾರ ನಡೆಯಲಿದೆ ಎಂದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಕಲಾ ತಂಡಗಳಿಂದ ಡೊಳ್ಳು ಕುಣಿತ, ವೀರಗಾಸೆ, ಬೊಂಬೆ ಕುಣಿತ, ತಮಟೆವಾದ್ಯಗಳ ಮೂಲಕ ಸಂಚರಿಸಿ ಸೈಕಲ್ ಜಾಥಾ, ಕ್ಯಾಂಡಲ್ ಜಾಥಾ, ಬೈಕ್ ಜಾಥಾ, ಬ್ಯಾಂಡ್ ಸೆಟ್ ವ್ಯವಸ್ಥೆ ಮುಖಾಂತರ ನೀಲಿ ಬಲೂನ್ ಗಳು ಮತ್ತು ನೀಲಿ ಬಾವುಟಗಳ ಜಾಥಾ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 1 ಲಕ್ಷ ಮನೆಗಳಿಗೆ ಸಂವಿಧಾನ ಪೀಠಿಕೆ ಪ್ರತಿಗಳನ್ನು ವಿತರಿಸ ಲಾಗಿದೆ ಎಂದರು.ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ಕುರಿತು ಪ್ರಬಂಧ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸ ಲಾಗಿದೆ.
ಸ್ಥಬ್ಧಚಿತ ಸಂಚರಿಸಿದ ಫೆ.17 ರಿಂದ 23 ರವರೆಗೆ ಶಿಡ್ಲಘಟ್ಟ ತಾಲೂಕಿನ ವ್ಯಾಪ್ತಿಯಲ್ಲಿ ಜಾಥಾ ನಡೆದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗ ಫೆಬ್ರವರಿ 23 ರಂದು ಸಂಜೆ 4 ಗಂಟೆಗೆ ನಡೆ ಯುವ ಜಿಲ್ಲಾ ಮಟ್ಟದ ಐಕ್ಯತಾ ಸಮಾವೇಶ ಸೇರಲಿದೆ. ಫೆ.24 ರಂದು ಬೆಂಗಳೂರಿನ ಅರಮನೆ ಮೈದಾನ ತಲುಪಿ ಅಲ್ಲಿ ನಡೆಯುವ ರಾಜ್ಯ ಮಟ್ಟದ ಬೃಹತ್ ಐಕ್ಯತಾ ಸಮಾವೇಶದಲ್ಲಿ ನಮ್ಮ ಜಿಲ್ಲೆಯ ಸ್ತಬ್ದಚಿತ್ರ ಕಲಾತಂಡಗಳೊಂದಿಗೆ ಭಾಗವಹಿಸಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸಮಸ್ತ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪ್ರತಿ ದಿನ ಜಾಥಾ ಸಂಚಾರದ ವಿವರಗಳನ್ನು ಸಾಮಾಜಿಕ ಜಾಲತಾಣಗ ಗಳಲ್ಲಿ ಹಂಚಿಕೊಳ್ಳಲಲಾಗು ತ್ತಿದೆ. ಸಂವಿಧಾನ ಜಾಗೃತಿ ಜಾಥಾಗೆ ಸಂಬಂಧಿಸಿದಂತೆ ಭಾವ ಚಿತ್ರಗಳನ್ನು ಮತ್ತು ವಿಡಿಯೊಗಳನ್ನು ಈ ಸಾಮಾಜಿಕ ಜಾಲತಾಣಗಳಲ್ಲಿ ಭಾವಚಿತ್ರಗಳು ಹಾಗೂ ವಿಡಿಯೋ ಗಳನ್ನು ಹಾಕಿದರೆ ಜಿಲ್ಲೆ ಅತ್ಯುತ್ತಮ ಸ್ಥಾನ ಪಡೆಯ ಬಹುದು. ರಾಜ್ಯ ಮಟ್ಟದಲ್ಲಿ ನಡೆಯುವ ಬೃಹತ್ ಸಂವಿಧಾನ ಐಕೃತಾ ಸಮಾವೇಶ ಕಾರ್ಯ ಕ್ರಮ ದಲ್ಲಿ ಬಹುಮಾನ ಸಿಗಲಿದೆ. ಆದ್ದರಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಜಿಲ್ಲೆಯ ಜನರು ವೀಕ್ಷಣೆ ಮೂಲಕ ಕಾರ್ಯ ಕ್ರಮದ ಯಶಸ್ಸಿಗೆ ಶ್ರಮಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ ಇದ್ದರು.
ಈವರೆಗೂ 3.50 ಲಕ್ಷ ಮಂದಿ ಭಾಗ:
ಈ ಸಮಯದಲ್ಲಿ ಸಂವಿಧಾನ ಓದು ಕಾರ್ಯಕ್ರಮ ಏರ್ಪಡು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅರಿವು ಮೂಡಿಸಲಾಗಿದೆ. ಈ ವೇಳೆ ಚುನಾಯಿತಿ ಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ಈವರೆಗೂ 3.50 ಲಕ್ಷ ಜನ ಭಾಗವಹಿಸಿದ್ದಾರೆ ಎಂದರು












Click it and Unblock the Notifications