Star Campaigners: ಚಿಕ್ಕಬಳ್ಳಾಪುರ ಲೋಕಸ ಚುನಾವಣೆಗೆ ಕೆಲವೇ ದಿನ ಬಾಕಿ: ಮೋದಿ, ಪವನ್, ಎಚ್‌ಡಿಕೆ, ಸಿಎಂ, ಡಿಕೆಶಿ ಪ್ರಚಾರ
ಚಿಕ್ಕಬಳ್ಳಾಪುರ ಏಪ್ರಿಲ್ 15: ಲೋಕಸಭೆ ಚುನಾವಣೆ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಇದುವರೆಗೂ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತುತ್ತಿದ್ದಾರೆ. ಇನ್ನೂ ಉಳಿದಿರೋ ಕೆಲವೇ ದಿನಗಳಲ್ಲಿ ಸ್ಟಾರ್ ಪ್ರಚಾರಕರು ಕ್ಷೇತ್ರಕ್ಕೆ ಲಗ್ಗೆ ಇಡಲಿದ್ದು ರಣಕಣ ಅಬ್ಬರಿಸಲಿದೆ.
ನಾಮಪತ್ರ ಸಲ್ಲಿಕೆ ವೇಳೆ ಕೆಲವು ರಾಜ್ಯ ಮುಖಂಡರು ಬಂದು ಹೋಗಿದ್ದು ಬಿಟ್ಟರೆ ರಾಷ್ಟ್ರೀಯ ಮುಖಂಡರು ಮತ್ತು ರಾಜ್ಯ ಮುಖಂಡರು ಕ್ಷೇತ್ರದ ಕಡೆ ಇನ್ನೂ ತಲೆ ಹಾಕಿಲ್ಲ. ಆದರೆ ಕೊನೇ ಕ್ಷಣದಲ್ಲಿ ಮತದಾರರನ್ನು ಸೆಳೆಯಲು ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆಸಲು ಕಸರತ್ತು ನಡೆಸಿದ್ದು, ಬೃಹತ್ ಸಮಾವೇಶ ಮತ್ತು ರೋಡ್ ಶೋಗಳ ಮೂಲಕ ಕ್ಷೇತ್ರದಲ್ಲಿ ಧೂಳೆಬ್ಬಿಸಲು ಸಜ್ಜಾಗಿದ್ದಾರೆ.

ಮತಬೇಟೆಗೆ ಘಟಾನುಘಟಿಗಳು:
ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಈಗ ತನ್ನದೇ ಸುಪರ್ದಿಯಲ್ಲಿರುವ ಕ್ಷೇತ್ರವನ್ನು ಉಳಿಸಿಕೊಳ್ಳುವ ಸವಾಲಿದೆ. ಈಗಾಗಲೇ ಕ್ಷೇತ್ರದಾದ್ಯಂತ ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿರುವ ಎನ್‌ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ಪ್ರಚಾರಕ್ಕೆ ಹಲವು ಘಟಾನುಘಟಿಗಳು ಕಣಕ್ಕಿಳಿಯಲಿದ್ದಾರೆ.
ಎಚ್‌ಡಿಕೆ ಸಂಚಾರ:
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಡಾ.ಕೆ. ಸುಧಾಕರ್ ಅವರ ನಾಮಪತ್ರ ಸಲ್ಲಿಕೆ ವೇಳೆಯೇ ಬಂದು ರೋಡ್ ಶೋನಲ್ಲಿ ಭಾಗವಹಿಸಿದ್ದರು. ಈಗ ಮತ್ತೊಮ್ಮೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ನೆಲಮಂಗಲ, ದೊಡ್ಡಬಳ್ಳಾಪುರ, ಬಾಗೇಪಲ್ಲಿ, ಪೆರೇಸಂದ್ರ, ದೇವನಹಳ್ಳಿ ಸೇರಿ ದಂತೆ ಹಲವೆಡೆ ಏ.15ರಂದು ಅಬ್ಬರದ ರೋಡ್ ಶೋ ಹಾಗೂ ಪ್ರಚಾರ ಸಭೆಗಳನ್ನು ನಡೆಸಲಿದ್ದಾರೆ.
ಪವರ್ ಸ್ಟಾರ್ ಅಬ್ಬರ :
ಜನಸೇನಾ ಮುಖ್ಯಸ್ಥ ಖ್ಯಾತ ನಟ ಪವನ್ ಕಲ್ಯಾಣ್ ಅವರು ಏ.17 ರಂದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಅಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ರೋಡ್ ಶೋ ನಡೆಸ ಲಿದ್ದು, ಎನ್‌ಡಿಎ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರ ನಡೆಸಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರು ವುದರಿಂದ ಪವನ್ ಕಲ್ಯಾಣ್ ಅಭಿಮಾನಿ ಗಳಿದ್ದು, ಅವರ ಪ್ರಚಾರವೂ ಬಿಜೆಪಿಗೆ ನೆರವಾಗಬಹುದೆಂಬ ನಿರೀಕ್ಷೆ ಇದೆ.

ಕುಟುಂಬದವರ ಕಸರತ್ತು :
ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮಾತ್ರವಲ್ಲ, ಅವರ ಕುಟುಂಬಸ್ಥರು ಕೂಡಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಪರ ತಂದೆ, ಜಿಪಂ ಮಾಜಿ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ, ಅವರ ಪತ್ನಿ ಡಾ.ಪ್ರೀತಿ ಸುಧಾಕರ್ ಸೇರಿದಂತೆ ಹಲವರು ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಅವರ ತಂದೆ ಎಂ.ಆರ್.ಸೀತರಾಮ್ ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅವರ ಕುಟುಂಬದವರು ಸಹ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ ಪ್ರಚಾರ
ಕಾಂಗ್ರೆಸ್ ಪಾಳೆಯದಲ್ಲೂ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಕ್ಷೇತ್ರದಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇನ್ನೊಂದೆಡೆ ಹಲವು ಸ್ಟಾರ್ ಪ್ರಚಾರಕರನ್ನು ಕರೆಸಿ ಪ್ರಚಾರ ಮಾಡಲು ಸಿದ್ಧತೆಗಳು ನಡೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.18ರಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಾ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಈಗಾಗಲೇ ಹಲವಾರು ಸಚಿವರು ಬಂದು ಪ್ರಚಾರ ಮಾಡುತ್ತಿದ್ದು, ಇನ್ನಷ್ಟು ಸಚಿವರು ಆಗಮಿಸಿ ಪ್ರಚಾರ ನಡೆಸಲಿದ್ದಾರೆ.

ನರೇಂದ್ರ ಮೋದಿ ಹವಾ ಮತ್ತೊಂದೆಡೆ..
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ಏ.20ರಂದು ಆಗಮಿಸುವ ನಿರೀಕ್ಷೆ ಇದ್ದು, ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮೋದಿಯವರು ಪ್ರಚಾರ ನಡೆಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆಯೂ ನಡೆದಿದ್ದು, ಬಲ ಪ್ರದರ್ಶನದ ಜತೆ ಮತಬೇಟೆಯನ್ನು ಭರ್ಜರಿಯಾಗಿ ನಡೆಸಲು ಸಿದ್ಧತೆಗಳು ನಡೆದಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications