ಸಂಸದ ಸ್ಥಾನ ಜನರ ಭಿಕ್ಷೆಯೇ ಹೊರತು ಆಡಂಬರವಲ್ಲ: ಸೋಲಿನ ಕಹಿಯನ್ನು ಮರೆತ ಮಾಜಿ ಸಚಿವ ಡಾ.ಕೆ ಸುಧಾಕರ್!
ಚಿಕ್ಕಬಳ್ಳಾಪುರ, ಜೂನ್ 4: ಜಿದ್ದಾ ಜಿದ್ದಿನ ಕಣವಾಗಿದ್ದ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆಲುವಿನ ನಗೆ ಬೀರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಾದ ಸೋಲಿನ ಕಹಿಯನ್ನು ಮರೆತಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,63, 460 ಮತಗಳ ಅಂತರದಲ್ಲಿ ಗೆಲುವ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ 8,22,619 ಮತಗಳನ್ನು ಪಡೆದರೇ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದಲ್ಲಿ ನೋಟಾಗೆ 6596 ಮತಗಳು ಬಂದಿವೆ. ಗೆಲುವು ತಮ್ಮದಾದ ಬೆನ್ನಲ್ಲೇ ಮಾಜಿ ಸಚಿವ ಸುಆಕರ್ ಸಂಭ್ರಮಿಸಿದ್ದಾರೆ. ಅವರ ಬೆಂಬಲಿಗರು ಸಿಹಿ ಹಂಚಿದ್ದಾರೆ.

ವಿಕಸಿತ ಚಿಕ್ಕಬಳ್ಳಾಪುರ ನಿರ್ಮಾಣದ ಕನಸು ಹಂಚಿಕೊಂಡ ಸುಧಾಕರ್
ವಿಕಸಿತ ಚಿಕ್ಕಬಳ್ಳಾಪುರ ನಿರ್ಮಾಣದ ಕನಸನ್ನು ನನಸು ಮಾಡಲು ಹಾಗೂ ಕ್ಷೇತ್ರದ ಎಲ್ಲರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ಐದು ವರ್ಷಗಳ ಕಾಲ ಸಮರ್ಪಣಾ ಮನೋಭಾವದಿಂದ ಶ್ರಮಿಸುತ್ತೇನೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ನೂತನ ಎನ್‌ಡಿಎ ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಗೆಲುವಿಗಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
"ನನ್ನನ್ನು ದೊಡ್ಡಮಟ್ಟದಲ್ಲಿ ಆಶೀರ್ವದಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನಸೇವಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ತ ಜನತೆಗೆ ನನ್ನ ತುಂಬು ಹೃದಯದ ಧನ್ಯವಾದ ಸಲ್ಲಿಸುತ್ತೇನೆ. ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟಕ್ಕೆ ದೊರೆತ ಪ್ರತಿಯೊಂದು ಮತವೂ ಪ್ರಧಾನಿ ನರೇಂದ್ರ ಮೋದಿ ಅವರ ಹತ್ತು ವರ್ಷಗಳ ರಾಷ್ಟ್ರಸೇವೆಯ ತಪಸ್ಸಿಗೆ ದೊರೆತ ಅಭಿನಂದನೆ ಮತ್ತು ಮುಂದಿನ ಐದು ವರ್ಷಗಳ ವಿಕಾಸ ಪರ್ವಕ್ಕೆ ನೀಡಿರುವ ಜನಾದೇಶ ಎಂದು ಭಾವಿಸುತ್ತೇನೆ" ಎಂದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವಿಗಾಗಿ ನನ್ನನ್ನು ಬೆಂಬಲಿಸಿದ ಹಿರಿಯ ನಾಯಕರಾದ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಡಾ.ಕೆ.ಸುಧಾಕರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಸುಮಾರು 40 ದಿನಗಳ ಕಾಲ ಹಗಲಿರುಳು ಶ್ರಮಿಸಿ ಈ ಐತಿಹಾಸಿಕ ಫಲಿತಾಂಶಕ್ಕೆ ಕಾರಣೀಭೂತರಾದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರು, ಮುಖಂಡರು ಹಾಗೂ ಹಿತೈಷಿಗಳಿಗೆ ಈ ಗೆಲುವನ್ನು ಸಮರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
ಜೆಡಿಎಸ್‌ನಿಂದ ಹೆಚ್ಚು ಬಲ
ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದಲ್ಲಿ ಕಳೆದ ಸಲದ 10 ಸಾವಿರ ಮತಗಳ ನಷ್ಟ ಕಳೆದು, ಇನ್ನೂ 21 ಸಾವಿರ ಹೆಚ್ಚು ಮತಗಳನ್ನು ಜನರು ನೀಡಿದ್ದಾರೆ. ಯಲಹಂಕ ಕ್ಷೇತ್ರದಲ್ಲಿ 83 ಸಾವಿರ ಮತಗಳು ಹೆಚ್ಚು ಬಂದಿದೆ. ನೆಲಮಂಗಲ ಕ್ಷೇತ್ರದಲ್ಲಿ 33 ಸಾವಿರ ಅಧಿಕ ಮತಗಳು ಬಂದಿವೆ. ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಬಿಜೆಪಿಗೆ ಮತ ಬಂದಿದೆ. ಜೊತೆಗೆ ಜೆಡಿಎಸ್ ಸಹಯೋಗವಿದ್ದಿದ್ದರಿಂದ ಹೆಚ್ಚು ಬಲ ಬಂದಿದೆ ಎಂದಿದ್ದಾರೆ.
ಗ್ಯಾರಂಟಿ ಬಗ್ಗೆ ಎಚ್ಚೆತ್ತ ಜನರು
ಕಾಂಗ್ರೆಸ್ ಶಾಸಕರು ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದರೂ, ಜನರು ಅದರ ಬಗ್ಗೆ ಎಚ್ಚೆತ್ತಿದ್ದಾರೆ. ಪ್ರಬಲ ದೇಶವಾಗಿದ್ದ ಬ್ರೆಜಿಲ್ ಆರ್ಥಿಕ ನಷ್ಟಕ್ಕೊಳಗಾಗಿದೆ. ಇದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಎರಡೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆದ್ದಿದೆ. ಕೇಂದ್ರದಲ್ಲಿ ಸರ್ಕಾರ ರಚನೆಯಾದ ಬಳಿಕ ಮೂರು ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದಿದ್ದಾರೆ.
ಚಿಕ್ಕಬಳ್ಳಾಪುರದ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿದ ನಂತರ ಗೋಪುರ ಕೆಲಸ ಬಾಕಿ ಉಳಿದಿದೆ. ಆ ಕೆಲಸ ಪೂರ್ಣಗೊಳಿಸಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ವ್ಯವಸ್ಥೆ ಮಾಡಬೇಕಿದೆ. ಎಚ್‌ಎನ್ ವ್ಯಾಲಿ ತೃತೀಯ ಹಂತದ ಸಂಸ್ಕರಣೆ, ಕೈಗಾರಿಕೆ ಸ್ಥಾಪನೆ, ಬೆಂಗಳೂರಿಗೆ ಪರ್ಯಾಯವಾಗಿ ಹೊಸ ನಗರಗಳ ಪ್ರಗತಿ ಮೊದಲಾದ ಕಾರ್ಯಗಳು ನಡೆಯಬೇಕಿದೆ ಎಂದಿದ್ದಾರೆ.
ಕೆಲವರು ಅಪಮಾನಕರವಾಗಿ ನನ್ನ ವಿರುದ್ಧ ಮಾತನಾಡಿದ್ದಾರೆ. ಆದರೆ ನನಗೆ ಸಂಸದ ಸ್ಥಾನ ಎಂದರೆ ಜನರ ಭಿಕ್ಷೆಯೇ ಹೊರತು ವೈಯಕ್ತಿಕ ಆಡಂಬರವಲ್ಲ. ನಾನು ಸಂಸದನಾಗಿ ರಾಗ ದ್ವೇಷವಿಲ್ಲದೆ ಕೆಲಸ ಮಾಡುತ್ತೇನೆ. ಯಾವುದೇ ಪಕ್ಷ, ಯಾವುದೇ ಜಾತಿಯ ಜನರು ನನ್ನ ಬಳಿ ಬಂದರೆ ಅವರ ಕೆಲಸ ಮಾಡಿಕೊಡುತ್ತೇನೆ ಎಂದು ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications