Chikkaballapur Lok Sabha Election Results 2024 LIVE: ಹೊಸಬ Vs ಹಳಬ.. ಯಾರ ಕೈ ಹಿಡಿದ ಚಿಕ್ಕಬಳ್ಳಾಪುರ ಮತದಾರ?
ಚಿಕ್ಕಬಳ್ಳಾಪುರ, ಜೂನ್. 04: ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೊಸಬ V/s ಹಳಬ ಪೈಪೋಟಿಯಿದೆ. ಮಾಜಿ ಸಚಿವ ಡಾ. ಕೆ ಸುಧಾಕರ್ ಎದುರು ಮೊದಲ ಬಾರಿಗೆ ಯುವ ನಾಯಕ ರಕ್ಷಾ ರಾಮಯ್ಯರನ್ನು ಕಾಂಗ್ರೆಸ್ ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆ ನಡೆಸಿದೆ. ಇಬ್ಬರು ನಾಯಕರಲ್ಲಿ ಯಾರಿಗೆ ಗೆಲುವು ಎಂಬುದೆ ಸದ್ಯದ ದೊಡ್ಡ ಚರ್ಚೆ.
ಸಚಿವರಾಗಿದ್ದರೂ ಕೂಡ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಕೆ ಸುಧಾಕರ್ ಅವರಿಗೆ ಈ ಚುನಾವಣೆ ಮಾಡು ಇಲ್ಲವೆ ಮಡಿ ಎಂಬಂತಿದೆ. ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರವನ್ನು 2019ರಲ್ಲಿ ಬಿಜೆಪಿ ಕೈವಶವಾಗಲು ಸುಧಾಕರ್ ಕೂಡ ಕಾರಣ. ಹೀಗಾಗಿಯೇ ಅವರಿಗೆ ಟಿಕೆಟ್ ಸಿಕ್ಕಿದೆ. ಅವರು ಕ್ಷೇತ್ರ ಉಳಿಸಿಕೊಳ್ಳುವ ಹೋರಾಟದಲ್ಲಿದ್ದಾರೆ. ಆದರೆ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಟಫ್ ಫೈಟ್ ಕೊಡುತ್ತಿದ್ದಾರೆ.
ಕೆ ಸುಧಾಕರ್ ಗೆಲುವಿನ ನಗೆ
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆಲುವಿನ ನಗೆ ಬೀರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಾದ ಸೋಲಿನ ಕಹಿಯನ್ನು ಮರೆತಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,63, 460 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ 8,22,619 ಮತಗಳನ್ನು ಪಡೆದರೇ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.
ಡಾ. ಕೆ ಸುಧಾಕರ್‌ಗೆ 49645 ಮತಗಳ ಮುನ್ನಡೆ
ಡಾ.ಕೆ ಸುಧಾಕರ್:270775
ರಕ್ಷಾ ರಾಮಯ್ಯ:221130
ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್: 49645 ಮತಗಳ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹಿನ್ನಡೆ
ಬಿಜೆಪಿ - ಡಾ.ಕೆ.ಸುಧಾಕರ್ - 1,18,262
ಕಾಂಗ್ರೆಸ್ - ರಕ್ಷಾ ರಾಮಯ್ಯ - 96,199
ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ 22063 ಮತಗಳ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 22063 ಮತಗಳ ಹಿನ್ನಡೆ.
ಬಿಜೆಪಿ ಅಭ್ಯರ್ಥಿ ಸುಧಾಕರ್ ಮುನ್ನಡೆ
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಮುನ್ನಡೆ ಸಾಧಿಸಿದ್ದಾರೆ, ಐದು ಸುತ್ತುಗಳ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಿಂತ 6934 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅಂಚೆ ಮತಗಳ ಎಣಿಕೆ
ಲೋಕಸಭಾ ಚುನಾವಣೆಯ ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಮುನ್ನಡೆಯಲ್ಲಿದ್ದಾರೆ. ಮಾಜಿ ಸಚಿವ ಡಾ. ಕೆ ಸುಧಾಕರ್ ಹಿನ್ನಡೆ ಅನುಭವಿಸಿದ್ದಾರೆ.

ಆದರೆ, ಶ್ರೀಮಂತ ಮತ್ತು ಪ್ರಭಾವಿ ರಾಜಕೀಯ ಕುಟುಂಬ, ಎಂ ಎಸ್ ರಾಮಯ್ಯ ಮನೆತನದಿಂದ ಬಂದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಚುನಾವಣಾ ರಾಜಕೀಯಕ್ಕೆ ಹೊಸ ಮುಖ. ಆದರೂ, ಚಿಕ್ಕಬಳ್ಳಾಪುರದ ಜನತೆಗೆ ಪರಿಚಿತ ಮುಖವೆ. ಹೀಗಾಗಿ ಮಾಜಿ ಸಚಿವ ಸುಧಾಕರ್‌ಗೆ ದೊಡ್ಡ ಪೈಪೋಟಿಯೇ ನೀಡಿದ್ದಾರೆ.
ಇನ್ನು, 1962ರಿಂದ ಚಿಕ್ಕಬಳ್ಳಾಪುರ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ, 1996ರಲ್ಲಿ ಜನತಾದಳ ಹಾಗೂ 2019ರಲ್ಲಿ ಬಿಜೆಪಿಯಿಂದ ಎರಡು ಬಾರಿ ಮಾತ್ರ ಕಾಂಗ್ರೆಸ್ ಕ್ಷೇತ್ರ ಕಳೆದುಕೊಂಡಿದೆ. ಈ ಬಾರಿ ಮತ್ತೆ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.













Click it and Unblock the Notifications