ಹಾಲು ಒಕ್ಕೂಟದಿಂದ ಯುಗಾದಿ ಗಿಫ್ಟ್: ಹೈನುಗಾರರಿಗೆ ಸಿಗಲಿದೆ ಹೆಚ್ಚುವರಿ ಹಣ
ಚಿಕ್ಕಬಳ್ಳಾಪುರ ಹಾಲು ಒಕ್ಕೂಟವು (ಚಿಮುಲ್) ಜಿಲ್ಲೆಯ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದೆ. ಹಾಲು ಒಕ್ಕೂಟವು ಕೆಲವೇ ತಿಂಗಳಲ್ಲಿ ಭರ್ಜರಿ ಲಾಭ ಕಂಡಿರುವ ಹಿನ್ನೆಲೆ ಯುಗಾದಿ ಕೊಡುಗೆಯಾಗಿ ತನ್ನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿನ ಮೇಲೆ ಹೆಚ್ಚುವರಿ ಹಣ ನೀಡಲು ನಿರ್ಧರಿಸಿದೆ. ಅದರಂತೆ ಈಗಾಗಲೇ ಮಾರ್ಚ್ 15ರಿಂದ ಮೇ 15ರವರೆಗೂ ಸುಮಾರು ಎರಡು ತಿಂಗಳ ಕಾಲ ರೈತರು ಉತ್ಪಾದಿಸುವ ಹಾಲಿಗೆ ಪ್ರತಿ ಲೀಟರ್ಗೆ 1 ರೂಪಾಯಿ ಹೆಚ್ಚುವರಿಯಾಗಿ ಕೊಡಲು ತೀರ್ಮಾನಿಸಿದೆ.
ಇತ್ತೀಚೆಗಷ್ಟೇ ಹಾಲು ಒಕ್ಕೂಟವು ಕೋಲಾರದಿಂದ ಪ್ರತ್ಯೇಕಗೊಂಡು ಚಿಕ್ಕಬಳ್ಳಾಪುರ ಹಾಲು ಒಕ್ಕೂಟವಾಗಿತ್ತು. ಇದಾದ ಕೆಲವೇ ತಿಂಗಳಲ್ಲಿ ಒಕ್ಕೂಟವು ಲಾಭದ ಹಾದಿಯಲ್ಲಿ ಸಾಗಿದೆ. ಈ ಹಿನ್ನೆಲೆ ಒಕ್ಕೂಟಕ್ಕೆ ಬರುವ ಲಾಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರಿಗೂ ಪಾಲು ನೀಡಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮತ್ತೊಂದೆಡೆ ಬೇಸಿಗೆ ಶುರುವಾಗಿರುವುದರಿಂದ ಸಾಮಾನ್ಯವಾಗಿ ಈ ಅವಧಿಯಲ್ಲಿ ಹಾಲಿನ ಉತ್ಪಾದನೆ ಕೂಡ ಕಡಿಮೆಯಾಗುತ್ತೆ. ಈ ಸಮಯದಲ್ಲಿ ಹಾಲು ಉತ್ಪಾದಕರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದಲೂ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಈಗಾಗಲೇ ಈ ಕೊಡುಗೆ ಶುರುವಾಗಿದ್ದು, ಮಾರ್ಚ್ 15ರಿಂದ ಮುಂದಿನ ಮೇ 15ರವರೆಗೂ ಸುಮಾರು 60 ದಿನಗಳವರೆಗೆ ಹೈನುಗಾರರು ಉತ್ಪಾದಿಸುವ ಪ್ರತಿ ಲೀಟರ್ ಹಾಲಿಗೆ ಒಂದು ರೂಪಾಯಿ ಹೆಚ್ಚುವರಿಯಾಗಿ ಸಿಗಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಿನಕ್ಕೆ 4 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದರಿಂದಲೇ ಸಾವಿರಾರು ಮಂದಿ ಹೈನುಗಾರರ ಬದುಕು ಕೂಡ ಸಾಗುತ್ತಿದೆ. ಈ ಕೊಡುಗೆಯಾಗಿ ನೀಡುವ ಹಣವು ಸುಮಾರು ಎರಡೂವರೆ ಕೋಟಿ ರೂಪಾಯಿಗೂ ಹೆಚ್ಚು ಎನ್ನಲಾಗಿದೆ. ಈ ವಿಚಾರ ತಿಳಿದು ಜಿಲ್ಲೆಯ ಹೈನುಗಾರರಲ್ಲಿ ಸಂತಸ ಮನೆ ಮಾಡಿದೆ.
ಕಲಬೆರಕೆ ವಿರುದ್ಧ ಚಿಮುಲ್ ಕ್ರಮ:
ಇತ್ತೀಚೆಗೆ ವೈರಲ್ ಆಗಿದ್ದ ವಿಡಿಯೋದಲ್ಲಿ ಹಾಲಿನ ಡೈರಿಗಳ ಸಿಬ್ಬಂದಿ ಶುದ್ಧ ಹಾಲಿಗೆ ನೀರು ಮಿಶ್ರಣ ಮಾಡುತ್ತಿದ್ದು, ಈ ಮೂಲಕ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಹಾಲಿನ ಡೈರಿ ಸಿಬ್ಬಂದಿ ಹಾಲಿನ ಟ್ಯಾಂಕ್‌ಗೆ ನೀರು ಕಲಬೆರಕೆ ಮಾಡಿದ್ದಾರೆ ಎಂದು ದೂರಲಾಗಿತ್ತು. ಹಾಲಿನ ಟ್ಯಾಂಕ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಡೈರಿಗೆ ಸರಬರಾಜು ಮಾಡುವಾಗ ಇವರು ಸಿಕ್ಕಿಬಿದ್ದಿದ್ದರು.

ಡೈರಿ ಸಿಬ್ಬಂದಿ ಕಳ್ಳಾಟದ ವಿಡಿಯೋ ವೈರಲ್ ಆಗಿ ಹಿರಿಯ ಅಧಿಕಾರಿಗಳ ಗಮನಕ್ಕೂ ಬಂದಿತ್ತು. ಈ ವಿಚಾರ ಬಯಲಾಗುತ್ತಿದ್ದಂತೆ ಚಿಮುಲ್ ಎಚ್ಚೆತ್ತುಕೊಂಡು, ಡೈರಿಯ ಸಹಾಯಕ ಚೇತನ್ ಎಂಬಾತನನ್ನು ಕೆಲಸದಿಂದ ವಜಾ ಮಾಡಿತ್ತು. ಅಲ್ಲದೆ ಹಾಲಿಗೆ ನೀರು ಮಿಕ್ಸ್ ಮಾಡಿರುವ ಸಂಬಂಧ ತನಿಖೆ ನಡೆಸಲು ಸಮಿತಿಯೊಂದನ್ನೂ ರಚಿಸಿತ್ತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications