Pradeep Eshwar: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಸಾಕು ತಾಯಿ ನಿಧನ

ಚಿಕ್ಕಬಳ್ಳಾಪುರ, ಮೇ, 20: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪ್ರದೀಪ್‌ ಈಶ್ವರ್‌ ಅವರ ಸಾಕು ತಾಯಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆ ರತ್ನಮ್ಮ (72) ಎನ್ನುವವರು ಶನಿವಾರ (ಮೇ 20) ಪೇರೇಸಂದ್ರ ಗ್ರಾಮದಲ್ಲಿ ಮೃತಪಟ್ಟಿದ್ದಾರೆ. ತಾಯಿ ರತ್ನಮ್ಮ ನಿಧನ ಹಿನ್ನೆಲೆ, ಅಂತಿಮ ದರ್ಶನ ಪಡೆಯಲು ಪ್ರದೀಪ್ ಈಶ್ವರ್ ಬೆಂಗಳೂರಿನಿಂದ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದಾರೆ.

Chikkaballapur MLA Pradeep Eshwars foster mother passed away

ವಿಧಾಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿರುವ ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿದ್ದರು. ಹಾಗೆಯೆ ಮೊನ್ನೆಯಷ್ಟೇ ಬೆಳಗ್ಗೆ ಮೈಲಪ್ಪನಹಳ್ಳಿಗೆ ಅಧಿಕಾರಿಗಳೊಂದಿಗೆ ಗ್ರಾಮದ ಮನೆ ಮನೆಗೂ ಭೇಟಿ ನೀಡಿ ಮತದಾರರಿಗೆ ಧನ್ಯವಾದ ಹೇಳಿದ್ದರು.

ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರದೀಪ್‌ ಈಶ್ವರ್‌ ಅವರು ಬೆಂಗಳೂರಿಗೆ ಆಗಮಿಸಿದ್ದರು. ಇದೀಗ ಸಾಕು ತಾಯಿ ನಿಧನರಾದ ಕಾರಣ ಅವರು ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಹಿಂದಿರುಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+