ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ
ಚಿಕ್ಕಬಳ್ಳಾಪುರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯ ಎಸ್‌ಡಿಎ ಅಧಿಕಾರಿ ತಾಜಾವಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚಿಂತಾಮಣಿ ತಾಲ್ಲೂಕಿನ ದೊಡ್ಡಗಂಜೂರು ಬಳಿಯ ನೂತನ ಪೆಟ್ರೋಲ್ ಬಂಕ್ ನಿರ್ಮಾಣವಾಗುತ್ತಿತ್ತು. ಈ ಪೆಟ್ರೋಲ್ ಬಂಕ್‌ಗೆ ಎನ್‌ಓಸಿ ಕೊಡಲು ತಾಜಾವಲಿ ₹3000 ಗೆ ಬೇಡಿಕೆ ಇಟ್ಟಿದ್ದರು.

ಮಂಗಳವಾರ ಬೆಳಗ್ಗೆ ಲಂಚ ಸ್ವೀಕರಿಸುವ ವೇಳೆ ಭ್ರಷ್ಟ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಖಾಜಾವಲಿ (35) ಯನ್ನ ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ ಪಿ ಡಾ .ರಾಮ್ ಅರಸಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ನಗರದ ಸರ್ ಎಂ.ವಿ . ಕ್ರೀಡಾಂಗಣದ ಬಳಿ ಇರುವ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಕಚೇರಿಯಲ್ಲೇ ಅವರನ್ನು ವಶಕ್ಕೆ ಪಡೆಯಲಾಗಿದೆ.












Click it and Unblock the Notifications