ಚಿಕ್ಕಬಳ್ಳಾಪುರ; ಬಿಜೆಪಿಯ ಡಾ.ಕೆ.ಸುಧಾಕರ್ ಗೆಲುವಿನ ನಗೆ

ಚಿಕ್ಕಬಳ್ಳಾಪುರ, ಡಿಸೆಂಬರ್ 9: ಚಿಕ್ಕಬಳ್ಳಾಪುರ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಕಾಂಗ್ರೆಸ್ ನಿಂದ ಬಿಜೆಪಿ ಗೆ ಹೋಗಿದ್ದ ಡಾ.ಕೆ.ಸುಧಾಕರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಎಂ ಆಂಜಿನಪ್ಪ ಅವರನ್ನು 34,794 ಮತಗಳ ಅಂತರದಿಂದ ಸೋಲಿಸಿ, ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಮತ ಎಣಿಕೆ ಕಾರ್ಯ ಅಂತಿಮಗೊಂಡಿದೆ. ಚುನಾವಣಾಧಿಕಾರಿಯವರು ಸುಧಾಕರ್ ಅವರ ಗೆಲುವನ್ನು ಅಧಿಕೃತವಾಗಿ ಘೋಷಿಸಿದರು. ಕೆ.ಸುಧಾಕರ್ ಅವರು, 84,381 ಮತಗಳನ್ನು ಪಡೆದರೆ, ಎಂ.ಆಂಜಿನಪ್ಪ ಅವರು, 49,587 ಮತಗಳನ್ನು ಪಡೆದರು. ಜೆಡಿಎಸ್ ನ ಎನ್ ರಾಧಾಕೃಷ್ಣ ಅವರು 35,869 ಮತಗಳನ್ನು ಪಡೆಯುವಲ್ಲಿ ಸಫಲವಾದರು.

ಚಿಕ್ಕಬಳ್ಳಾಪುರ; ಬಿಜೆಪಿಯ ಡಾ.ಕೆ.ಸುಧಾಕರ್ ಗೆಲುವಿನ ನಗೆ

ಕೆ.ಸುಧಾಕರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮೇಲೆ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ನಾಯಕರು ಕೂಡ ಸುಧಾಕರ್ ಅವರನ್ನು ಸೋಲಿಸಬೇಕು ಎಂದು ಪಣ ತೊಟ್ಟಿದ್ದರು. ಪ್ರಚಾರ ವೇಳೆ ಆಂಜಿನಪ್ಪ ಅವರು ಸುಧಾಕರ ವಿರುದ್ಧ ಏಕವಚನದಲ್ಲಿವಾಗ್ದಾಳಿ ನಡೆಸಿ, ಪ್ರಚಾರ ನಡೆಸಿದ್ದರು. ಕಡೆಗೂ ಸುಧಾಕರ್ ಗೆಲ್ಲುವಲ್ಲಿ ಸಫಲವಾಗಿದ್ದಾರೆ. ಸುಧಾಕರ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+