ಅನಗತ್ಯ ಓಡಾಟಕ್ಕೆ ದಂಡ: ಚಿಕ್ಕಬಳ್ಳಾಪುರ ಡಿಸಿ ಆದೇಶ
ಚಿಕ್ಕಬಳ್ಳಾಪುರ, ಜೂನ್ 25: ಲಾಕ್‌ಡೌನ್ ಸಡಿಲಿಕೆಯ ನಂತರ ಕೊರೊನಾ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ಹೆಚ್ಚಾಗಿವೆ. ಜನರ ಓಡಾಟ ವೈರಸ್ ಹಬ್ಬಲು ಪ್ರಮುಖ ಕಾರಣವಾಗಿದೆ. ಅವಶ್ಯಕತೆ ಇಲ್ಲದೆ ಇದ್ದರೂ, ಕೆಲವರು ಲಾಕ್‌ಡೌನ್‌ನಿಂದ ಬಿಡುಗಡೆ ಸಿಕ್ಕಿದೆ ಎನ್ನುವ ಕಾರಣಕ್ಕೆ ಅನಗತ್ಯವಾಗಿ ಓಡಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅನಗತ್ಯ ಓಡಾಟವನ್ನು ಕಡಿಮೆ ಮಾಡಬೇಕಿದೆ. ಹೀಗಾಗಿ, ನೋಡಲ್ ಅಧಿಕಾರಿಗೆಗಳಿಗೆ ಜಿಲ್ಲಾಧಿಕಾರಿ ಆರ್ ಲತಾ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಅನಗತ್ಯವಾಗಿ ಯಾರಾದರೂ ಓಡಾಟ ನಡೆಸಿದರೆ, ಅಂತಹವರ ವಿರುದ್ಧ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಲತಾ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಈ ಬಗ್ಗೆ ಸಭೆ ನಡೆಸಿದ್ದು, ನೋಡಲ್ ಅಧಿಕಾರಿಗಳ ಜೊತೆಗೆ ಕೊರೊನಾ ನಿಯಂತ್ರಣದ ಬಗ್ಗೆ ಮಾತುಕತೆ ನಡೆಸಲಾಯಿತು.

ಹೋಟೆಲ್ ವ್ಯಾಪಾರಕ್ಕೆ ಅನುಮತಿ ಸಿಕ್ಕಿದ್ದು, ಅಲ್ಲಿ ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಜನರು ಸುರಕ್ಷತ ಕ್ರಮ ತೆಗೆದುಕೊಳ್ಳುವುದು ಕಡಿಮೆಯಾಗಿದೆ. ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದರೂ, ಅದನು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ನಗರ ಪ್ರದೇಶಗಳಿಂದ ಹಳ್ಳಿಗಳಿಗೆ ಹಬ್ಬುತ್ತಿದ್ದು, ಎಚ್ಚರಿಕೆ ನೀಡಲಾಗಿದೆ.












Click it and Unblock the Notifications