ಚಿಕ್ಕಬಳ್ಳಾಪುರ ರೈತರಿಗೆ ಸಿಗಲಿದೆ ಶೇ.90ರಷ್ಟು ಸಹಾಯಧನ: ಜಿಲ್ಲೆಯ ಎಲ್ಲ ತಾಲೂಕಿನ ಅನ್ನದಾತರಿಗೂ ಅನುಕೂಲ!
ಚಿಕ್ಕಬಳ್ಳಾಪುರ ಡಿಸೆಂಬರ್ 9: ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್ ನೀಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕಿನ ಅನ್ನದಾತರಿಗೆ ಇದರಿಂದ ಅನುಕೂಲ ಆಗಲಿದೆ.
ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಮಾಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಅಟಲ್ ಭೂಜಲ ಯೋಜನೆಯಡಿ ನೀರಿನ ಮಿತ ಬಳಕೆಗೆ ಅನುಕೂಲವಾಗುವಂತೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿ ಎಲ್ಲ ವರ್ಗದ ರೈತರಿಗೆ ಶೇ.90ರವರೆಗೂ ಸಬ್ಸಿಡಿ ಸಿಗಲಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಅನುಷ್ಠಾನ?
ರಾಜ್ಯದ ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ಮತ್ತು ಹನಿ ನೀರಾವರಿ ಯಶಸ್ವಿ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದ್ದು, ರೈತರು ಸದುಪ ಯೋಗಪಡಿಸಿಕೊಳ್ಳಲು ಸೂಚಿಸಲಾಗಿದೆ.
ಸೂಕ್ಷ್ಮ ನೀರಾವರಿ ಘಟಕಗಳಾದ ಹನಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೂಜಲ್ ಯೋಜನೆಯಡಿ ಶೇ. 90 ರಷ್ಟು ರಿಯಾಯಿತಿ ದರದಲ್ಲಿ ವಿತರಿಸಲು ಅವಕಾಶವಿರುತ್ತದೆ. ಈ ಯೋಜನೆ ಗಳಡಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಸಹಾಯಧನ ಪಡೆಯಲು ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನೀಡಿ, ಕಿಸಾನ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು, ರೈತರ ವಂತಿಗೆ ಪಾವತಿಸಿ ವಡೆಯಲು ಕೋರಿದೆ.
ಎಲ್ಲರಿಗೂ ಅನ್ವಯ: ಪ್ರಧಾನಮಂತ್ರಿ
ಕೃಷಿಸಿಂಚಾಯಿ ಯೋಜನೆ ಮತ್ತು ಅಟಲ್ ಭೂಜಲ್ ಯೋಜನೆಯಡಿ ಸೂಕ್ಷ್ಮನೀರಾವರಿ ಘಟಕಗಳನ್ನು (ತುಂತುರು ಮತ್ತು ಹನಿ ನೀರಾವರಿ) ಕೃಷಿ ಬೆಳೆಗಳಿಗೆ ನೀಡಲು ಆದೇಶ ಹೊರಡಿಸಲಾಗಿದೆ. ಮಿತಿ ಮೀರಿದ ಅಂತರ್ಜಲ ಬಳಕೆ ಹಾಗೂ ಬರ ಪೀಡಿತ ತಾಲೂಕುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕುಗಳು ಈ ವ್ಯಾಪ್ತಿಗೆ ಬರಲಿದ್ದು, ಯಾರೂ ಬೇಕಾದರೂ ಯೋಜನೆ ಯಡಿ ನೋಂದಣಿ ಮಾಡಿಕೊಳ್ಳಬಹುದು.
ಶೇ.90ರಷ್ಟು ಸಬ್ಸಿಡಿ:
ತುಂತುರು ನೀರಾವರಿ ಘಟಕಗಳನ್ನು ಜಿಲ್ಲೆಯ ಎಲ್ಲ ವರ್ಗದ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಶೇ.90ರಷ್ಟು ಮತ್ತು ಹನಿ ನೀರಾವರಿ ಘಟಕಗಳನ್ನು ಸಣ್ಣ ಅತಿ ಸಣ್ಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ಮತ್ತು ಇತರೆ ವರ್ಗದ ರೈತರಿಗೆ ಶೇ.45ರ ಸಹಾಯದನದಲ್ಲಿ ವಿತರಿಸಲು ನಿರ್ಧರಿಸಲಾಗಿದೆ.
40ಲಕ್ಷ ರೂ. ವರೆಗೆ ಸಹಾಯಧನ:
ಆಟಲ್ ಭೂ ಜಲ್ ಯೋಜನೆಯಡಿ ಜಿಲ್ಲೆಯ ಎಲ್ಲ ತಾಲೂಕುಗಳು ಮತ್ತು ಎಲ್ಲ ಗ್ರಾಮ ಪಂಚಾಯಿತಿಗಳು ಒಳಪಟ್ಟಿದ್ದು, ಪ್ರತಿ ಗಾಮ ಪಂಚಾಯಿತಿಗೆ 40 ಲಕ್ಷ ರೂ. ವರೆಗೆ ಸೂಕ್ಷ್ಮ ನೀರಾವರಿ ಘಟಕಗಳಿಗೆ ಸಹಾಯಧನ ನೀಡಲು ಅವಕಾಶವಿದೆ. ಹೀಗಾಗಿ ಎಲ್ಲ ರೈತರಿಗೂ ಇದು ಸುವರ್ಣವಕಾಶವಿದ್ದು, ಆದಷ್ಟು ಬೇಗ ರೈತರು ನೋಂದಣಿ ಮಾಡಿಕೊಂಡರೆ ಸರಕಾರದಿಂದ ಸಿಗುವ ಸಹಾಯಧನ ಪಡೆಯಬಹುದು.
ಬರ ಹಿನ್ನೆಲೆ ವಿಶೇಷ ಯೋಜನೆ: ಸೂಕ್ಷ್ಮ
ನೀರಾವರಿ ಪದ್ಧತಿ ಅಳವಡಿಕೆಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಅಟಲ್ ಭೂ ಜಲ್ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. ಕೃಷಿ ಬೆಳೆಗಳಲ್ಲಿ ನೀರಿನ ಮಿತ ಬಳಕೆಗಾಗಿ ಈ ಯೋಜನೆಯನ್ನು ಯಶಸ್ವಿ ಯಾಗಿ ಅನುಷ್ಠಾನಗೊಳಿಸಲು ತೀರ್ಮಾನಿಸ ಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬೇಸಿಗೆ ಕಾಲದಲ್ಲಿ ಬೆಳೆಗಳಿಗೆ ನೀರಿನ ಸಮಸ್ಯೆ ಎದುರಾಗ ಬಹುದು. ಹೀಗಾಗಿ ಸೂಕ್ಷ್ಮ ನೀರಾವರಿ ವ್ಯವಸ್ಥೆ ಅಳವಡಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಇತ್ತೀಚೆಗೆ ಬರ ವೀಕ್ಷಣೆಗೆ ಕೇಂದ್ರ ಅಧ್ಯಯನ ಸಮಿತಿ ಬಂದ ವೇಳೆ ಜಿಲ್ಲೆಯ ಬರ ಪರಿಸ್ಥಿತಿಯನ್ನು ವಿವರಿಸುವ ವೇಳೆ ತುಂತುರು ಮತ್ತು ಹನಿ ನೀರಾವರಿ ಅವಶ್ಯಕತೆಯನ್ನು ಮನದಟ್ಟು ಮಾಡಲಾಗಿತ್ತು. ಹೀಗಾಗಿ ಅಂತರ್ಜಲ ಪೀಡಿತ ಜಿಲ್ಲೆ ಎಂದು ಜಿಲ್ಲೆಯ ಎಲ್ಲ ಭಾಗದ ಎಲ್ಲ ವರ್ಗದ ರೈತರಿಗೂ ಅನುಕೂಲವಾಗುವಂತೆ ಈ ಯೋಜನೆಯನ್ನು ರೂಪಿಸಲಾಗಿದೆ.
ಮೊದಲು ಬಂದವರಿಗೆ ಆದ್ಯತೆ:
ಸದ್ಯ ಈ ಯೋಜನೆಯಡಿ ಮೊದಲು ಬಂದವರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ನಿಗದಿತ ಅನುದಾನ ಮುಗಿದ ನಂತರ ನೋಂದಣಿ ಯಾದವರಿಗೆ ಅವಕಾಶ ಹೋಗಬಹುದು. ಹೀಗಾಗಿ ರೈತರು ಆದಷ್ಟು ಬೇಗ ನೋಂದಣಿ ಮಾಡಿಕೊಂಡರೆ ಈ ಸೂಕ್ಷ್ಮ ನೀರಾವರಿ ಯೋಜನೆಯ ಅನುಕೂಲ ಪಡೆಯಬಹುದು. ಇಲ್ಲವಾದಲ್ಲಿ ವಂಚಿತ ರಾಗುವ ಸಾಧ್ಯತೆ ಇರುತ್ತೆ.
ಅರ್ಜಿ ಸಲ್ಲಿಸುವುದು ಎಲ್ಲಿ?
ಜಿಲ್ಲೆಯ ಎಲ್ಲ ವರ್ಗದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ಯೋಜನೆಯ ಮಾಹಿತಿ ಪಡೆಯಬಹುದು. ಸೂಕ್ತ ದಾಖಲೆ ಗಳೊಂದಿಗೆ ನೋಂದಣಿ ಮಾಡಿಕೊಂಡರೆ ತುಂತುರು ಮತ್ತು ಹನಿ ನೀರಾವರಿ ಅಳವಡಿಕೆಗೆ ಶೇ.90ರವರೆಗೂ ಸಹಾಯಧನ ಸಿಗಲಿದೆ.ನೀಡಲಾಗುತ್ತಿದೆ.
ಇತ್ತೀಚೆಗೆ ಬರ ವೀಕ್ಷಣೆಗೆ ಕೇಂದ್ರ ಅಧ್ಯಯನ ಸಮಿತಿ ಬಂದ ವೇಳೆ ಜಿಲ್ಲೆಯ ಬರ ಪರಿಸ್ಥಿತಿಯನ್ನು ವಿವರಿಸುವ ವೇಳೆ ತುಂತುರು ಮತ್ತು ಹನಿ ನೀರಾವರಿ ಅವಶ್ಯಕತೆಯನ್ನು ಮನದಟ್ಟು ಮಾಡಲಾಗಿತ್ತು. ಹೀಗಾಗಿ ಅಂತರ್ಜಲ ಪೀಡಿತ ಜಿಲ್ಲೆ ಎಂದು ಜಿಲ್ಲೆಯ ಎಲ್ಲ ಭಾಗದ ಎಲ್ಲ ವರ್ಗದ ರೈತರಿಗೂ ಅನುಕೂಲವಾಗುವಂತೆ ಈ ಯೋಜನೆಯನ್ನು ರೂಪಿಸಲಾಗಿದೆ.
ಮೊದಲು ಬಂದವರಿಗೆ ಆದ್ಯತೆ:
ಸದ್ಯ ಈ ಯೋಜನೆಯಡಿ ಮೊದಲು ಬಂದವರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ನಿಗದಿತ ಅನುದಾನ ಮುಗಿದ ನಂತರ ನೋಂದಣಿ ಯಾದವರಿಗೆ ಅವಕಾಶ ಹೋಗಬಹುದು. ಹೀಗಾಗಿ ರೈತರು ಆದಷ್ಟು ಬೇಗ ನೋಂದಣಿ ಮಾಡಿಕೊಂಡರೆ ಈ ಸೂಕ್ಷ್ಮ ನೀರಾವರಿ ಯೋಜನೆಯ ಅನುಕೂಲ ಪಡೆಯಬಹುದು. ಇಲ್ಲವಾದಲ್ಲಿ ವಂಚಿತ ರಾಗುವ ಸಾಧ್ಯತೆ ಇರುತ್ತೆ. ಜಿಲ್ಲೆಯ ಎಲ್ಲ ವರ್ಗದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ಯೋಜನೆಯ ಮಾಹಿತಿ ಪಡೆಯಬಹುದು. ಸೂಕ್ತ ದಾಖಲೆ ಗಳೊಂದಿಗೆ ನೋಂದಣಿ ಮಾಡಿಕೊಂಡರೆ ತುಂತುರು ಮತ್ತು ಹನಿ ನೀರಾವರಿ ಅಳವಡಿಕೆಗೆ ಶೇ.90ರವರೆಗೂ ಸಹಾಯಧನ ಸಿಗಲಿದೆ.
2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೂ ಜಲ್ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳನ್ನು (ತುಂತುರು ಮತ್ತು ಹನಿ ನೀರಾವರಿ) ಕೃಷಿ ಬೆಳೆಗಳಿಗೆ ನೀಡಲು ಕೃಷಿ ಇಲಾಖೆಯಿಂದ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಅಟಲ್ ಭೂಜಲ್ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕು ಗಳು ಮತ್ತು ಎಲ್ಲ ಗ್ರಾಪಂಗಳು ಒಳಪಟ್ಟಿದ್ದು, ಪ್ರತಿ ಗ್ರಾಮ ಪಂಚಾಯಿತಿಗೆ 40 ಲಕ್ಷ ರೂ. ವರಗೆ ಸೂಕ್ಷ್ಮ ನೀರಾವರಿ ಘಟಕಗಳಿಗೆ ಸಹಾಯಧನ ನೀಡಲು ಅವಕಾಶವಿದೆ. ಈ ಯೋಜನೆಯನ್ನು ಜಿಲ್ಲೆಯ ಎಲ್ಲವರ್ಗದ ರೈತರು ಸದ್ಬಳಕೆಮಾಡಿಕೊಳ್ಳಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಾವೀದಾ ನಾಸೀಮಾ ಖಾನಂ ಹೇಳಿದರು.
ಅಗತ್ಯ ದಾಖಲಾತಿಗಳು::--
ನಿಗದಿತ ನಮೂನೆಯಲ್ಲಿ ಅರ್ಜಿ, ಪಹಣಿ, ಬೆಳೆದೃಢೀಕರಣ (ಕೃಷಿ ಬೆಳೆಗಳಾದ ಮುಸುಕಿನಜೋಳ, ರಾಗಿ, ತೊಗರಿ, ನೆಲಗಡಲೆ), ಕೊಳವೆ ಬಾವಿ ದೃಢೀಕರಣ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಿಂದ ನಿರಕ್ಷೇಪಣ ಪತ್ರ, 20 ರುಪಾಯಿ ಸ್ಟಾಂಪ್ ಪೇವರ್, ಪ.ಜಾತಿ/ ಪ.ಪಂಗಡ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ನಂಪರ್ಕಿಸಬಹುದೆಂದು ಚಿಕ್ಕಬಳ್ಳಾಪುರ ಸಹಾಯಕ ಕೃಷಿ ನಿರ್ದೇಶಕ ಎ ಕೇಶವರೆಡ್ಡಿ ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications