ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅವ್ಯವಸ್ಥೆಯ ಆಗರವಾದ ಚಿಕ್ಕಬಳ್ಳಾಪುರ ಖಾಸಗಿ ಬಸ್ ನಿಲ್ದಾಣ

ಸಮರ್ಪಕ ನಿರ್ವಹಣೆಯಿಲ್ಲದೆ ಚಿಕ್ಕಬಳ್ಳಾಪುರ ನಗರಸಭೆಯ ಖಾಸಗಿ ಬಸ್ ನಿಲ್ದಾಣ, ಅಕ್ರಮ ಚಟುವಟಿಕೆಗಳ ತಾಣವಾಗಿದ್ದು, ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸೊರಗುತ್ತಿದೆ.

By ಚಿಕ್ಕಬಳ್ಳಾಪುರ ಪ್ರತಿನಿಧಿ
|
Google Oneindia Kannada News

ಚಿಕ್ಕಬಳ್ಳಾಪುರ, ಫೆಬ್ರವರಿ 2: ಸಮರ್ಪಕ ನಿರ್ವಹಣೆಯಿಲ್ಲದೆ ಚಿಕ್ಕಬಳ್ಳಾಪುರ ನಗರಸಭೆಯ ಖಾಸಗಿ ಬಸ್ ನಿಲ್ದಾಣ ಅಕ್ರಮ ಚಟುವಟಿಕೆಗಳ ತಾಣವಾಗಿದ್ದು, ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸೊರಗುತ್ತಿದೆ. ಇದರ ಜೊತೆಗೆ ನಗರಸಭೆಗೆ ಬರುವ ಆದಾಯವು ನಿಂತಿದೆ.

ವಿವಿಧ ಅನುದಾನಗಳನ್ನು ಬಳಕೆ ಮಾಡಿಕೊಂಡು 8.5 ಕೋಟಿ ರೂಪಾಯಿ ವೆಚ್ಚದಲ್ಲಿ ವಾಣಿಜ್ಯ ಮಳಿಗೆ, ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇಲ್ಲಿ ಒಟ್ಟು 47 ಮಳಿಗೆಗಳನ್ನು ನಿರ್ಮಿಸಿ ಹರಾಜು ಮೂಲಕ ಬಾಡಿಗೆ ನೀಡಲಾಗಿದೆ. ಬೆಂಗಳೂರು, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ ಸೇರಿದಂತೆ ಆಂದ್ರಪ್ರದೇಶಕ್ಕೆ ಹೋಗುವ 60ಕ್ಕೂ ಹೆಚ್ಚು ಬಸ್‌ಗಳು ನಿಲ್ದಾಣಕ್ಕೆ ಬಂದು ಹೋಗುತ್ತಿವೆ.

 Karnataka Assembly Election 2023: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಟಿಕೆಟ್ ಆಕಾಂಕ್ಷಿಗಳು Karnataka Assembly Election 2023: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಟಿಕೆಟ್ ಆಕಾಂಕ್ಷಿಗಳು

ಬಸ್‌ ನಿಲ್ದಾಣದಲ್ಲಿನ ವಾಣಿಜ್ಯ ಮಳಿಕೆಗಳನ್ನು ಹರಾಜು ಮೂಲಕ ಬಾಡಿಗೆಗೆ ನೀಡಲಾಗಿದೆ. ಆದರೆ ಕುಡಿಯುವ ನೀರು, ವಿದ್ಯುತ್ ದೀಪಗಳ ವ್ಯವಸ್ಥೆಯಿಲ್ಲ. ಬಂದು ಹೋಗುವ ಪ್ರಯಾಣಿಕರಿಗೆ ಆಸನಗಳ ವ್ಯವಸ್ಥೆಯನ್ನು ಅವೈಜ್ಞಾನಿಕವಾಗಿ ಮಾಡಲಾಗಿದೆ. ಇನ್ನು ಗುತ್ತಿಗೆದಾರರ ಮೂಲಕ ಪ್ರತಿ ಖಾಸಗಿ ಬಸ್‌ನಿಂದ ದಿನಕ್ಕೆ 30ರೂ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಇನ್ನು ಅಂಗಡಿ ಮಾಲೀಕರು ತಿಂಗಳಿಗೆ ಸಾವಿರಾರು ರೂಪಾಯಿ ಬಾಡಿಗೆ ಹಣವನ್ನು ನಗರಸಭೆಗೆ ಪಾವತಿ ಮಾಡುತ್ತಿದ್ದರೂ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಇರುವುದು ಅಂಗಡಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ.

 ಅವ್ಯವಸ್ಥೆಯ ಆಗರವಾದ ಚಿಕ್ಕಬಳ್ಳಾಪುರ ಬಸ್‌ ನಿಲ್ದಾಣ

ಅವ್ಯವಸ್ಥೆಯ ಆಗರವಾದ ಚಿಕ್ಕಬಳ್ಳಾಪುರ ಬಸ್‌ ನಿಲ್ದಾಣ

ಬಸ್ ನಿಲ್ದಾಣ ನಿರ್ಮಾಣದ ಸಂದರ್ಭದಲ್ಲಿ ಅಳವಡಿಸಿರುವ ವಿದ್ಯುತ್ ದೀಪಗಳು ಕೆಟ್ಟು ಹೋಗಿವೆ. ಕತ್ತಲಲ್ಲಿ ಪ್ರಯಾಣಿಕರು ಬಸ್‌ ನಿಲ್ದಾಣಕ್ಕೆ ಬರಲು ಆಗುತ್ತಿಲ್ಲ. ಬಸ್‌ ನಿಲ್ದಾಣವನ್ನು ಕಿಡಿಗೇಡಿಗಳು ಮದ್ಯಪಾನ ಮಾಡುವ ಜಾಗವಾಗಿ ಬಳಸುತ್ತಿದ್ದಾರೆ. ಸಾರ್ವಜನಿಕರು ಎಲ್ಲಂದರಲ್ಲಿ ಉಗುಳುವುದರಿಂದಾಗಿ ಸ್ವಚ್ಛತೆ ಹದಗೆಟ್ಟಿದೆ. ಹೀಗಾಗಿ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ನಿಂತು ಬಸ್‌ಗಳಿಗಾಗಿ ಕಾಯಬೇಕಾಗಿದೆ.

ಬಸ್‌ ನಿಲ್ದಾಣಕ್ಕೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ. ಇಲ್ಲಿಗೆ ಬರುವ ಜನಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳ ವ್ಯವಸ್ಥೆ ಇಲ್ಲ. ಬಸ್‌ಗಳು ನಿಲ್ದಾಣಕ್ಕೆ ಪ್ರವೇಶ ಮಾಡುತ್ತಿರುವಾಗ ಆಟೋ ಚಾಲಕರು ನಿಲ್ದಾಣದಲ್ಲಿ ಅಡ್ಡದಿಡ್ಡಿಯಾಗಿ ಚಲಿಸುತ್ತಾರೆ. ಇದು ಹಲವು ಬಾರಿ ಅಪಘಾತಕ್ಕೆ ಕಾರಣವಾಗಿದೆ.

 ಬಸ್ ನಿಲ್ದಾಣದಲ್ಲಿನ ಮಳಿಗೆಗಳ ಮಾಲೀಕರ ಅಸಮಧಾನ

ಬಸ್ ನಿಲ್ದಾಣದಲ್ಲಿನ ಮಳಿಗೆಗಳ ಮಾಲೀಕರ ಅಸಮಧಾನ

ಬಸ್ ನಿಲ್ದಾಣದಲ್ಲಿನ ಮಳಿಗೆಗಳಲ್ಲಿ ಬಟ್ಟೆ ಅಂಗಡಿ, ಕಾಂಡಿಮೆಂಟ್ಸ್‌, ಜೆರಾಕ್ಸ್, ಪ್ರಾವಿಜನ್ ಸ್ಟೋರ್, ಖಾಸಗಿ ಕಚೇರಿಗಳು ಸೇರಿದಂತೆ ವಿವಿಧ ರೀತಿಯ ಅಂಗಡಿಗಳನ್ನು ತೆರೆಯಲಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳು ಅನಧಿಕೃತ ಅಂಗಡಿಗಳನ್ನು ತೆರೆಯಲು ನಗರಸಭೆಯವರು ಅವಕಾಶ ಕೊಟ್ಟಿರುವುದು ಮಳಿಗೆಗಳಲ್ಲಿ ವ್ಯಾಪಾರವಾಗುತ್ತಿಲ್ಲ. ಇದರಿಂದಾಗಿ ಮಾಲೀಕರು ನಷ್ಟ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್‌ ನಿಲ್ದಾಣದಲ್ಲಿನ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ನಗರಸಭೆಯ ಅಧ್ಯಕ್ಷರಿಗೆ, ಪೌರಾಯುಕ್ತರಿಗೆ ಹಾಗೂ ಆರೋಗ್ಯ ನಿರೀಕ್ಷಕರಿಗೆ ದೂರು ನೀಡಿದ್ದರು, ಯಾವುದೇ ರೀತಿ ಕ್ರಮಕೈಗೊಂಡಿಲ್ಲ ಎಂದು ಅಂಗಡಿ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಅನಧಿಕೃತವಾಗಿ ತೆರೆದ ಅಂಗಡಿಗಳಿಂದ ಬಸ್‌ಗಳನ್ನು ನಿಲ್ಲಿಸಲು ಸಹ ಅಡಚಣೆ ಉಂಟಾಗುತ್ತಿದೆ.

 2021-22ನೇ ಸಾಲಿನಲ್ಲಿ 1.58 ಲಕ್ಷ ತೆರಿಗೆ ಬಾಕಿ

2021-22ನೇ ಸಾಲಿನಲ್ಲಿ 1.58 ಲಕ್ಷ ತೆರಿಗೆ ಬಾಕಿ

ನಗರಸಭೆ ತೆರಿಗೆ ವಸೂಲಿಯಲ್ಲಿ 2022ರ ಡಿಸೆಂಬರ್ ಅಂತ್ಯದವರೆಗೂ ಶೇ.73.46ರಷ್ಟು ಸಾಧನೆ ಮಾಡಿದೆ. ತೆರಿಗೆ ವಸೂಲಿಯಿಂದ ದಿನಗೂಲಿ ಪೌರಕಾರ್ಮಿಕರ, ಕಂಪ್ಯೂಟರ್ ಅಪರೇಟರ್, ಚಾಕಲಕರ ವೇತನ, ತುರ್ತು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರು, ವಾಣಿಜ್ಯ ಮಳಿಗೆಗಳು ಸಕಾಲದಲ್ಲಿ ತೆರಿಗೆ ಪಾವತಿ ಮಾಡಬೇಕು ಎಂದು ಪೌರಾಯುಕ್ತ ಉಮಾಶಂಕರ್ ತಿಳಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 27, 791 ಆಸ್ತಿಗಳು ಇವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ತೆರಿಗೆ ವಸೂಲಿ ಗುರಿ ಸಾಧನೆಯಾಗಿದೆ. 2021-22ನೇ ಸಾಲಿನಲ್ಲಿ 1.58 ಲಕ್ಷ ತೆರಿಗೆ ಬಾಕಿಯಿತ್ತು. ಆಸ್ತಿಗಳನ್ನು ಡಿಜಟಲೀಕರಣಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಸಕಾಲಕ್ಕೆ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಇನ್ನು ಬಿಲ್ ಕಲೆಕ್ಟರ್‌ಗಳು ವಾಣಿಜ್ಯ ಮಳಿಗೆಗಳ ಬಳಿಗೆ ಹೋಗಿ ವಸೂಲಿ ಮಾಡುತ್ತಿದ್ದಾರೆ ಎಂದರು.

 ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸುವಂತೆ ಮನವಿ

ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸುವಂತೆ ಮನವಿ

ಖಾಸಗಿ ಬಸ್ ನಿಲ್ದಾಣದಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನಕ್ಕೆ ತಂದಿದ್ದಾರೆ. ಹಂತ ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ವಾಹನ ನಿಲುಗಡೆಯ ಟೆಂಡರ್ ಅತಿ ಶೀಘ್ರದಲ್ಲೇ ಕರೆದು ದ್ವಿಚಕ್ರ ವಾಹನಗಳ ನಿಲುಗಡೆಗೆ ಅನುವು ಮಾಡಿಕೊಡಲಾಗುವುದು ಎಂದು ಉಮಾಶಂಕರ್ ತಿಳಿಸಿದ್ದಾರೆ.

"ಮಳಿಗೆಯನ್ನು ಬಾಡಿಗೆಗೆ ಪಡೆದುಕೊಂಡು ಎರಡು ವರ್ಷಗಳೇ ಕಳೆದಿವೆ. ನಿಲ್ದಾಣಕ್ಕೆ ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಬಂದು ಹೋಗುತ್ತಾರೆ. ನಿಲ್ದಾಣಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅಧ್ಯಕ್ಷರಿಗೆ, ಪೌರಾಯುಕ್ತರಿಗೆ ಮನವಿ ಮಾಡಿದ್ದರು ಸಮಸ್ಯೆಗೆ ಸ್ಪಂದಿಸಿಲ್ಲ. ಬೀದಿಬದಿ ವ್ಯಾಪಾರಿಗಳಿಗೆ ಬೇರೆ ಕಡೆ ವ್ಯವಸ್ಥೆ ಮಾಡಿಕೊಟ್ಟು ನಿಲ್ದಾಣದಲ್ಲಿನ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಬೇಕು" ಎಂದು ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ್ ಆಗ್ರಹಿಸಿದ್ದಾರೆ.

English summary
ಸಮರ್ಪಕ ನಿರ್ವಹಣೆಯಿಲ್ಲದೆ ಚಿಕ್ಕಬಳ್ಳಾಪುರ ನಗರಸಭೆಯ ಖಾಸಗಿ ಬಸ್ ನಿಲ್ದಾಣ ಸ್ವಚ್ಛತೆ ಇಲ್ಲದೆ, ಅಕ್ರಮ ಚಟುವಟಿಕೆಗಳ ತಾಣವಾಗಿದ್ದು,ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸೊರಗುತ್ತಿದೆ. ಇದರ ಜೊತೆಗೆ ನಗರಸಭೆಗೆ ಬರುವ ಆದಾಯವು ನಿಂತಿದೆ. ವಿವಿಧ ಅನುದಾನಗಳನ್ನು ಬಳಕೆ ಮಾಡಿಕೊಂಡು 8.5 ಕೋಟಿ ರೂಪಾಯಿ ವೆಚ್ಚದಲ್ಲಿ ವಾಣಿಜ್ಯ ಮಳಿಗೆ, ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇಲ್ಲಿ ಒಟ್ಟು 47 ಮಳಿಗೆಗಳನ್ನು ನಿರ್ಮಿಸಿ ಹರಾಜು ಮೂಲಕ ಬಾಡಿಗೆ ನೀಡಲಾಗಿದೆ. ಬೆಂಗಳೂರು, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ ಸೇರಿದಂತೆ ಆಂದ್ರಪ್ರದೇಶಕ್ಕೆ ಹೋಗುವ 60ಕ್ಕೂ ಹೆಚ್ಚು ಬಸ್‌ಗಳು ನಿಲ್ದಾಣಕ್ಕೆ ಬಂದು ಹೋಗುತ್ತಿವೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X