ಚಿಂತಾಮಣಿ ಬಸ್ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ
ಚಿಂತಾಮಣಿ, ಜುಲೈ 03: ಚಿಕ್ಕಬಳ್ಳಾಫುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತರಾದ 12 ಮಂದಿಯ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಚಿಂತಾಮಣಿ ತಾಲ್ಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟಿರುವ ವಿಷಯ ತಿಳಿದು ಮುಖ್ಯಮಂತ್ರಿಗಳು ತೀವ್ರ ಆಘಾತ ವ್ಯಕ್ತಪಡಿಸಿದ್ದರು.
ಈ ಅಪಘಾತ ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿರುವ ಮುಖ್ಯಮಂತ್ರಿಗಳು, ಅಪಘಾತದಿಂದ ಮೃತ ಪಟ್ಟವರ ಕುಟುಂಬಕ್ಕೆ ಇದೀಗ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಮುರಗಮಲ್ಲದಿಂದ ಚಿಂತಾಮಣಿಯತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟಾಟಾ ಏಸ್ ವಾಹನದ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, 12 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹಲವು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಕೋಲಾರ ಮತ್ತು ಚಿಂತಾಮಣಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications