ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಂತಾಮಣಿಯಲ್ಲಿ ದೊಡ್ಡ ಕೈಗಾರಿಕಾ ವಲಯ ನಿರ್ಮಾಣ: ಸುಧಾಕರ್

|
Google Oneindia Kannada News

ಚಿಕ್ಕಬಳ್ಳಾಪುರ, ಆಗಸ್ಟ್ 17: ಚಿಂತಾಮಣಿಯಲ್ಲಿ ಕೈಗಾರಿಕಾಭಿವೃದ್ಧಿಗೆ 1,000 ಎಕರೆ ಜಾಗ ಗುರುತಿಸಿದ್ದು, ಇದು ದೊಡ್ಡ ಕೈಗಾರಿಕಾ ವಲಯವಾಗಿ ಬೆಳೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಇದೇ ವೇಳೆ ಕೈವಾರದ ಶ್ರೀ ಯೋಗಿನಾರಾಯಣ ಕ್ಷೇತ್ರದಲ್ಲಿ ಸಚಿವ ಡಾ.ಕೆ.ಸುಧಾಕರ್ ಪೂಜೆ ಸಲ್ಲಿಸಿದರು. ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು.

Recommended Video

ಗಣಪತಿ ವಿಗ್ರಹ ತಯಾರಿಸುವ ಧಾರವಾಡದ ಕಲಾವಿದನ ಕೂಗು | Oneindia Kannada

ಚಿಂತಾಮಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, "ಚಿಂತಾಮಣಿಯನ್ನು ಆರ್ಥಿಕ ಮತ್ತು ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ 1,000 ಎಕರೆ ಜಾಗವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿ ಮಾಡಲು ಗುರುತಿಸಲಾಗಿದೆ. ಅನೇಕ ಉದ್ಯಮ ಸಂಸ್ಥೆಗಳು ಇಲ್ಲಿ ಉದ್ಯಮ ಆರಂಭಿಸಲು ಒಪ್ಪಂದ ಮಾಡಿಕೊಂಡಿವೆ. ಈ ಪ್ರದೇಶ ಮುಂದಿನ ದಿನಗಳಲ್ಲಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಬೆಳೆಯಲಿದೆ. ಈ ಭಾಗದ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ" ಎಂದು ವಿವರಿಸಿದರು.

Chintamani to get 1000 acres Industrial area: Minister Dr.K.Sudhakar

ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ನೀಡಿದ ಸುಧಾಕರ್ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ನೀಡಿದ ಸುಧಾಕರ್

"ಯುವಜನರು ವ್ಯಾಸಂಗ ಮುಗಿಸಿದ ಕೂಡಲೇ ಉದ್ಯೋಗ ಸಿಗುವಂತಾಗಬೇಕು. ಇದಕ್ಕಾಗಿ ಬೇಡಿಕೆ ಇರುವ ಕೋರ್ಸ್ ಗಳನ್ನು ಆಧರಿಸಿಯೇ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಚಿಂತಾಮಣಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಗುರಿ ಇದೆ" ಎಂದರು.

Chintamani to get 1000 acres Industrial area: Minister Dr.K.Sudhakar

ನೀರಿನ ಸಮಸ್ಯೆ ಪರಿಹರಿಸಲು ಆಂಧ್ರ ಜೊತೆ ನೀರು ಹಂಚಿಕೆ: ಸುಧಾಕರ್ ನೀರಿನ ಸಮಸ್ಯೆ ಪರಿಹರಿಸಲು ಆಂಧ್ರ ಜೊತೆ ನೀರು ಹಂಚಿಕೆ: ಸುಧಾಕರ್

ಕಾಮಗಾರಿಗಳಿಗೆ ಚಾಲನೆ ಪ್ರಧಾನಮಂತ್ರಿ ಗ್ರಾಮ ಸಡಕ್-3 ನೇ ಯೋಜನೆಯಡಿ 18 ಕೋಟಿ ರೂ. ವೆಚ್ಚದಲ್ಲಿ 30 ಕಿ.ಮೀ. ಉದ್ದದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸಚಿವ ಡಾ.ಕೆ.ಸುಧಾಕರ್ ಗುದ್ದಲಿ ಪೂಜೆ ನೆರವೇರಿಸಿದರು.

Chintamani to get 1000 acres Industrial area: Minister Dr.K.Sudhakar

ಮೈಲಾಪುರ ಗ್ರಾಮದಿಂದ ಬೂರಗಮಾಕಲಹಳ್ಳಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬೊಮ್ಮೆಕಲ್ಲುವಿನಲ್ಲಿ, ಚಿನ್ನಸಂದ್ರದಿಂದ ನಾಯಿಂದ್ರಹಳ್ಳಿವರೆಗಿನ ರಸ್ತೆ ಅಭಿವೃದ್ಧಿಗೆ ಬ್ಯಾಲಹಳ್ಳಿ ಕ್ರಾಸ್ ನಲ್ಲಿ ಮತ್ತು ಕಾಚಹಳ್ಳಿಯಿಂದ ವಿಶ್ವನಾಥಪುರವರೆಗಿನ ರಸ್ತೆ ಅಭಿವೃದ್ಧಿಗೆ ಚಿಕ್ಕಪುರದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

English summary
A whopping 1000 acres land has been earmarked in Chintamani to develop industrial area in the taluk, said district in-charge Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X