Siddaramaiah campaign: ಬಾಗೇಪಲ್ಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರಚಾರ ಸಭೆ, ಡಿಕೆಶಿ ಭಾಗಿ
ಚಿಕ್ಕಬಳ್ಳಾಪುರ ಏಪ್ರಿಲ್ 18: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಬೃಹತ್ ರೋಡ್ ಶೋ ನಡೆಸಿಲಿದ್ದಾರೆ.
ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಇಂದು ಬಾಗೇಪಲ್ಲಿ ಕ್ಷೇತ್ರಕ್ಕೆ ಬರಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬೃಹತ್ ರೋಡ್ ಶೋ ಹಾಗೂ ಬಹಿರಂಗ ಸಭೆ ನಡೆಯಲಿದ್ದು ಪ್ರಚಾರ ಸಭೆಯಲ್ಲಿ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಪಿಳಪ್ಪ ಕಾಂಪ್ಲೆಕ್ಸ್ ನಿಂದ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ರ್‍ಯಾಲಿ ನಡೆಯಲಿದೆ. ಸಚಿವ ಡಾ. ಎಂ. ಸಿ. ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ಸೇರಿದಂತೆ ಹಲವು ಮುಖಂಡರು ಸಿಎಂ, ಡಿಸಿಎಂ ಗೆ ಸಾಥ್ ನೀಡಲಿದ್ದಾರೆ. ಬಾಗೇಪಲ್ಲಿ ಬಸ್ ಡಿಪೋ ರಸ್ತೆಯಲ್ಲಿರುವ ಕೆಎಚ್ಬಿ ಕಾಲೋನಿಯಲ್ಲಿ ಬಹಿರಂಗ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರು ಸೇರಿದಂತೆ ಅನೇಕ ರಾಜ್ಯ ಮಟ್ಟದ ನಾಯಕರು ರಕ್ಷಾ ರಾಮಯ್ಯ ಪರ ಮಾತಪ್ರಚಾರ ನಡೆಸಲಿದ್ದಾರೆ. ಪಟ್ಟಣದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗುವಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು, ಜನ ಪ್ರತಿನಿದಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ಇನ್ನೂ ಮಧ್ಯಾಹ್ನ 3 ಗಂಟೆಗೆ ಗೌರಿಬಿದನೂರು ಪಟ್ಟಣದಲ್ಲಿ ಸಿಎಂ, ಡಿಸಿಎಂ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ, ಮಾಜಿ ಶಾಸಕ ಶಿವಶಂಕರ ರೆಡ್ಡಿ ಸೇರಿ ಹಲವು ನಾಯಕರು ಇವರೊಂದಿಗೆ ಸಾಥ್ ನೀಡಲಿದ್ದಾರೆ.












Click it and Unblock the Notifications