ಲೋಕಸಭೆ ಚುನಾವಣೆಗೆ ಕೈ ತಯಾರಿ: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲೇ ಕಚೇರಿ ಆರಂಭಿಸಿದ ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ, ಜೂನ್ 15: ಈಗಷ್ಟೇ ರಾಜ್ಯ ವಿಧಾನಸಭಾ ಚುನಾವಣೆಯೂ ಮುಗಿದು ಪೂರ್ಣ ಪ್ರಮಾಣದ ಸಂಪುಟ ರಚನೆಯಾದ ಬೆನ್ನೆಲ್ಲೇಸ ಲೋಕಸಭೆಯ ಚುನಾವಣೆಯ ಕಾವು ಏರತೊಡಗಿದ್ದು, ಕಾಂಗ್ರೆಸ್ ಟಿಕೆಟ್‍ಗಾಗಿ ಆಕಾಂಕ್ಷಿಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ.
ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಆಗಲೇ ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರದಲ್ಲಿ ತಾಲೀಮು ಶುರು ಮಾಡಿದ್ದಾರೆ. ಜಿಲ್ಲಾ ಕೇಂದ್ರದಲ್ಲೇ ಕಚೇರಿ ಮಾಡುವ ಮೂಲಕ ಸ್ಪರ್ಧೆಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ಸದ್ಯ ಬಿಜೆಪಿ ವಶದಲ್ಲಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಈಗಿಂದಲೇ ಸಜ್ಜಾಗುತ್ತಿದೆ.

ಇನ್ನೊಂದೆಡೆ ಬಿಜೆಪಿಯಲ್ಲೂ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ಎನ್.ಬಚ್ಚೇಗೌಡ ಅವರು ಕಾಂಗ್ರೆಸ್‌ನಿಂದ ಸರ್ಧಿಸಿದ್ದ ಎಂ.ವೀರಪ್ಪ ಮೊಯ್ಲಿ ವಿರುದ್ಧ ಗೆದ್ದು ಬೀಗಿದ್ದರು. ಕಾಂಗ್ರೆಸ್ ವಶದಲ್ಲಿದ್ದ ಚಿಕ್ಕಬಳಾಪುರ ಲೋಕಸಭಾ ಕ್ಷೇತ್ರ ಮೊದಲ ಬಾರಿಗೆ ಬಿಜೆಪಿ ವಶವಾಗಿತ್ತು. ಆದರೆ ಈ ಬಾರಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಲು ಮಾಜಿ ಸಿಎಂ ಹಾಗೂ ಸಂಸದ ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುವ ಸುಳಿವು ಕೊಟ್ಟಿದ್ದಾರೆ.
ಕಾಂಗ್ರೆಸ್ ಬಲಾಬಲವೇ ಹೆಚ್ಚು
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳು ಬರಲಿವೆ. ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ಬೆಂಗಳೂರು ನಗರ ವ್ಯಾಪ್ತಿಯ ಯಲಹಂಕ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ. ಸದ್ಯ ವಿಧಾನಸಭಾ ಚುನಾವಣೆ ನಂತರ 8 ಕ್ಷೇತ್ರಗಳಲ್ಲಿ ದೊಡ್ಡಬಳ್ಳಾಪುರ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯ ರ್ಥಿ ಕೆ.ಎಚ್. ಪುಟ್ಟಸ್ವಾಮಿಗೌಡರು ಜಯಗಳಿಸಿದ್ದು, ಉಳಿದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ಒಟ್ಟು 5 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಶಾಸಕರ ಬಲಾಬಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೇಲುಗೈ ಸಾಧಿಸುವ ವಿಪುಲ ಅವಕಾಶಗಳಿದ್ದು, ಇದನ್ನು ಹೇಗೆ ಕಾಂಗ್ರೆಸ್ ಬಳಸಿಕೊಳ್ಳಲಿದೆ ಎನ್ನುವುದು ಈಗ ಕುತೂಹಲ ಕೆರಳಿಸಿದೆ.
ವೀರಪ್ಪ ಮೊಯ್ಲಿ ಅಧಿಕಾರದಲ್ಲಿರುವಾಗಲೇ ಚಿಕ್ಕಬಳ್ಳಾಪುರದವರೆಗೂ ಮೆಟ್ರೋ ರೈಲು, ಎತ್ತಿನಹೊಳೆ ಯೋಜನೆ ಅನುಷ್ಠಾನ, ಎಚ್.ಎನ್, ಪ್ಯಾಲಿ ನೀರಿನ 3ನೇ ಹಂತದ ಶುದ್ಧೀಕರಣ, ಕೈಗಾರಿಕೆ ಸ್ಥಾಪನೆ, ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆ ಸೇರಿದಂತೆ ಅಭಿವೃದ್ಧಿ ಜಪ ಜಪಿಸುತ್ತಿದ್ದಾರೆ.

ಹೊಸಬರಿಗೆ ಮಣೆ ಹಾಕುತ್ತಾ ಕಾಂಗ್ರೆಸ್?
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹೊಸಬರಿಗೆ ಟಿಕೆಟ್ ನೀಡಿ ಫಲ ಪಡೆದಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲೂ ಇದೇ ಫಾರ್ಮುಲಾ ಬಳಸಿದರೂ ಅಚ್ಚರಿಯಿಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು. ಈಗಾಗಲೇ ಲೋಕಸಭೆ ಚುನಾವಣೆಗೆ ಸಾಕಷ್ಟು ಅಭ್ಯರ್ಥಿಗಳು ಕಾಂಗ್ರೆಸ್‌ನಿಂದ ಕಣಕ್ಕಿಳಿಯುವ ಲಾಬಿ ಶುರು ಮಾಡಿದ್ದಾರೆ. ಹೀಗಾಗಿ ಹಳಬರಿಗೆ ಟಿಕೆಟ್ ಕೊಡುವ ಬದಲು ಹೊಸಬರು ಅದರಲ್ಲೂ ಯುವಕರಿಗೆ ಮಣೆ ಹಾಕಿ ಗೆಲ್ಲಿಸುವ ಯತ್ನಗಳು ನಡೆದಿವೆ ಎನ್ನಲಾಗಿದೆ.
ಈ ಹಿಂದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಹೈಕಮಾಂಡ್ ಸೇರಿದಂತೆ ಪಕ್ಷದ ವರಿಷ್ಠರು ಮನವಿ ಮಾಡಿದರೂ ತಿರಸ್ಕರಿಸಿದ್ದ ಎಂ.ಎಸ್.ರಾಮಯ್ಯ ಕುಟುಂಬದ ಕುಡಿ ರಕ್ಷಾ ರಾಮಯ್ಯ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ವಿಧಾನಸಭಾ ಚುನಾವಣೆಯ ಸಮಯದಲ್ಲಿಯೇ ಆಸಕ್ತಿ ತೋರಿಸಿದ್ದು, ಕಾಂಗ್ರೆಸ್ ಟಿಕೆಟ್‍ಗಾಗಿ ಅವರು ಸಹ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಬಿಜೆಪಿಯಿಂದ ಡಾ.ಕೆ.ಸುಧಾಕರ್ ಅಖಾಡಕ್ಕೆ?
ಇನ್ನೊಂದೆಡೆ ಬಿಜೆಪಿ ಪಾಳಯದಲ್ಲಿ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಜೋರಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬಿ.ಎನ್. ಬಚ್ಚೇಗೌಡರು ಅಷ್ಟೇನೂ ಸಕ್ರಿಯವಾಗಿಲ್ಲ. ಹೊಸಕೋಟೆಯಲ್ಲಿ ಅವರ ಮಗ ಕಾಂಗ್ರೆಸ್ ಶಾಸಕ, ಇವರು ಬಿಜೆಪಿ ಸಂಸದ ಹೀಗಾಗಿ ಈ ಬಾರಿ ಬಚ್ಚೇಗೌಡರ ಬದಲು ಬೇರೋಬ್ಬರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ. ಅದರಲ್ಲೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತ ಗೊಂಡಿರುವ ಡಾ.ಕೆ.ಸುಧಾಕರ್ ಅವರಿಗೆ ಟಿಕೆಟ್ ಸಿಗಬಹುದೆಂಬ ಸುದ್ದಿ ಜೋರಾಗಿದ್ದು, ಚುನಾವಣಾ ಲೆಕ್ಕಾಚಾರಗಳು ನಡೆಯುತ್ತಿವೆ. ಮತ್ತೊಂದೆಡೆ ಎಂಟಿಬಿ ನಾಗರಾಜ್ ಅವರ ಹೆಸರು ಸಹ ಹರಿದಾಡುತ್ತಿದೆ.
-
"ಕಾಂಗ್ರೆಸ್‌ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications