Danger Dengue: ಡೆಂಗ್ಯೂ ಬಗ್ಗೆ ಮುನ್ನೆಚ್ಚರಿಕೆ ಕ್ರಮವಹಿಸಿ- ಜಿಲ್ಲಾ ಆರೋಗ್ಯಾಧಿಕಾರಿ ಸಲಹೆ
ಚಿಕ್ಕಬಳ್ಳಾಪುರ ಜುಲೈ 4: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಸೋಂಕು ಹೊಂದಿದ ಈಡೀಸ್ ಈಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಡೆಂಗ್ಯೂ ಹರಡುತ್ತದೆ. ಈ ಸೊಳ್ಳೆಗಳು ಮನೆಗಳಲ್ಲಿ ಶೇಖರಿಸಿರುವ ನೀರಿನ ತಾಣಗಳಾದ ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟಿ, ಮಡಿಕೆ ಹಾಗೂ ತ್ಯಾಜ್ಯ ವಸ್ತುಗಳಾದ ತೆಂಗಿನ ಚಿಪ್ಪು, ಒಡೆದ ಬಾಟಲಿ ಹಾಗೂ ಟೈರ್ ಗಳಲ್ಲಿ ಶೇಖರವಾಗುವ ಶುದ್ದ ನೀರಿನಲ್ಲಿ ಸಾಮಾನ್ಯವಾಗಿ ಸಂತಾನಾಭಿವೃದ್ದಿ ಮಾಡುತ್ತದೆ. ಹಾಗೂ ಹಗಲು ಹೊತ್ತಿನಲ್ಲಿ ಮಾತ್ರ ಮನುಷ್ಯರನ್ನು ಕಚ್ಚುತ್ತವೆ. ಸೊಳ್ಳೆಗಳ ನಿಯಂತ್ರಣದ ಬಗ್ಗೆ ಮುನ್ನೆಚ್ಚರಿಗೆ ಕ್ರಮ ವಹಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ತಿಳಿಸಿದ್ದಾರೆ.

ತೊಟ್ಟಿಗಳು ಡ್ರಮ್ ಗಳು, ಬ್ಯಾರಲ್, ಮಣ್ಣಿನ ಮಡಿಕೆ, ಟೈರ್ ಗಳು ಮುಂತಾದ ಕಡೆ ಶೇಖರಣೆಯಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಇವುಗಳ ಬಗ್ಗೆ ಹೆಚ್ಚಿನ ಗಮನವಿಟ್ಟು ಕೆಳಕಂಡ ಮುಂಜ್ರಾಗತ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕು.
ಡೆಂಗ್ಯೂ ಜ್ವರ /ಚಿಕನ್ ಗೂನ್ಯಾದ ಲಕ್ಷಣಗಳು:
ಈ ರೋಗಕ್ಕೆ ಯುತ್ತಾದವರಲ್ಲಿ ಇದ್ದಕ್ಕಿದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ಮಾಂಸಖಂಡಗಳಲ್ಲಿ ಮತ್ತು ಕೀಲುಗಳಲ್ಲಿ ವಿಪರೀತ ನೋವು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಸ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.
ರೋಗಕ್ಕೆ ಚಿಕಿತ್ಸೆ:
ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ಧಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದನ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರಿಕ್ಷಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು.

ಈ ರೋಗದ ನಿಯಂತ್ರಣಾ ಕ್ರಮಗಳು:
ಸೊಳ್ಳೆಗಳ ನಿಯಂತ್ರಣವೇ ಡೆಂಗ್ಯೂ ಜ್ವರದ ಹತೋಟೊಗೆ ಮುಖ್ಯ ವಿಧಾನ. ಈ ಸೊಳ್ಳೆಗಳು ಮನೆಗಳಲ್ಲಿ ನೀರನ್ನು ಶೇಖರಿಸಿರುವ ಸಿಮೆಂಟ್ ತೊಟ್ಟಿ ಕಲ್ಲು ಚಪ್ಪಟಿಯಿಂದ ನಿರ್ಮಿಸಿದ ತೊಟ್ಟಿಗಳು ಡ್ರಮ್ ಗಳು, ಬ್ಯಾರಲ್, ಮಣ್ಣಿನ ಮಡಿಕೆ, ಟೈರ್ ಗಳು ಮುಂತಾದ ಕಡೆ ಶೇಖರಣೆಯಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಇವುಗಳ ಬಗ್ಗೆ ಹೆಚ್ಚಿನ ಗಮನವಿಟ್ಟು ಕೆಳಕಂಡ ಮುಂಜ್ರಾಗತ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕು.
ಮುಂಜ್ರಾಗತ ಕ್ರಮಗಳು:
ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್, ಬ್ಯಾರಲ್ ಗಳು, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ತಪ್ಪದೇ ಖಾಲಿ ಮಾಡಿ, ಒಣಗಿಸಿ ಪುನಃ ನೀರು ಭರ್ತಿ ಮಾಡಿಕೊಳ್ಳುವುದು. ನೀರು ಖಾಲಿ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ತೊಟ್ಟಿ ಮುಂತಾದವುಗಳು ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚುವುದು. ಬಯಲಿನಲ್ಲಿರುವ ಘನತ್ಯಾಜ್ಯ ವಸ್ತುಗಳಾದ ಟೈರು.
ಎಳನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಗಳನ್ನು ಬಳಸುವುದು. ಸೊಳ್ಳೆ ಕಚ್ಚದಂತೆ ಎಚ್ಚರವಹಿಸುವುದು.
ಮನೆ, ಶಾಲಾ ಕಾಲೇಜು, ಕಚೇರಿ, ಅಂಗನವಾಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ಈಡೀಸ್ ಈಜಿಪ್ಟೈ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಆದ್ಯತೆ ನೀಡೋಣ. ಆರೋಗ್ಯ ಇಲಾಖೆಯ ಸಿಬ್ಬಂಧಿ ಮನೆ ಮನೆಗೆ ಭೇಟಿ ನೀಡಿ, ಡೆಂಗೀ ಜ್ವರದಿಂದ ರಕ್ಷಿಸಿಕೊಳ್ಳಲು ನೀಡುವ ಸಲಹೆ ಸೂಚನೆಗಳನ್ನು ತಪ್ಪದೇ ಪಾಲಿಸಿ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications