ಅಂಗನವಾಡಿಯ ಫುಡ್ ಪಾಕೆಟ್‌ನಲ್ಲಿ ಸತ್ತ ಇಲಿ ಪತ್ತೆ- ಸ್ಥಳಕ್ಕೆ ಅಧಿಕಾರಿಗಳ ದೌಡು
ಚಿಕ್ಕಬಳ್ಳಾಪುರ ಆಗಸ್ಟ್ 14: ಅಂಗನವಾಡಿಯ ಫುಡ್ ಪಾಕೆಟ್‌ನಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ಬಾಗೇಪಲ್ಲಿ ಪಟ್ಟಣದ ಹೊರವಲಯದಲ್ಲಿರುವ ಆಹಾರ ತಯಾರಿಕಾ ಘಟಕ ಹಾಗೂ ಅಂಗನವಾಡಿ ಕೇಂದ್ರಕ್ಕೆ ಅಧಿಕಾರಿಗಳ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ವೇಳೆ ಹಾಜರಿದ್ದು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಆಹಾರ ಪದಾರ್ಥಗಳ ಸ್ಯಾಂಪಲ್‌ನ್ನ ಪರಿಶೀಲಿಸಿ ಲ್ಯಾಬ್‌ಗೆ ಕಳಿಸಿಕೊಟ್ಟಿದ್ದಾರೆ.

ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಿಂದ ವಿತರಿಸಲಾಗಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂದಿಸಿದಂತೆ, ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವೆಂಕಟೇಶರೆಡ್ಡಿ, ಜಿಲ್ಲಾ ಆಹಾರ ಸುರಕ್ಷತಾ ವಿಭಾಗ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹರೀಶ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಬಾಗೇಪಲ್ಲಿ ಪಟ್ಟಣದಲ್ಲಿರುವ ಅಂಗನವಾಡಿಗಳ ಆಹಾರ ಪದಾರ್ಥಗಳನ್ನು ತಯಾರಿಸುವ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೂ ಸಹ ಭೇಟಿ ನೀಡಿ ಮಾಹಿತಿ ಪಡೆದ್ದಾರೆ. ಬೆಲ್ಲದ ಪುಡಿ ಸೇರಿದಂತೆ ಹಲವು ಆಹಾರ ವಸ್ತುಗಳ ಸ್ಯಾಂಪಲ್ ಪಡೆದು ಲ್ಯಾಬ್ ಗೆ ಕಳಿಸಿದ್ದಾರೆ. ಇನ್ನು ಘಟನೆ ಸಂಬಂಧ ವರದಿಯನ್ನ ಸರಕಾರಕ್ಕೆ ಕಳಿಸಿದ್ದು, ಜೊತೆಗೆ ಬೆಲ್ಲದ ಪುಡಿಯನ್ನ ಸಪ್ಲೆ ಮಾಡಿದ್ದ ಕೋಲಾರದ ಮಾರುತಿ ಟ್ರೇಡರ್ಸ್ ಗೆ ನೋಟೀಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್ ಸತ್ಯನಾರಾಯಣರೆಡ್ಡಿ, ಸಿಡಿಪಿಓ ರಾಮಚಂದ್ರ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ಏನಿದು ಪ್ರಕರಣ?
ಅಂಗನವಾಡಿ ಕೇಂದ್ರದಲ್ಲಿ ಚಿಕ್ಕಮಕ್ಕಳಿಗೆ, ಗರ್ಭಿಣಿ, ಬಾಣಂತಿಯರಿಗೆ ನೀಡುವ ಆಹಾರವು ತೀರಾ ಕಳಪೆಯಾಗಿದ್ದು ಸೇವಿಸಲು ಯೋಗ್ಯವಾಗಿಲ್ಲ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಗರ್ಭಿಣಿ ಸ್ತ್ರೀಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಪೌಷ್ಟಿಕ ಆಹಾರ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ಆರೋಪಿಸಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ ಈ ಪೌಷ್ಟಿಕ ಆಹಾರ ಪೊಟ್ಟಣಗಳು ಬಾಗೇಪಲ್ಲಿ ತಾಲ್ಲೂಕು ಯಲ್ಲಂಪಲ್ಲಿ ಎಂ.ಎಸ್.ಪಿ.ಎಸ್ ಸಂಸ್ಥೆಯಲ್ಲಿ ತಯಾರಾಗುತ್ತಿವೆ. ತಯಾರಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ ಆಗಿದೆ. ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿರುವವರ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ :-
ಈ ಘಟನೆಯ ನಂತರ ಸಾರ್ವಜನಿಕ ವಲಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಪೂರೈಕೆ ಆಗಿರುವ ಆಹಾರ ಪದಾರ್ಥ ಪರೀಕ್ಷಿಸ ಬೇಕಾದ ಅಧಿಕಾರಿಗಳು ಯಾವುದೇ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪೂರೈಕೆ ಆಗಿರುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರೀಕ್ಷೆ ನಡೆಸುವುದಿಲ್ಲ, ಅಂಗನವಾಡಿ ಕೇಂದ್ರಗಳಲ್ಲಿನ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ನಿರ್ಲಕ್ಷ ವಹಿಸುತ್ತಿದ್ದಾರೆಂದು ಸಾರ್ವಜನಿಕರು ಆರೋಪಿಸಿದ್ದರು. ಹೀಗಾಗಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications