Breaking; ಚಿಕ್ಕಬಳ್ಳಾಪುರದಲ್ಲಿ ಭೂಮಿ ಕಂಪಿಸಿದ ಅನುಭವ
ಚಿಕ್ಕಬಳ್ಳಾಪುರ, ನವೆಂಬರ್ 10; ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ, ನಂದನವನ, ಅಪ್ಸನಹಳ್ಳಿ, ಗೋನೇನಹಳ್ಳಿ ಗ್ರಾಮಗಳ ಸುತ್ತಮುತ್ತ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ಜನರು ಮನೆಯಿಂದ ಹೊರಗೆ ಬಂದಿದ್ದಾರೆ.
ಬುಧವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದ್ದು ಗ್ರಾಮಸ್ಥರೆಲ್ಲರೂ ಮನೆಯಿಂದ ಹೊರಗೆ ಬಂದಿದ್ದಾರೆ. ಮುಂಜಾನೆ ಭೂಮಿಯಲ್ಲಿ ದೊಡ್ಡ ಶಬ್ಧವೊಂದು ಕೇಳಿಸಿದ್ದು ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿದೆ.
ಕಲಬುರಗಿಯಲ್ಲಿ ಭೂಕಂಪ; ಡಿಸಿ ಕೊಟ್ಟ ಎಚ್ಚರಿಕೆ ಏನು?
ಭೂಮಿ ಕಂಪಿಸಿದ ಅನುಭವವಾದ ತಕ್ಷಣ ಜನರು ಭೀತಿಗೊಂಡು ಹೊರಗೆ ಬಂದಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಒಂದು ಭಾರೀ ಭೂಮಿ ಕಂಪಿಸಿದ್ದು, ಇದರಿಂದ ಗ್ರಾಮಸ್ಥರು ಭೀತಿಯಿಂದಲೇ ಇದ್ದರು.
ಚಿತ್ರಗಳಲ್ಲಿ ಹಿಡಿದಿಟ್ಟ ಮೆಕ್ಸಿಕೋ ಕಂಪನ; ಮನಕಲಕುವ ಆಕ್ರಂದನ
ಬುಧವಾರ ಮುಂಜಾನೆ 5 ಗಂಟೆ ಸಮಯದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಭಯಗೊಂಡ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದಾರೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೆಲವು ಗ್ರಾಮಗಳಲ್ಲಿ ರಾತ್ರಿ ಜನರು ಮನೆಯ ಹೊರಗೆ ಕಾಲ ಕಳೆದಿದ್ದಾರೆ.
ವಿಜಯಪುರ; ಮತ್ತೆ ಕಂಪಿಸಿದ ಭೂಮಿ, 3.2 ತೀವ್ರತೆ ದಾಖಲು
ಜಿಲ್ಲೆಯಲ್ಲಿ 2018ರಲ್ಲಿ ಒಂದು ಭಾರೀ ಭೂಕಂಪದ ಅನುಭವವಾಗಿದ್ದು ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದಿದ್ದವು. ಗ್ರಾಮಸ್ಥರು ಮನೆಯಿಂದ ಹೊರಗೆ ಬಂದಿದ್ದರು.
ಇನ್ನೂ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ 1.2 ತೀವ್ರತೆಯ ಭೂಕಂಪ ವಾಗಿರುವುದನ್ನು ಸ್ಪಷ್ಟಪಡಿಸಿದ್ದರು. ಭೂಮಿಯಲ್ಲಿ ಕಾಣಿಸಿಕೊಂಡ ಶಬ್ಧವಾದರೂ ಏನು? ಎಂದು ಅಧಿಕಾರಿಗಳು ಸ್ಪಷ್ಟಪಡಿಸಬೇಕಿದೆ.