Get Updates
Get notified of breaking news, exclusive insights, and must-see stories!

5, 8ನೇ ತರಗತಿಗಳ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ, ಚಿಕ್ಕಬಳ್ಳಾಪುರ ಜಿಲ್ಲೆಯ ವಿದ್ಯಾರ್ಥಿಗಳ ವಿವರ ಇಲ್ಲಿದೆ

ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಣೆಗಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಪ್ರಕಾರ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಚಿಕ್ಕಬಳ್ಳಾಪುರ, ಮಾರ್ಚ್‌, 03: ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಣೆಗಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಪ್ರಕಾರ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.
2022-23ನೇ ಸಾಲಿನ ಶೈಕ್ಷಣಿ ವರ್ಷ ಪ್ರಾರಂಭದಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸುವ ಬಗ್ಗೆ ಇಲಾಖೆಯು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾಹಿತಿ ನೀಡಿರಲಿಲ್ಲ. ಇದೀಗ ಈ ನಿಯಮವನ್ನು ದಿಢೀರ್‌ ಜಾರಿಗೆ ತಂದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ.

ಆದ್ದರಿಂದ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡಲು ಶಿಕ್ಷಕರು ಮುಂದಾಗಿದ್ದಾರೆ. ವಿದ್ಯಾರ್ಥಿಗಳ ಗೊಂದಲ ನಿವಾರಣೆ ಮಾಡುವುದು ಇದೀಗ ಶಿಕ್ಷಕರಿಗೆ ಸವಾಲಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ 5ನೇ ತರಗತಿ ಪರೀಕ್ಷೆ ಬರೆಯಲು 16,078 ಮಕ್ಕಳು ನೋಂದಾಯಿಸಿದ್ದಾರೆ. ಜೊತೆಗೆ 387 ಪರೀಕ್ಷಾ ಕೇಂದ್ರಗಳನ್ನು ಸಹ ತೆರೆಯಲಾಗುತ್ತಿದೆ.

Education department decided to conduct annual examination for 5th and 8th classes

ಎಷ್ಟು ಅಂಕದ ಪ್ರಶ್ನೆಗಳು ಇರುತ್ತವೆ?

ಇನ್ನು 8ನೇ ತರಗತಿ ಪರೀಕ್ಷೆ ಬರೆಯಲು 16,846 ವಿದ್ಯಾರ್ಥಿಗಳು ನೋಂದಾಯಿಸಿದ್ದು, 218 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಜಿಲ್ಲಾ ಶಿಕ್ಷಣ ವಹಿಸಿಕೊಂಡಿದ್ದು, ಎಲ್ಲಾ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಶ್ನೆ ಪತ್ರಿಕೆಯು ತಲಾ 40 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಂದು ಅಂಕದ 20 ಬಹುಆಯ್ಕೆಯ ಪ್ರಶ್ನೆಗಳು, 20 ಅಂಕಗಳಿಗೆ ವಿವರಣಾತ್ಮಕ ಉತ್ತರ ಬರೆಯುವ ಪ್ರಶ್ನೆಗಳಿರುತ್ತವೆ.

ಪ್ರಶ್ನೆಗಳು ಹೇಗೆ ಇರಲಿವೆ?

ಅವುಗಳಲ್ಲಿ ಎರಡು ಅಂಕದ 5 ಪ್ರಶ್ನೆಗಳು, ಮೂರು ಅಂಕದ 2 ಪ್ರಶ್ನೆಗಳು, ನಾಲ್ಕು ಅಂಕದ 1 ಪ್ರಶ್ನೆಯನ್ನು ಪತ್ರಿಕೆ ಒಳಗೊಂಡಿರುತ್ತದೆ. ಉತ್ತರಿಸಲು ಎರಡು ಗಂಟೆ ಸಮಯವನ್ನು ನಿಗದಿ ಮಾಡಲಾಗಿದೆ. ಅದಕ್ಕೂ ಮೊದಲು ಶಾಲೆಯಲ್ಲಿ 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಸರಬರಾಜು ಮಾಡಲಿದೆ.

Education department decided to conduct annual examination for 5th and 8th classes

8ನೇ ತರಗತಿಯ ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡಲು ಜಿಲ್ಲೆಯ ಒಂದು ತಾಲೂಕಿನಿಂದ ಮತ್ತೊಂದು ತಾಲೂಕಿಗೆ ಹಾಗೂ 5ನೇ ತರಗತಿಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲು ಒಂದು ಕ್ಲಸ್ಟರ್‌ನಿಂದ ಮತ್ತೊಂದು ಕ್ಲಸ್ಟರ್‌ಗೆ ಕಳುಹಿಸಿಕೊಡಲಾಗುವುದು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಕಲಿಕಾ ಸುಧಾರಣೆ, ಶಿಕ್ಷಕರ ಬೋಧನಾ ಕ್ರಮದ ಬಗ್ಗೆ ಮಾಹಿತಿ ದೊರೆಯುತಂತಾಗುತ್ತದೆ

ಮಕ್ಕಳ ಸಾಮರ್ಥ್ಯ ಅರಿಯುವ ಪರೀಕ್ಷೆ

ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದೇವೆ. ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಮಕ್ಕಳ ಸಾಮರ್ಥ್ಯ ಅರಿಯುವ ಪರೀಕ್ಷೆ ಇದಾಗಿದ್ದು, ಮಾರ್ಗದರ್ಶನವನ್ನು ನೀಡಿದ್ದೇವೆ. 8ನೇ ತರಗತಿ ಪರೀಕ್ಷೆ ಮಾರ್ಚ್ 13ರಿಂದ 18ರವರೆಗೆ ಹಾಗೂ 5ನೇ ತರಗತಿ ಪರೀಕ್ಷೆ ಮಾರ್ಚ್ 15ರಿಂದ 18ರವರೆಗೆ ನಡೆಯಲಿದೆ. ಪರೀಕ್ಷೆಯು ಪ್ರತಿದಿನ ಮಧ್ಯಾಹ್ನ 2:30ರಿಂದ 4.30ರವರೆಗೆ ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಿದೆ. ಮಾದರಿ ಪ್ರಶ್ನೆಗಳು ಮಂಡಳಿಯ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಶಿಕ್ಷಣ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯರಾಮರೆಡ್ಡಿ ತಿಳಿಸಿದ್ದಾರೆ.

ಪರೀಕ್ಷೆಯ ವೇಳಾಪಟ್ಟಿಯ ಮಾಹಿತಿ

ಎಂಟನೇ ತರಗತಿಗೆ ಮಾರರ್ಚ್‌ 13ರಂದು ಪ್ರಥಮ ಭಾಷೆ, ಮಾರ್ಚ್‌ 14ರಂದು ದ್ವಿತೀಯ ಭಾಷೆ, ಮಾರ್ಚ್‌ 15ರಂದು ತೃತೀಯ ಭಾಷಾ ವಿಷಯಗಳು, ಮಾರ್ಚ್‌ 16ರಂದು ಗಣಿತ, ಮಾರ್ಚ್‌ 17ರಂದು ವಿಜ್ಞಾನ ಹಾಗೂ ಮಾರ್ಚ್‌ 18ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಇನ್ನು ಐದನೇ ತರಗತಿಗೆ ಮಾರ್ಚ್‌ 15ರಂದು ಪ್ರಥಮ ಭಾಷೆ, ಮಾರ್ಚ್‌ 16ರಂದು ಗಣಿತ, ಮಾರ್ಚ್‌ 17ರಂದು ಪರಿಸರ ಅಧ್ಯಯನ, ಮಾರ್ಚ್‌ 18ರಂದು ದ್ವಿತೀಯ ಭಾಷಾ ಪರೀಕ್ಷೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಡಿಡಿಪಿಐ ಜಯರಾಮರೆಡ್ಡಿ ಹೇಳಿದ್ದೇನು?

ಮೌಲ್ಯಾಂಕನ ಪರೀಕ್ಷೆಯ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ. ಮಕ್ಕಳ ಕಲಿಕಾ ಸುಧಾರಣೆಗೆ ಪೂರಕವಾಗಿ ಪರೀಕ್ಷೆ ನಡೆಸಲಾಗುತ್ತಿದ್ದು, ಮುಂದಿನ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನವಾಗಲಿದೆ ಎಂದು ಚಿಕ್ಕಬಳ್ಳಾಪುರ ಡಿಡಿಪಿಐ ಜಯರಾಮರೆಡ್ಡಿ ತಿಳಿಸಿದ್ದಾರೆ. ಹಾಗೆಯೇ
ಪಬ್ಲಿಕ್ ಪರೀಕ್ಷೆ ನಡೆಸುತ್ತಿರುವುದರಿಂದ ಮುಂದಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶಗಳಿಸಲು ಸಹಕಾರಿಯಾಗುತ್ತದೆ. ಇದರಿಂದಾಗಿ ನಮ್ಮ ಶೈಕ್ಷಣಿಕ ಸಾಧನೆ ಮಾಡಬಹುದು ಎಂದು 8ನೇ ತರಗತಿ ವಿದ್ಯಾರ್ಥಿನಿ ಮೌನಿಕ ಹೇಳಿದರು.

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ವಿವರ

ತಾಲೂಕು 5ನೇ ತರಗತಿ 8ನೇ ತರಗತಿ
ಬಾಗೇಪಲ್ಲಿ 2,466 2,478
ಗುಡಿಬಂಡೆ 620 729

ಚಿಕ್ಕಬಳ್ಳಾಪುರ 2,763 3,017
ಗೌರಿಬಿದನೂರು 3,361 3,813
ಶಿಡ್ಲಘಟ್ಟ 2,960 2,899
ಚಿAತಾಮಣಿ 3,908 3,910
ಒಟ್ಟು 16,078 16,846

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+