ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೈತರನ್ನು ತಪ್ಪು ದಾರಿಗೆಳೆಯುವ ಯತ್ನ ನಡೆದಿದೆ: ಸುಧಾಕರ್

|
Google Oneindia Kannada News

ಚಿಕ್ಕಬಳ್ಳಾಪುರ, ಜನವರಿ 26: ದೇಶದ ಬೆನ್ನೆಲುಬು ರೈತರ ಜೀವನಗುಣಮಟ್ಟ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಕೃಷಿಯಲ್ಲಿ ಸುಧಾರಣೆ ತಂದಿದ್ದಾರೆ. ಆದರೆ ರಾಜಕೀಯ ಪ್ರೇರಿತವಾಗಿ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದು, ಇದು ಸಫಲ ಆಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ನಡೆದ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕೆಲ ಕಾನೂನುಗಳಲ್ಲಿ ಬದಲಾವಣೆ ತರುವ ಮೂಲಕ ಅಭಿವೃದ್ಧಿ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆ ಮೂಲಕ ನೇರವಾಗಿ ಖಾತೆಗೆ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಆಗುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಈ ಯೋಜನೆಯಡಿ ಹಣ ನೀಡುತ್ತಿದ್ದಾರೆ. ಆದರೆ ದುರದೃಷ್ಟವೆಂಬಂತೆ ಕೆಲ ಸಂಘಟನೆ, ಮಧ್ಯವರ್ತಿ, ರಾಜಕೀಯ ಪ್ರೇರಿತವಾಗಿ ಪಕ್ಷಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿವೆ ಎಂದರು.

ಮುಖ್ಯಮಂತ್ರಿಗಳು ಉತ್ತಮ ನಿರ್ಧಾರ ಕೈಗೊಂಡಿದ್ದು, ಸಂಪುಟ ಸಂಪೂರ್ಣ ಆಗಿದೆ. ನಾವೆಲ್ಲರೂ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಜವಾಬ್ದಾರಿ ನಿರ್ವಹಿಸುತ್ತೇವೆ. ಸರ್ಕಾರ ಇನ್ನು ಮುಂದೆಯೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಕೊರೊನಾ ನಿಯಂತ್ರಣಕ್ಕೆ ಬಂದಿದೆ

ಕೊರೊನಾ ನಿಯಂತ್ರಣಕ್ಕೆ ಬಂದಿದೆ

ರಾಜ್ಯದಲ್ಲಿ ಕೈಗೊಂಡ ತ್ವರಿತ ಕ್ರಮಗಳಿಂದ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಅತಿ ಶೀಘ್ರದಲ್ಲಿ ಕೊರೊನಾ ಲಸಿಕೆ ದೊರೆತಿದ್ದು, ಬೇರೆ ದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಬ್ರೆಜಿಲ್ ನ ಅಧ್ಯಕ್ಷರು ಲಸಿಕೆ ನೀಡಿರುವುದಕ್ಕೆ ಭಾರತಕ್ಕೆ ಧನ್ಯವಾದ ಹೇಳಿದ್ದಾರೆ. ಈ ರೀತಿ ಬೇರೆ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವ ಕಾರ್ಯವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಜಗತ್ತಿನ ಮುಂದೆ ತಲೆ ಎತ್ತಿ ನಡೆಯುವಂತೆ ಭಾರತ ಬೆಳೆದಿದೆ ಎಂದರು.

ಭಾರತದಲ್ಲಿ ಅತಿ ಹೆಚ್ಚು ಯುವಜನರಿದ್ದಾರೆ

ಭಾರತದಲ್ಲಿ ಅತಿ ಹೆಚ್ಚು ಯುವಜನರಿದ್ದಾರೆ

ಭಾರತದಲ್ಲಿ ಅತಿ ಹೆಚ್ಚು ಯುವಜನರಿದ್ದಾರೆ. ದೇಶದಲ್ಲಿ ಉತ್ತಮ ಮಾನವ ಸಂಪನ್ಮೂಲವಿದ್ದು, ಇದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಮೂಲಭೂತ ಹಕ್ಕುಗಳಂತೆ, ಮೂಲಭೂತ ಕರ್ತವ್ಯಗಳಿವೆ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ನಾಗರಿಕರಾಗಿ ದೇಶವನ್ನು ಉನ್ನತಿಗೆ ಕೊಂಡೊಯ್ಯಲು ಕರ್ತವ್ಯ ಪಾಲಿಸಬೇಕು ಎಂದರು.

ಸಂವಿಧಾನ ಜಾರಿಯಾದ ದಿನವಿದು

ಸಂವಿಧಾನ ಜಾರಿಯಾದ ದಿನವಿದು

ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ಜಾರಿಯಾದ ದಿನವಿದು. ಕನ್ನಡಿಗ ಬೆನಗಲ್ ನರಸಿಂಗರಾಯರು ಆ ಸಮಿತಿಯಲ್ಲಿದ್ದರು. ಅಂಬೇಡ್ಕರ್ ನೀಡಿದ ಸಂವಿಧಾನ ಸಮಬಾಳು, ಸಮಪಾಲು ಎಂಬ ಚಿಂತನೆಯಿಂದ ಕೂಡಿದೆ. ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡದಾದ ಪ್ರಜಾಪ್ರಭುತ್ವ ದೇಶಕ್ಕೆ ಪೂರಕವಾದ ಸಂವಿಧಾನವಿದು ಎಂದರು.

ಜೈ ಇನ್ಸಾನ್ ಎಂಬ ಸಂದೇಶ ಸಾರಬೇಕಿದೆ

ಜೈ ಇನ್ಸಾನ್ ಎಂಬ ಸಂದೇಶ ಸಾರಬೇಕಿದೆ

ರೈತರು, ಯೋಧರನ್ನು ಸ್ಮರಿಸಲು ಜೈ ಜವಾನ್ ಜೈ ಕಿಸಾನ್ ಎಂದು ಲಾಲ್ ಬಹಾದ್ದೂರ್ ಶಾಸ್ತ್ರಿ ಹೇಳಿದ್ದರು. ವಿಜ್ಞಾನಿಗಳನ್ನು ಸ್ಮರಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಜೈ ವಿಜ್ಞಾನ್ ಎಂದು ಹೇಳಿದ್ದರು. ಅದೇ ರೀತಿ ಕವಿ ಕುವೆಂಪು ವಿಶ್ವಮಾನವ ಸಂದೇಶ ಸಾರಲು ಜೈ ಇನ್ಸಾನ್ ಎಂಬ ಸಂದೇಶ ಸಾರಬೇಕಿದೆ ಎಂದರು.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಧರಿಸುವುದು, ಶುಚಿತ್ವ ಕಾಪಾಡುವುದು ಎಲ್ಲರ ಕರ್ತವ್ಯ, ದೇಶದಲ್ಲಿ ಭದ್ರತಾ ವ್ಯವಸ್ಥೆ ಉತ್ತಮವಾಗಿದ್ದು, ಬೇರೆ ದೇಶಗಳು ಗಡಿ ವಿಚಾರದಲ್ಲಿ ಭಯ ಪಡುವಂತಾಗಿದೆ.

Recommended Video

ಬೆಂಗಳೂರು: ನೆಲಮಂಗಲದಲ್ಲಿ ಅನ್ನದಾತರ ಬೃಹತ್ ಪ್ರೊಟೆಸ್ಟ್..! | Oneindia Kannada

English summary
Farmers are misleaded by miscreants, protest won't be successful said Health Ministet Dr Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X