ಕೊರೊನಾದಿಂದ ಮೃತಪಟ್ಟಿದ್ದ ಗೌರಿಬಿದನೂರು ಮಹಿಳೆಯ ಮಗ, ಸೊಸೆ ಮೊಮ್ಮಗನಿಗೂ ಸೋಂಕು
ಚಿಕ್ಕಬಳ್ಳಾಪುರ, ಮಾರ್ಚ್ 28: ಜಿಲ್ಲೆಯ ಗೌರಿಬಿದನೂರಿನಲ್ಲಿ ಒಂದೇ ದಿನ ಕೊರೊನಾ ಸೋಂಕಿತ ಐದು ಮಂದಿ ಪತ್ತೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗು ಸೋಂಕಿತರ ಸಂಖ್ಯೆ 9ಕ್ಕೇರಿದೆ.
Recommended Video
ಗೌರಿಬಿದನೂರಿನಲ್ಲಿ ಈ ಮೊದಲು ನಾಲ್ಕು ಪ್ರಕರಣಗಳು ದೃಢಪಟ್ಟಿದ್ದವು. ಇದರಲ್ಲಿ ಮೆಕ್ಕಾದಿಂದ ಬಂದಿದ್ದ 70 ವರ್ಷದ ವೃದ್ಧೆಯೊಬ್ಬರು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ಮೃತಪಟ್ಟಿದ್ದರು. ಇದೀಗ ಹೊಸದಾಗಿ ಐದು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಅದರಲ್ಲಿ ಮೃತಪಟ್ಟ ಮಹಿಳೆಯ ಕುಟುಂಬದವರೂ ಸೇರಿದ್ದಾರೆ.
ಜಿಲ್ಲೆಯ ಮೊದಲ ಪ್ರಕರಣದ 31 ವರ್ಷದ ವ್ಯಕ್ತಿಯ ತಂದೆಗೂ ಕೋವಿಡ್-19 ಸೋಂಕು ದೃಢಪಟ್ಟಿದೆ. ಆತನ ಸೋದರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಅವರ ರಕ್ತ ಹಾಗೂ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಅಂತಿಮ ವರದಿಗಾಗಿ ಕಾಯುತ್ತಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಇತ್ತೀಚೆಗೆ ಕೊರೊನಾ ಸೋಂಕಿನಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಮಹಿಳೆಯ ಮಗ, ಸೊಸೆ, ಅವರ ಮೊಮ್ಮಗ ಸೇರಿದಂತೆ ಸೊಸೆಯ ತಮ್ಮನಿಗೂ ಸೋಂಕು ಇರುವುದಾಗಿ ತಿಳಿದುಬಂದಿದೆ. ಈ ಕುರಿತು ಜಿಲ್ಲಾಧಿಕಾರಿ ಆರ್.ಲತಾ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

ಸೋಂಕು ದೃಢಪಟ್ಟಿರುವ ಮಂದಿಯನ್ನು ಚಿಕ್ಕಬಳ್ಳಾಪುರ ನಗರದ ಹಳೇ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications