Veerappa Moily: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ, ಏಪ್ರಿಲ್. 08: ರಾಜ್ಯ ಹಿರಿಯ ಕಾಂಗ್ರೆಸ್ ನಾಯಕರು ಒಬ್ಬೊಬ್ಬರಾಗಿಯೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದಾರೆ. ಇತ್ತೀಚೆಗೆ ಮೈಸೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸಿದ್ದರು.
ಇದರ ಬೆನ್ನಲ್ಲೆ ಸಾಲು ಸಾಲು ನಾಯಕರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದಾರೆ. ನಿನ್ನೇಯಷ್ಟೇ ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ, ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ನನಗೆ ಮತ ನೀಡಿ ಎಂದು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಘೋಷಿಸಿದ್ದಾರೆ. ಇವರ ಹಾದಿಯಲ್ಲಿಯೇ ಮಾಜಿ ಮುಖ್ಯಮಂತ್ರಿ ಎಂ ವೀರೊ್ಒ ಮೊಯ್ಲಿ ಕೂಡ ಸಾಗುತ್ತಿದ್ದಾರೆ.

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಸಮಯದಲ್ಲಿ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಟಿಕೆಟ್ ನೀಡದ ಕಾರಣ ಬೇಸರದಲ್ಲಿರುವ ಅವರು, ರಾಜಕಾರಣವೇ ಬೇಡ ಎಂದಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಮಾಜಿ ಮುಖ್ಯಮಂತ್ರಿಯನ್ನು ಬಿಟ್ಟು ಯುವ ನಾಯಕರ ರಕ್ಷಾ ರಾಮಯ್ಯ ಅವರನ್ನು ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿಸಿದೆ. ನೀಡಿದೆ. ಟಿಕೆಟ್ ಸಿಗದೆ ನಿರಾಸೆಯಲ್ಲಿದ್ದ ಅವರು, ಸದ್ಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿ, ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಮಾಜಿ ಸಿಎಂ ಎಂ ವೀರಪ್ಪ ಮೊಯ್ಲಿ
1974 ರಿಂದ ರಾಜಕೀಯದಲ್ಲಿರುವ ವೀರಪ್ಪ ಮೊಯ್ಲಿಯವರು, 19 ನವೆಂಬರ್ 1992 ರಿಂದ 11 ಡಿಸೆಂಬರ್ 1994 ವರೆಗೆ ಕರ್ನಾಟಕದ 13ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ, ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರದ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು. 2009 ರಿಂದ 2019 ರವರೆಗೆ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದಾರೆ. ಕಾರ್ಪೊರೇಟ್ ವ್ಯವಹಾರಗಳ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಮತ್ತು ವಿದ್ಯುತ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಸದ್ಯ ಆಂಧ್ರಪ್ರದೇಶದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಆಪ್ತ ಸಲಹೆಗಾರರಾಗಿ ಗುರುತಿಸಿಕೊಂಡಿದ್ದಾರೆ. ರಾಜಕಾರಣದ ಜೊತೆಗೆ ಸಾಹಿತ್ಯ ವಲಯದಲ್ಲೂ ಗುರುತಿಸಿಕೊಂಡಿರುವ ವೀರಪ್ಪ ಮೊಯ್ಲಿ, ಹಲವು ಕೃತಿಗಳನ್ನು ಬರೆದಿದ್ದಾರೆ. 2020ರಲ್ಲಿ ಶ್ರೀ ಬಾಹುಬಲಿ ಅಹಿಂಸಾದಿಗ್ವಿಜಯ ಮಹಾಕಾವ್ಯಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೂ ಕೂಡ ಭಾಜನರಾಗಿದ್ದರು.
ಇನ್ನು, ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಸಮಯದಲ್ಲಿ ಒಬ್ಬೊಬ್ಬ ನಾಯಕರೇ ರಾಜಕೀಯದಿಂದ ದೂರ ಸರಿಯುತ್ತಿರುವುದು ಹೊಸಬರಿಗೆ ಅವಕಾಶವನ್ನೇನೋ ಕೊಡುತ್ತಿದ್ದೆ. ಆದರೆ, ಸಂಪೂರ್ಣವಾಗಿ ನಿಷ್ಕ್ರಿಯವಾದರೇ ಪಕ್ಷದ ಬುಡ ಕೂಡ ಅಲ್ಲಾಡದೇ ಇರದು. ಹಾಗಾಗಿಯೇ ಹೊಸ ಚಿಗುರು ಹಳೆ ಒಟ್ಟೊಟ್ಟಿಗೆ ಸಾಗಬೇಕಿದೆ.












Click it and Unblock the Notifications