ಭಕ್ತಿ, ಭಾವೈಕ್ಯತೆಯ ಪ್ರತೀಕ ಗಣೇಶ ಚತುರ್ಥಿ ಆರಂಭವಾದ ಕತೆಯ ಬಗ್ಗೆ ನಿಮಗೆಷ್ಟು ಗೊತ್ತು..?
ಚಿಕ್ಕಬಳ್ಳಾಪುರ ಸೆಪ್ಟೆಂಬರ್ 19: ಗೌರಿ ಗಣೇಶ ಹಬ್ಬ ಬಂದರೆ ಸಾಕು ದೇಶದಲ್ಲಿ ಸಡಗರ ಸಂಭ್ರಮದಿಂದ ಎಲ್ಲೆಡೆ ಗಣೇಶನ ವಿಗ್ರಹ ಪ್ರತಿಷ್ಠಾಪಿಸಿ ಸಾರ್ವಜನಿಕವಾಗಿ ಪೂಜೆ ಸಲ್ಲಿಸುತ್ತಾರೆ. ದೇಶ ವಿದೇಶಗಳಲ್ಲೂ ಜನಪ್ರಿಯಗೊಂಡಿರುವ ಗಣೇಶ ಚತುರ್ಥಿ ಉತ್ಸವವು ಇಂದು ಸಾಂಸ್ಕೃತಿಕ ಮತ್ತು ಧಾರ್ಮಿಕವಾಗಿ ಹೆಚ್ಚು ಮಹತ್ವ ನಡೆದಿದೆ.
ಗಣೇಶ ಚೌತಿ ಪವಿತ್ರವಾದ ಹಬ್ಬ. ವರಸಿದ್ಧಿ ವಿನಾಯಕನ ವ್ರತವನ್ನು ಆಚರಿಸುವ ದಿನ. ಭಾದ್ರಪದ ಮಾಸದ ಶುಕ್ಲ ಚತುರ್ಥಿಯು ಶ್ರೀಗಣೇಶನ ಜನ್ಮದಿನ ಎಂದು ಕರೆಯಲಾಗುತ್ತದೆ, ಹೀಗಾಗಿ ಇದು ಧಾರ್ಮಿಕ ಮಹತ್ವ ನಡೆದಿರುವ ವಿಶೇಷ ಪೂಜಾ ಹಬ್ಬವಾಗಿದೆ.

ಆಷಾಢ ಹೊರಳಿತೆಂದರೆ ಹಬ್ಬಗಳ ಸಾಲು ಸಾಲು ಆಚರಣೆಗಳು ಪ್ರಾರಂಭವಾಗುವವು. ಶ್ರೀ ಕೃಷ್ಣ ಜನ್ಮಾಷ್ಟಮಿ ಮುಗಿದು ಇದೀಗ ಗಣೇಶ ಚತುರ್ಥಿ ಆಗಮಿಸಿದೆ. ಮನೆ ಮನೆಗಳಲ್ಲಿ ತಳಿರು ತೋರಣದ ಕಟ್ಟಿ ಗೌರಿ ಗಣೇಶ ಇಡಲು ಜನರು ಸಿದ್ಧತೆ ನಡೆಸಿದರೆ, ವಿವಿಧ ಗಣೇಶ ಮಂಡಳಿಗಳು ಗಲ್ಲಿ ಗಲ್ಲಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಿದ್ಧತೆ ನಡೆಸಿದ್ದಾರೆ.
ಸಾಮಾನ್ಯವಾಗಿ ಇತರ ಹಬ್ಬಗಳ ಆಚರಣೆ ಹೆಚ್ಚೆಂದರೆ ಮೂರ್ನಾಲ್ಕು ದಿನಗಳಿದ್ದರೆ, ಈ ಗಣೇಶ ಹಬ್ಬ ಕಲವಡೆ ಬರೋಬ್ಬರಿ ಒಂದು ತಿಂಗಳವರೆಗೂ ಚಾಲ್ತಿಯಲ್ಲಿರುತ್ತದೆ. ಮಣ್ಣಿನ ಗಣಪನಿಗೆ ಅಲಂಕಾರ ಮಾಡಿ ಅದರ ಮುಂದೆ ನಮ್ಮೆಲ್ಲರ ತಾಪತ್ರಯಗಳನ್ನು ತಿಳಿಸಿ ಮನಸ್ಸು ಹಗುರಾಗಿ ಕೊನೆಗೆ ಆತನನ್ನು ನೀರಲ್ಲಿ ಲೀನಗೊಳಿಸುವುದು ಗಣೇಶ ಹಬ್ಬದ ವೈಶಿಷ್ಟ್ಯ.
ಭಕ್ತಿ ಹಾಗೂ ಭಾವೈಕ್ಯತೆ ಹಬ್ಬ ಲೋಕಮಾನ್ಯ ಬಾಲಗಂಗಾಧರ ತಿಲಕರ ಮುಂದಾಳತ್ವದಲ್ಲಿ ಪ್ರವರ್ಧಮಾನಕ್ಕೆ ಬಂದ ಗಣೇಶ ಹಬ್ಬವು ಇಂದು ಸಾರ್ವಜನಿಕರೆಲ್ಲರೂ ಒಗ್ಗೂಡಿ ಆಚರಿಸುವ ಅಚ್ಚುಮೆಚ್ಚಿನ ಹಬ್ಬವಾಗಿದೆ.

ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿದ ಗಣೇಶ ಹಬ್ಬ
ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶನ ಹಬ್ಬ ಕೇವಲ ಕುಟುಂಬದ ಆಚರಣೆಯಾಗಿತ್ತು. ಮನೆ-ಮನೆಗಳಲ್ಲಿ ಮಾತ್ರ ಆಚರಣೆಯಲ್ಲಿದ್ದ ಗಣೇಶೋತ್ಸವವನ್ನು ಲೋಕಮಾನ್ಯ ಬಾಲಗಂಗಾಧರ ತಿಲಕರು ಜನರಲ್ಲಿನ ಸತಂತ್ರ್ಯದ ಕಿಚ್ಚನ್ನು ಹೊರಗೆಡವುವ ಸಾಧನವಾಗಿ ಬಳಸಿಕೊಂಡರು.
1892ರಲ್ಲಿ ಮಹಾರಾಷ್ಟ್ರದಲ್ಲಿ ಬಾವ್ ಸಾಹಬ್ ಲಕ್ಷ್ಮಣ್ ಜವೇಲ್ ಅವರು ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡಿದರಾದರೂ, 1893ರಲ್ಲಿ ತಿಲಕರು ಅದಕ್ಕೆ ಸಂಪೂರ್ಣ ಸಾರ್ವಜನಿಕ ಸ್ವರೂಪ ನೀಡಿದರು. ತಮ್ಮ ಕಸರಿ ಪತ್ರಿಕೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಪರಿಕಲ್ಪನೆ ಕುರಿತು ಬರೆದಿದ್ದ ತಿಲಕರು, 1894ರಲ್ಲಿ ಪುಣೆಯ ಕಸರಿ ವಾಡದಲ್ಲಿ ಪ್ರಪ್ರಥದು ಸಾರ್ವಜನಿಕ ಗಣೇಶೋತ್ಸವವನ್ನು ಆರಂಭಿಸಿದರು.
ಗಣೇಶ ಚತುರ್ಥಿಯ ಸಾಂಸ್ಕೃತಿಕ ಮಹತ್ವವನ್ನು ಅರಿತಿದ್ದ ಲೋಕಮಾನ್ಯ ತಿಲಕರು, ಬ್ರಾಹ್ಮಣರು ಮತ್ತು ಬ್ರಹ್ಮಣೆತರರ ನಡುವಿನ ಅಂತರವನ್ನು ಸರಿಪಡಿಸಲು, ಅವರ ನಡುವೆ ಕೆಳಹಂತದಲ್ಲಿ ಐಕ್ಯತೆ ಮೂಡಿಸುವುದಕ್ಕೆ ಸೂಕ್ತ ಸಂದರ್ಭ ವಾಗಿ ಗಣೇಶೋತ್ಸವದ ಆಚರಣೆಯನ್ನು ರಾಷ್ಟ್ರೀಯ ಹಬ್ಬವಾಗಿ ಸಮರ್ಪಕವಾಗಿ ಬಳಸಿಕೊಂಡರು.
ಆರಂಭದಲ್ಲಿ ಇದು ಜಾತಿ-ಜಾತಿಗಳ ನಡುವಿನ ಕತೆಯ ಪ್ರತೀಕದಂತೆ ಕಂಡು ಬಂದರೂ ಕ್ರಮೇಣ, ಬ್ರಿಟೀಷ್ ದುರಾಡಳಿತದ ವಿರುದ್ಧ ತಿಲಕರು ಆರಂಭಿಸಿದ ಪರೋಕ್ಷ ಹೋರಾಟ ಎಂಬುದು ಅರ್ಥವಾಯಿತು. ತಿಲಕರು ಬ್ರಿಟಿಷರ ವಿರುದ್ಧ ಭಾರತದ ಪ್ರತಿಭಟನೆಗೆ ಗಣೇಶನನ್ನು ಕೇಂದ್ರ ಬಿಂದುವಾಗಿ ಬಳಸಿಕೊಂಡರು. ಏಕೆಂದರೆ ಗಣೇಶ ಪ್ರತಿಯೊಬ್ಬರ ಪಾಲಿಗೂ ದೇವಸ್ವರೂಪಿಯಾಗಿದ್ದ, ಮಹಾರಾಷ್ಟ್ರದಲ್ಲಿ ಪೇಶ್ವ ಆಡಳಿತದಲ್ಲಿ ಮುಖ್ಯ ಹಬ್ಬವಾಗಿದ್ದ ಗಣೇಶೋತ್ಸವ, ಸ್ವರಾಜ್ ಅಂದೋಲನದ ಸಂದರ್ಭದಲ್ಲಿ ಸಂಘಟಿತ ಸ್ವರೂಪ ಪಡೆಯಿತು.
ಗಣೇಶನ ಬೃಹತ್ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 10ನೇ ದಿನ ಎಲ್ಲ ವಿಗ್ರಹಗಳನ್ನು ವಿಸರ್ಜನೆ ಮಾಡುವ ಪ್ರಕ್ರಿಯೆಯನ್ನು ತಿಲಕರು ಆರಂಭಿಸಿದರು. ನೃತ್ಯ, ನಾಟಕಗಳು, ಕವಿತೆ ವಾಚನ, ಸಂಗೀತ ಗೋಷ್ಠಿಗಳು, ಚರ್ಚಾಗೋಷ್ಠಿಗಳು ಮುಂತಾದವುಗಳ ರೂಪದಲ್ಲಿ ಗಣೇಶೋತ್ಸವವು ಸಮುದಾಯದ ಪಾಲ್ಗೊಳ್ಳುವಿಕೆಗೆ ನೆರವಾಯಿತು, ಜನರ ಮೇಲೆ ನಿಯಂತ್ರಣ ಹೇರಲು ಬ್ರಿಟಿಷ್ ಆಡಳಿತವು ಸಾಮಾಜಿಕ ಮತ್ತು ರಾಜಕೀಯ ಸಭೆಗಳನ್ನು ಬಹಿಷ್ಕರಿಸಿದ ಸಂದರ್ಭದಲ್ಲಿ ಗಣೇಶೋತ್ಸವವು ಎಲ್ಲಾ ಜಾತಿ, ಸಮುದಾಯಗಳು ಒಂದು ಕಡೆ ಕಲಿಯುವ ತಾಣವಾಯಿತು.
ಬ್ರಿಟೀಷ್ ದಾಳಿಗೆ ಹೆದರಿ ಅರ್ಧ ದಿನಕ್ಕೇ ಗಣೇಶ ವಿಸರ್ಜನೆ
ಇನ್ನು ಬ್ರಿಟೀಷ್ ಕಾಲದ ಕಹಿ ನೆನಪುಗಳು ಹೇಗಿವೆ ಎಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ತಿಲಕರು ಆರಂಭಿಸಿದ್ದ ಗಣೇಶೋತ್ಸವವನ್ನು ಅದೇ ಕಾರಣದಿಂದಾಗಿ ಅರ್ಧ ದಿನಕ್ಕೆ ಮೊಟಕುಗೊಳಿಸಿದ ಘಟನೆಯೂ ಕೂಡ ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ.
ಅದೂ ಕೂಡ ನಮ್ಮ ಕರ್ನಾಟಕದಲ್ಲಿ, ಕರ್ನಾಟಕದ ಒಂದು ಮೂಲೆಯಲ್ಲಿ ಇಂದಿಗೂ ಗಣೇಶ ವಿಗ್ರಹವನ್ನು ಕೇವಲ ಅರ್ಧ ದಿನಕ್ಕೆ ವಿಸರ್ಜನೆ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಹುಬ್ಬಳ್ಳಿಯ ಗಣೇಶೋತ್ಸವ ಎಲ್ಲರಿಗೂ ಚಿರಪರಿಚಿತವೇ ತಿಂಗಳು ಗಟ್ಟಲೆ ಇಲ್ಲಿ ಗಣೇಶೋತ್ಸವ ನಡೆಯುತ್ತದೆ, ಆದರೆ ಇಂತಹ ಹುಳ್ಳಿಯಲ್ಲಿರುವ ಕಲಘಟಗಿ ತಾಲೂಕಿನ ಭೋಗೇನಾಗರ ಕೊಪ್ಪ ಗ್ರಾಮದಲ್ಲಿ ಮಾತ್ರ ಅರ್ಧದಿನ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.
ಭೋಗೇನಾಗರಕೂಪ್ಪದ ದೇಶಕುಲಕರ್ಣಿ ವಾಡೆಯಲ್ಲಿ ಗಣೇಶೋತ್ಸವದ ಬೆಳಗ್ಗೆ ಪ್ರತಿಷ್ಠಾಪನೆಗೊಳ್ಳುವ ಗಣೇಶನನ್ನು ಅದೇ ದಿನ ಮಧ್ಯಾಹ್ನ ವಿಸರ್ಜಸಲಾಗುತ್ತದೆ.
ಸ್ವಾತಂತ್ರ್ಯ ಪೂರ್ವದಲ್ಲಿ ಕಲಘಟಗಿ ಪ್ರದೇಶದಲ್ಲಿ ತೀವ್ರ ಬರಗಾಲ ಆವರಿಸಿದ್ದ ಸಂದರ್ಭದಲ್ಲಿ ಸ್ಥಳೀಯ ಬ್ರಿಟೀಷ್ ಆಡಳಿತ ಉಪ್ಪಿಗೂ ಅಧಿಕ ತೆರಿಗೆ ವಿಧಿಸಿತ್ತು. ಹೀಗಾಗಿ ಅಲ್ಲಿನ ಜನರು ಕಂದಾಯ ಪಾವತಿ ಮಾಡುವ ಸ್ಥಿತಿಯಲ್ಲಿರಲಿಲ್ಲ. ಇದೇ ವಿಚಾರವಾಗಿ ಭೋಗೇನಾಗರಕೊಪ್ಪದ ದೇಸಾಯಿ ಹಾಗೂ ಬ್ರಿಟೀಷರ ಮಧ್ಯೆ ಭಾರೀ ವಾಗ್ವಾದವಾಗಿತ್ತು. ಇದೇ ಸಂದರ್ಭದಲ್ಲಿ ಬ್ರಿಟೀಷ್ ಅಧಿಕಾರಿಯಾಗಿದ್ದ ಲಾರ್ಡ್ ಡಾಲ್ ಹೌಸಿ ಜಾರಿಗೆ ತಂದ ದತ್ತು ಮಕ್ಕಳಿಗೆ ಹಕ್ಕಿಲ್ಲ ಕಾಯ್ದೆಗೆ ದೇಸಾಯಿ ಸಂಸ್ಥಾನವನ್ನು ಒಳಪಡಿಸಲು ಮುಂದಾದಾಗ ವಿರೂಪಾಕ್ಷ ದೇಸಾಯಿ ಎಂಬುವವರು ಬ್ರಿಟೀಷರ ವಿರುದ್ಧ ಚಳುವಳಿ ಆರಂಭಿಸಿದರು.
ಅದೇ ಸಂದರ್ಭದಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದ ಲೋಕಮಾನ್ಯ ಬಾಲಗಂಗಾಧರ ತಿಲಕರು ಗಣೇಶ ಚತುರ್ಥಿ ಮುಂದಿಟ್ಟುಕೊಂಡು ಜನರಲ್ಲಿ ಐಕ್ಯತೆ ಮೂಡಿಸುವ ನಿಟ್ಟಿನಲ್ಲಿ ಹೋರಾಡುತ್ತಿದ್ದರು. ಅವರ ಕರೆಗೆ ಅನುಗುಣವಾಗಿ ಮೊದಲ ವರ್ಷದ ಆಚರಣೆ 5 ದಿನ ವಿಜೃಂಭಣೆ ಯಿಂದ ನಡೆದಿತ್ತು, ಜನರು ಕೂಡ ಒಗ್ಗಟ್ಟಿನ ಮಂತ್ರ ಜಪಿಸುವುದರೊಂದಿಗೆ ಬ್ರಿಟೀಷ್ ರ ದುರಾಡಳಿತದ ವಿರುದ್ಧ ಕ್ರಮೇಣ ದಂಗೆ ಎದ್ದಿದ್ದರು.
ಏಕತೆಯ ಅರಿವು ಮೂಡಿಸಿದ ಗಣೇಶ ಹಬ್ಬ
ಚದುರಿ ಹೋಗಿದ್ದ ಅಂದಿನ ಅನಕ್ಷರಸ್ಥ ಸಮಾಜದಲ್ಲಿ ಸಾತಂತ್ರ್ಯ ಹೋರಾಟಕ್ಕಾಗಿ ಜನರನ್ನು ಒಂದೇ ವೇದಿಕೆಯಲ್ಲಿ ಎಕೀಕರಣಗೊಳಿಸಲು ತಿಲಕರು ಆಯ್ಕೆ ಮಾಡಿದ್ದೇ ಈ ಗಣೇಶ ಹಬ್ಬವನ್ನು, ಜನರೂ ತಿಲಕರ ಕರೆಗೆ ಜಾತಿ-ಮತ ಬೇದವಿಲ್ಲದೆ ಬಹುಬೇಗ ಸ್ಪಂದಿಸಿದರು. ದೇಶಾದ್ಯಂತ ಭಕ್ತಿಯ ಪ್ರವಾಹ ಹರಿಯುವುದರೊಂದಿಗೆ ಬ್ರಿಟಿಷರಿಗೆ ನಮ್ಮ ಏಕತೆಯ ಬಿಸಿಯನ್ನೂ ಮುಟ್ಟವಂತೆ ಮಾಡಿತು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications