ಕಸ ವಿಲೇವಾರಿ ಸಮಸ್ಯೆ: ಅಂಬೇಡ್ಕರ್ ನಗರದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ
ಚಿಕ್ಕಬಳ್ಳಾಪುರ ನಗರದ 30ನೇ ವಾರ್ಡ್ ಅಂಬೇಡ್ಕರ್ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಕ್ರಮ ಕೈಗೊಳ್ಳುವಲ್ಲಿ ನಗರ ಸಭೆ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ನಿರ್ಲಕ್ಷ್ಯ ತೋರುತ್ತಿದ್ದು, ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದೆ.
ಚಿಕ್ಕಬಳ್ಳಾಪುರ, ಫೆಬ್ರವರಿ 3: ಚಿಕ್ಕಬಳ್ಳಾಪುರ ನಗರದ 30ನೇ ವಾರ್ಡ್ ಅಂಬೇಡ್ಕರ್ ನಗರದಲ್ಲಿ ಕಸ ವಿಲೇವಾರಿ ವ್ಯವಸ್ಥೆ ಹಳಿ ತಪ್ಪಿದ್ದು ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಅಂಬೇಡ್ಕರ್ ನಗರದಲ್ಲಿ ಆರ್ಥಿಕವಾಗಿ ಹಿಂದುಳಿದ ಕೆಲವು ಕುಟುಂಬಳು ವಾಸವಿದ್ದು, ಅಧಿಕಾರಿಗಳು ಸಕಾಲದಲ್ಲಿ ಕಸ ವಿಲೇವಾರಿ ಮಾಡುತ್ತಿಲ್ಲ. ಹೀಗಾಗಿ ನಿವಾಸಿಗಳು ಕಸವನ್ನು ಎಲ್ಲಂದರಲ್ಲಿ ರಾಶಿ ಹಾಕುತ್ತಿದ್ದಾರೆ. ಇನ್ನು ಅಂಗಡಿ, ಹೋಟೆಲ್ ಮಾಲೀಕರು ವೈದ್ಯನಿಕವಾಗಿ ಕಸ ವಿಲೇವಾರಿ ಮಾಡುತ್ತಿಲ್ಲ. ತಂದು ಚರಂಡಿ ಸುರಿಯುತ್ತಿದ್ದಾರೆ ಎಂದು ಬಡಾವಣೆಯ ಸ್ಥಳೀಯ ವೆಂಕಟೇಶ್ ಆರೋಪಿಸಿದ್ದಾರೆ.
ಇನ್ನು ನಗರಸಭೆಯ ಪೌರ ಕಾರರ್ಮಿಕರು ಪ್ರತಿನಿತ್ಯ ಮನೆ ಮನೆಗೆ ಭೇಟಿ ನೀಡಿ ಕಸ ಸಂಗ್ರಹ ಮಾಡುವ ಪದ್ದತಿ ಇಲ್ಲಿ ಮರೀಚಿಕೆಯಾಗಿದೆ. ಇದರಿಂದಾಗಿ ನಿವಾಸಿಗಳು ಚರಂಡಿ, ರಸ್ತೆ ಬದಿ, ಖಾಲಿ ನಿವೇಶನಗಳಿಗೆ ಎಸೆಯುತ್ತಿದ್ದಾರೆ. ಕಸವನ್ನು ಚರಂಡಿಗೆ ಹಾಕುವುದರಿಂದ ಕೊಳಚೆ ನೀರು ಸರಾಗವಾಗಿ ಹರಿಯದೆ ಚರಂಡಿಯಲ್ಲಿ ಶೇಖರಣೆಯಾಗುತ್ತಿದೆ. ಇದರಿಂದಾಗಿ ದುರ್ವಾಸನೆ ಬರುತ್ತಿದ್ದು, ಸೊಳ್ಳೆ, ನೋಣಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳ ಭೀತಿ ಮನೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಡಾವಣೆಯು ಅತ್ಯಂತ ಹಿಂದುಳಿದಿದೆ. ಕುಡಿಯುವ ನೀರು, ಸ್ವಚ್ಚತೆ, ಚರಂಡಿ ವ್ಯವಸ್ಥೆಯಿಲ್ಲ. ನಿವಾಸಿಗಳು ನಿಗದಿತ ಸ್ಥಳದಲ್ಲಿ ಕಸ ಹಾಕಬೇಕು. ಇಲ್ಲದಿದ್ದರೆ ಪೌರಕಾರ್ಮಿಕರಿಗೆ ನೀಡಬೇಕು ಎಂದು ನಗರಸಭೆಯು ಸೂಚನೆ ನೀಡಿದೆ. ಆದರೆ ಪೌರಕಾರ್ಮಿಕರು ಮನೆ ಮನೆಗೆ ಸಕಾಲದಲ್ಲಿ ಬಾರದೆ ಇರುವುದರಿಂದ ಸ್ವಚ್ಛತೆ ಮರೀಚಿಕೆಯಾಗಿದೆ ಎಂದು ಬಡಾವಣೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಕಸದ ಸಮಸ್ಯೆ ಬಗ್ಗೆ ಸ್ಥಳೀಯ ನಗರಸಭೆ ಸದಸ್ಯರಿಗೆ, ನಗರಸಭೆ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ರೀತಿ ಕ್ರಮಕೈಗೊಂಡಿಲ್ಲ. ನಾಯಿ, ಹಂದಿ, ಹಸುಗಳ ಹಾವಳಿ ಹೆಚ್ಚಾಗಿದ್ದು ಮಕ್ಕಳು, ವೃದ್ಧರು ರಸ್ತೆಯಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಇದರಿಂದಾಗಿ ನಗರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆಯನ್ನು ಬಗೆಹರಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications