ಫೇಸ್‌ಬುಕ್‌ನಲ್ಲಿ ಸೆಲ್ಪೀ ವಿಡಿಯೋ ಹಾಕಿ ಭಗ್ನ ಪ್ರೇಮಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ, ಜೂನ್ 14 : 4 ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗಿ ಕೈ ಕೊಟ್ಟಿದ್ದರಿಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಯುವಕ ಸೆಲ್ಫಿ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಂಜಿತ್ ಕುಮಾರ್ (25) ಎಂದು ಗುರುತಿಸಲಾಗಿದೆ. ರಂಜಿತ್ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಿವಾಸಿ.

ರಂಜಿತ್ ದೂರದ ಸಂಬಂಧಿ ಹಿಂದೂಪುರ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಯುವತಿ ಕೆಲವು ದಿನಗಳಿಂದ ಬೇರೆ ಹುಡುಗನನ್ನು ಪ್ರೀತಿಸಲು ಆರಂಭಿಸಿದ್ದಳು. ಆತನ ಜೊತೆ ತೆಗೆಸಿಕೊಂಡ ಫೋಟೋಗಳು ರಂಜಿತ್‌ಗೆ ಸಿಕ್ಕಿದ್ದವು.

Gowribidanur Youth commits suicide over failed love affair

ಇದರಿಂದ ಮನನೊಂದ ರಂಜಿತ್ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿದ್ದಾನೆ. ನಂತರ ಪ್ರೇಯಸಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಸೆಲ್ಫಿ ವಿಡಿಯೋ ಮಾಡಿ, ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಇದನ್ನು ಶಾಸಕರಿಗೆ ತೋರಿಸಿ ಎಂದು ಸಹ ಆತ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ.

ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೌರಿ ಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಿಯತಮೆ ಹಾಗೂ ಆಕೆಯ ತಂದೆ, ಅಣ್ಣನ ವಿರುದ್ಧ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+