• search
 • Live TV
ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಮೇಶ್‌ಕುಮಾರ್ ಕೋಚಿಮುಲ್ ವಿಭಜನೆ ತಡೆದಿದ್ದರು: ಸಚಿವ ಕೆ. ಸುಧಾಕರ್ ಆರೋಪ

By ಚಿಕ್ಕಬಳ್ಳಾಪುರ ಪ್ರತಿನಿಧಿ
|
Google Oneindia Kannada News

ಚಿಕ್ಕಬಳ್ಳಾಪುರ, ನವೆಂಬರ್ 9: ಕೋಚಿಮುಲ್ ವಿಭಜನೆಗೆ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು, ಸಚಿವ ಕೆ. ಸುಧಾಕರ್ ಹಾಗೂ ಸಿಎಂ ಬೊಮ್ಮಾಯಿ ಭಾವಚಿತ್ರಗಳಿಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಾಚರಣೆ ಮಾಡಿದರು.

ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿರುವ ಮೆಗಾ ಡೈರಿ ಮುಂಭಾಗ ಸಚಿವ ಸುಧಾಕರ್, ಸಿಎಂ ಬೊಮ್ಮಾಯಿ, ಸಚಿವ ಸೋಮಶೇಖರ್ ಭಾವಚಿತ್ರಗಳಿಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆ ರಚನೆಯಾಗಿ 15 ವರ್ಷಗಳಾದರೂ, ಪ್ರತ್ಯೇಕ ಹಾಲು ಒಕ್ಕೂಟ ಅಸ್ತಿತ್ವಕ್ಕೆ ಬಂದಿರಲಿಲ್ಲ.

ಇನ್ನು ಇದರ ಕುರಿತು ಆರೋಗ್ಯ ಸಚಿವ ಕೆ. ಸುಧಾಕರ್ ಹಾಗೂ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ನಡುವೆ ರಾಜಕೀಯ ವಾಗ್ವಾದಕ್ಕೆ ತಿರುಗಿತ್ತು. ಸದ್ಯ ಇಂದು ಸಚಿವ ಸಂಪುಟದಲ್ಲಿ ಕೋಚಿಮುಲ್ ವಿಭಜನೆಗೆ ಅನುಮೋದನೆ ನೀಡಿದ್ದು, ನಂದಿ ಕ್ರಾಸ್ ಬಳಿ ಇರುವ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ಎದುರು ಬಿಜೆಪಿ ಕಾರ್ಯಕರ್ಯತರು ವಿಜಯೋತ್ಸವ ಆಚರಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೋಚಿಮುಲ್ ವಿಭಜನೆಯನ್ನು ತಡೆದಿದ್ದರು. ಎರಡು ಜಿಲ್ಲೆಗಳನ್ನು ತನ್ನ ಕಪಿ ಮುಷ್ಠಿಯಲ್ಲಿ ಇಟ್ಟುಕೊಂಡು ಲಾಭಮಾಡಿಕೊಳ್ಳುವ ಉದ್ದೇಶದಿಂದ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷಗಳಾಗಿದೆ. ಸಚಿವ ಸಂಪುಟದಲ್ಲಿ ಕೊಚಿಮುಲ್ ವಿಭಜನೆಗೆ ಅನುಮೋದನೆ ಸಿಕ್ಕಿದೆ. ಆದರೆ ಈಗ ಚಕಾರ ಎತ್ತುತ್ತಿದ್ದಾರೆ ಎಂದು ಆರೋಪಿಸಿದರು.

ರಮೇಶ್ ಕುಮಾರ್ ಶಕುನಿ ಬುದ್ದಿಯನ್ನು ತೋರುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಶಕುನಿ ಬುದ್ದಿಯನ್ನು ಹೊಂದಿರುವ ಶಾಸಕ ಶಿವಶಂಕರ್ ರೆಡ್ಡಿ ತಕರಾರು ಮಾಡುತ್ತಿದ್ದಾರೆ. ಅವರು ಸಚಿವರಿದ್ದಾಗ ಅವರೇ ವಿಭಜನೆಗೆ ಅನುಮೋದನೆ ನೀಡಿದ್ದರು. ಈಗ ಬೇಡ ಎನ್ನುತ್ತಿದ್ದಾರೆ ಎಂದು ಕಿಡಿಕಾರಿದರು.

Chikkaballapur: Health Minister K Sudhakar Outraged Against Former Speaker Ramesh Kumar

ಇವತ್ತು ಸುಧಾಕರ್‌ಗೆ ಎಲ್ಲಿ ಹೆಸರು ಬರುತ್ತದೋ ಎಂಬ ಭಯದಿಂದ ಈ ರೀತಿ ಮಾಡುತ್ತಿದ್ದಾರೆ. ಎರಡು ಜಿಲ್ಲೆಗಳನ್ನು ತನ್ನ ಕಪಿ ಮುಷ್ಠಿಯಿಂದ ಇಟ್ಟುಕೊಳ್ಳಲು ರಮೇಶ್ ಕುಮಾರ್ ಮಾಡುತ್ತಿದ್ದಾರೆ. ಈಗಾಗಲೇ ಒಂದು ವಿಕೆಟ್ ಹೋಗಿದೆ. ಶ್ರೀನಿವಾಸಗೌಡರು ಒಂದು ಸಾರಿ ಮೋಸ ಹೋಗಿದ್ದಾರೆ. ಮತ್ತೆ ಈಗ ನಂಬುತ್ತಿದ್ದಾರೆ ಎಂದರು.

ಇನ್ನು ಕೋಚಿಮುಲ್‌ನಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಇದರ ಬಗ್ಗೆ ತನಿಖೆ ನಡೆದಿದೆ. ನಾನು ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ತನಿಖೆ ನಡೆಸಿ ಶಿಕ್ಷೆ ನೀಡಲಿದೆ. ಕಾನೂನು ಬಳಿ ಹೋಗಿ ತನಿಖೆಗೆ ಸ್ಟೇ ತರುತ್ತಿದ್ದಾರೆ. ಇದರಿಂದ ಗೊತ್ತಾಗಲಿದೆ ಎಷ್ಟು ಭ್ರಷ್ಟಾಚಾರ ನಡೆದಿದೆ ಎಂದು. ಇನ್ನೂ 100ಕ್ಕೆ 100ರಷ್ಟು ಇದರಲ್ಲಿ ರಮೇಶ್ ಕುಮಾರ್ ಭಾಗಿಯಾಗಿದ್ದಾರೆ ಎಂದು ಸಚಿವ ಕೆ. ಸುಧಾಕರ್ ಆರೋಪಿಸಿದರು.

ಎರಡು ಜಿಲ್ಲೆಗಳನ್ನು ತಮ್ಮ ಕಪಿ ಮುಷ್ಠಿಯಲ್ಲಿ ಇಟ್ಟುಕೊಳ್ಳುವ ಸಲುವಾಗಿ ಕೆ.ಎಚ್. ಮುನಿಯಪ್ಪನವರನ್ನು ಸೋಲಿಸಿದರು. ಅವರದೇ ಪಕ್ಷ ಇದ್ದರೂ ಯಾಕೆ ಸೋಲಿಸಿದರು ಎಂದು ಸುಧಾಕರ್ ಪ್ರಶ್ನಿಸಿದರು.

ಕೋಚಿಮುಲ್ ವಿಭಜನೆಗೆ ಸಚಿವ ಸಂಪುಟ ಅಸ್ತು
ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವನ್ನು ಬೇರ್ಪಡಿಸಿ ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಒಕ್ಕೂಟ ದೊರಕಿಸಿಕೊಡುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಯಶಸ್ವಿಯಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋಚಿಮುಲ್ ಅನ್ನು ಪ್ರತ್ಯೇಕಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಸಹಕಾರಿ ಹಾಲು ಒಕ್ಕೂಟ ಮಂಜೂರು ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಸಚಿವ ಡಾ.ಕೆ. ಸುಧಾಕರ್ ಪ್ರಯತ್ನದಿಂದ ಸಚಿವ ಸಂಪುಟದ ಮನವೊಲಿಸುವಲ್ಲಿ ಸಾಧ್ಯವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹೈನುಗಾರರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ರಾಜ್ಯ ಸರ್ಕಾರವು ಜಿಲ್ಲೆಯ ರೈತರ ಹಲವು ವರ್ಷಗಳ ಬೇಡಿಕೆಗೆ ಮನ್ನಣೆ ನೀಡಿದ್ದು, ಜಿಲ್ಲೆಯ ರೈತರ ಬಹುವರ್ಷಗಳ ಬೇಡಿಕೆಗೆ ಸಚಿವ ಸಂಪುಟ ಅಸ್ತು ಎಂದಿದೆ.

ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 14 ವರ್ಷಗಳು ಕಳೆದರೂ, ಕೋಚಿಮುಲ್ ಪ್ರತ್ಯೇಕವಾಗಿರಲಿಲ್ಲ. ರೈತರು ಹಾಗೂ ಹಾಲು ಉತ್ಪಾದಕರು ಯಾವುದೇ ಸಮಸ್ಯೆಗಳಿದ್ದರೂ ಕೋಲಾರಕ್ಕೆ ಪ್ರಯಾಣಿಸಬೇಕಿತ್ತು. ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿರುವುದರಿಂದ ಪ್ರತ್ಯೇಕವಾದ ಒಕ್ಕೂಟ, ಆಡಳಿತ ಮಂಡಳಿಯ ಅಗತ್ಯವಿತ್ತು. ಇದಕ್ಕಾಗಿ ಕೋಚಿಮುಲ್ ವಿಭಜಿಸಬೇಕು ಎಂದು ಸಚಿವ ಡಾ.ಕೆ. ಸುಧಾಕರ್ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದರು.

   Team India ಹೊಸ ರೂಪ ಪಡೆದುಕೊಂಡಿದೆ | Oneindia Kannada
   English summary
   Chikkaballapur district Incharge and Health Minister K Sudhakar outraged against former Speaker Ramesh Kumar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X