ಚಿಕ್ಕಬಳ್ಳಾಪುರದಲ್ಲಿ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆರೋಪಿ ಬಂಧನ
ಚಿಕ್ಕಬಳ್ಳಾಪುರ, ನವೆಂಬರ್ 12: ಚಿಕ್ಕಬಳ್ಳಾಪುರ ನಗರಸಭೆಯ ಮೀನು- ಮಾಂಸ ಮಾರಾಟ ಮಳಿಗೆಗೆಳ ಸಂಕೀರ್ಣದ ಬಳಿ 40 ವರ್ಷದ ಅಪರಿಚಿತ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಮಳಿಗೆಗೆಳ ಸಂಕೀರ್ಣದ ಬಳಿ ಭಿಕ್ಷುಕಿ ಮಲಗಿದ್ದ ವೇಳೆ ಮಾರುಕಟ್ಟೆ ಸಂಕೀರ್ಣದಲ್ಲಿ ಚಕ್ಕೆ, ಲವಂಗ ವ್ಯಾಪಾರ ಬಂಡಿಯನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಅಬ್ದುಲ್ಲಾ ಎಂಬಾತ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕಾಮುಕ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ ಮಾರುಕಟ್ಟೆ ಬಳಿ ಗುರುವಾರ ತಡರಾತ್ರಿ ಬಿಕ್ಷುಕಿ ಮಲಗಿದ್ದ ವೇಳೆ ತಳ್ಳುಗಾಡಿಯಲ್ಲಿ ಮಸಾಲೆ ಪದಾರ್ಥ ಮಾರಾಟ ಮಾಡುತ್ತಿದ್ದ ಅಬ್ದುಲ್ಲಾ, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ನಿದ್ರೆಯಲ್ಲಿದ್ದ ವೇಳೆ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಎಚ್ಚರಗೊಂಡ ಮಹಿಳೆ ವಿರೋಧ ವ್ಯಕ್ತಪಡಿಸಿದ್ದು, ಗಂಭೀರವಾಗಿ ಗಾಯಗೊಳಿಸಿ ಅತ್ಯಾಚಾರ ಮಾಡಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಭಿಕ್ಷುಕಿ ಸಾವನ್ನಪ್ಪಿದ್ದಾಳೆ.
ಇನ್ನು ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಸಿಕೊಂಡಿದ್ದಾರೆ.