Heavy Rain: ಭಾರಿ ಮಳೆ ಎಚ್ಚರಿಕೆ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತ ಪರಿಣಾಮದಿಂದ ತಮಿಳುನಾಡು, ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಕರ್ನಾಟಕದ ಮೇಲೂ ಪರಿಣಾಮ ಬೀರಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸೋಮವಾರ ನೀಡುವ ರಜೆಯನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

holiday declared for schools and colleges chikkaballapura district heay rain

ಫೆಂಗಲ್ ಚಂಡಮಾರುತದ ಕಾರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಮಳೆ ಮತ್ತು ಹೆಚ್ಚಿನ ಚಳಿ ಇರುವ ಕಾರಣ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 2, ಸೋಮವಾರದಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲೂ ರಜೆ ಘೋಷಣೆ

ಚಿಕ್ಕಬಳ್ಳಾಪುರ ಮಾತ್ರವಲ್ಲದೆ ಕೋಲಾರ ಜಿಲ್ಲೆಯಲ್ಲೂ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಉಳಿದ ಜಿಲ್ಲೆಯ ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಜೆ ನೀಡುವ ಬಗ್ಗೆ ನಿರ್ಧಾರ ಮಾಡಲಿದ್ದಾರೆ.

ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಭಾನುವಾರ ಬೆಂಗಳೂರು, ಕೋಲಾರ, ತುಮಕೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು ಇಡೀ ದಿನ ಜಿಟಿ ಜಿಟಿ ಮಳೆಯಾಗಿದೆ. ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಮಳೆ ಬಿರುಸು ಪಡೆದುಕೊಂಡಿತ್ತು, ತಡರಾತ್ರಿ ವೇಳೆಗೆ ಮಳೆ ನಿಂತಿದ್ದರೂ, ಚಳಿ ಹೆಚ್ಚಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+