ಝಿಕಾ ವೈರಸ್ ಬಗ್ಗೆ ಇರಲಿ ಎಚ್ಚರ: ಸೋಂಕು ಹೇಗೆ ಹರಡುತ್ತದೆ..? ಲಕ್ಷಣಗಳೇನು..? ಚಿಕಿತ್ಸೆ ಏನು..?
ಚಿಕ್ಕಬಳ್ಳಾಪುರ, ಅಕ್ಟೋಬರ್ 27: ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಘೀ, ಚಿಕೂನ್ ಗುನ್ಯಾ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು, ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ . ಸ್ವಚ್ಛ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿವೆ.
ಜ್ವರ ತಲೆನೋವು , ಕಣ್ಣು ಕೆಂಪಾಗುವಿಕೆ. ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಝಿಕಾ ವೈರಸ್‌ನ ಪ್ರಮುಖ ಲಕ್ಷಣಗಳಾಗಿದ್ದು, ಇತರೆ ಲಕ್ಷಣಗಳು ಸಹ ಕಾಣಸಿಕೊಳ್ಳುತ್ತದೆ. ಬಹುತೇಕ ಜಿಕಾ ಸೋಂಕಿತರಿಗೆ ರೋಗದ ಲಕ್ಷಣಗಳು ಕಂಡುಬರುವುದಿಲ್ಲ. ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.

ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡು ಬರಬಹುದು. ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.
ಝಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮ
ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು, ಸಾಕಷ್ಟು ವಿಶ್ರಾಂತಿ ಪಡೆಯವುದು ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾಥಗಳನ್ನು ಬಳಸಬಹುದು.
ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ಝಿಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸಬೇಕು.
ಈಡಿಸ್ ಸೊಳ್ಳೆಗಳು ಕಚ್ಚುವಿಕೆಯಿಂದ ಪಾರಾಗಲು ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು, ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಚವಾಗಿಡುವುದು, ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು, ಸೊಳ್ಳೆ ಪರದೆಗಳನ್ನು ಉಪಯೋಗಿಸಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications